ಓರ್ವ ಸಂಸದೆಯ ಧ್ವನಿ ಹತ್ತಿಕ್ಕಿ ಬಿಜೆಪಿ ಭಾರೀ ಬೆಲೆ ತೆತ್ತಿದೆ, 63 ಸ್ಥಾನ ಕಳೆದುಕೊಂಡಿದೆ: ಮಹುವಾ ಮೊಯಿತ್ರಾ

Date:

ಕಳೆದ ಲೋಕಸಭೆ ಅಧಿವೇಶನದಲ್ಲಿ ತನ್ನನ್ನು ಉಚ್ಚಾಟಿಸಿದ್ದಕ್ಕಾಗಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ “ಓರ್ವ ಸಂಸದೆಯ ಧ್ವನಿ ಹತ್ತಿಕ್ಕಿ ಬಿಜೆಪಿ ಭಾರೀ ಬೆಲೆ ತೆತ್ತಿದೆ, 63 ಸ್ಥಾನ ಕಳೆದುಕೊಂಡಿದೆ” ಎಂದು ಕುಟುಕಿದರು.

- Advertisement -

ಸಂಸತ್ತಿನ ಜಂಟಿ ಅಧಿವೇಶನದಲ್ಲಿ ಮಾತನಾಡಿದ ಅವರು, “ಸರ್ಕಾರದ ಭಾಷಣ ಬರಹಗಾರರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಮುಜುಗರಕ್ಕೀಡುಮಾಡಿದ್ದಾರೆ. ಆಡಳಿತ ಪಕ್ಷಕ್ಕೆ ಲೋಕಸಭೆಯಲ್ಲಿ ಬಹುಮತ ಇಲ್ಲದಿದ್ದರೂ ಕೂಡಾ ಭಾಷಣದಲ್ಲಿ ಸ್ಪಷ್ಟವಾದ ಸ್ಥಿರ ಸರ್ಕಾರಕ್ಕಾಗಿ ಬಹುಮತದ ಜನಾದೇಶವಾಗಿದೆ ಎಂದು ಬರೆಯಲಾಗಿದೆ” ಎಂದು ರಾಷ್ಟ್ರಪತಿ ಭಾಷಣವನ್ನು ಟೀಕಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇದನ್ನು ಓದಿದ್ದೀರಾ?  ಸಂಸತ್‌ನಿಂದ ಉಚ್ಛಾಟನೆ | ನನ್ನ ಗೆಲುವು ಉತ್ತರ ನೀಡುತ್ತದೆ: ಮಹುವಾ ಮೊಯಿತ್ರಾ

“ಇದು ಸ್ಥಿರ ಸರಕಾರವಲ್ಲ. ಇದು ಯು-ಟರ್ನ್‌ಗಳ ಇತಿಹಾಸ ಹೊಂದಿರುವ ಬಹು ಮಿತ್ರರಾಷ್ಟ್ರಗಳ ಮೇಲೆ ಅವಲಂಬಿತವಾಗಿದೆ. 272 ಸ್ಥಾನ ಪಡೆಯುವುದಕ್ಕೆ ಬಿಜೆಪಿಗೆ 32 ಸ್ಥಾನ ಕಡಿಮೆಯಾಗಿದೆ. ಈ ಬಾರಿ 234 ಯೋಧರು ದೃಢವಾಗಿ ಒಗ್ಗೂಡಿದ್ದಾರೆ. ಈ ಬಾಗಿಲುಗಳ ಮೂಲಕ ನಡೆಯಲು ನಾವು ಬೆಂಕಿಯನ್ನು ದಾಟಿ ಬಂದಿದ್ದೇವೆ. ಹಾಗಾಗಿ ಈ ಬಾರಿ ನಮ್ಮನ್ನು ಮೌನವಾಗಿಸಲು ಸಾಧ್ಯವಿಲ್ಲ” ಎಂದು ಹೇಳಿದರು.

ನಗದು-ಪ್ರಶ್ನೆ ಆರೋಪದ ಮೇಲೆ 17ನೇ ಲೋಕಸಭೆಯಿಂದ ತನ್ನ ಉಚ್ಚಾಟನೆಯನ್ನು ಉಲ್ಲೇಖಿಸಿ ಮಾತನಾಡಿದ ಮಹುವಾ, “ಕಳೆದ ಬಾರಿ ನಾನು ಇಲ್ಲಿ ಮಾತನಾಡಲು ಎದ್ದಾಗ, ನನಗೆ ಮಾತನಾಡಲು ಅವಕಾಶ ನೀಡಲಿಲ್ಲ. ಓರ್ವ ಸಂಸದೆಯ ಧ್ವನಿಯನ್ನು ಹತ್ತಿಕ್ಕಿ ಆಡಳಿತ ಪಕ್ಷ (ಬಿಜೆಪಿ) ಭಾರೀ ಬೆಲೆ ತೆತ್ತಿದೆ. ನೀವು ನನ್ನನ್ನು ಕೆಳಗಿಳಿಸಲು ಪ್ರಯತ್ನದಲ್ಲಿರುವಾಗ ಜನರು ನಿಮ್ಮ 63 ಸಂಸದರನ್ನು ಶಾಶ್ವತವಾಗಿ ಕೆಳಗಿಳಿಸಿದರು” ಟ್ಯಾಂಗ್ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಾಹ್‌ EC! 13 ಕೋಟಿ ಜನರನ್ನ ಹೊರದಬ್ಬಿ, ಈಗ ಮರುನೋಂದಣಿಯ ಕಸರತ್ತು

ರಾಷ್ಟ್ರವ್ಯಾಪಿ 'ವಿಶೇಷ ತೀವ್ರ ಪರಿಷ್ಕರಣೆ' (SIR) ಎನ್ನುವ ಭೀಕರ ಆಪರೇಷನ್ ನಡೆಸಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...