‘ನನ್ನನ್ನೂ ಬಂಧಿಸಿ’ ಎನ್ನುತ್ತಿರುವ ಬಿಜೆಪಿಗರು; ಬಂಧನಕ್ಕೆ ಸೂಕ್ತ ಕಾರಣಗಳನ್ನಿಟ್ಟ ಕಾಂಗ್ರೆಸ್‌!

Date:

1992ರಲ್ಲಿ ಹುಬ್ಬಳ್ಳಿಯಲ್ಲಿ ನಡೆದಿದ್ದ ಗಲಭೆ ಪ್ರಕರಣದಲ್ಲಿ ಆರೋಪಿ, ಕರಸೇವಕ ಶ್ರೀಕಾಂತ್ ಪೂಜಾರಿಯನ್ನು ಪೊಲೀಸರು ಬಂಧಿಸಿದ್ದಾರೆ. ಆತನ ಬಿಡುಗಡೆಗೆ ಒತ್ತಾಯಿಸಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಗುರುವಾರ, ಬಿಜೆಪಿ ನಾಯಕರು ‘ನಾನೂ ಕರಸೇವಕ, ನನ್ನನ್ನೂ ಬಂಧಿಸಿ’ ಎಂಬ ಪೋಸ್ಟರ್‌ ಹಿಡಿದು ಪ್ರತಿಭಟನಾ ಅಭಿಯಾನ ನಡೆಸಿದ್ದಾರೆ. ಬಿಜೆಪಿಗರ ಪ್ರತಿಭಟನೆಗೆ ಕುಹಕವಾಡಿರುವ ಕಾಂಗ್ರೆಸ್‌, ಬಿಜೆಪಿ ನಾಯಕರ ಮೇಲಿರುವ ಆರೋಪಿಗಳನ್ನು ಪೋಸ್ಟರ್‌ನಲ್ಲಿ ಎಡಿಟ್‌ ಮಾಡಿ ಹಂಚಿಕೊಂಡಿದೆ.

- Advertisement -

ಬಿಜೆಪಿ ನಾಯಕರ ವಿರುದ್ಧ ವ್ಯಂಗ್ಯವಾಡಿ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್‌, “ಬಿಜೆಪಿಗರೆಲ್ಲರೂ ‘ನನ್ನನ್ನೂ ಬಂಧಿಸಿ’ ಎಂದು ಒತ್ತಾಯಿಸುತ್ತಿರುವುದು ತಾವು ಮಾಡಿದ ಅಕ್ರಮಗಳ, ಹಗರಣಗಳ ಪ್ರಾಯಶ್ಚಿತ್ತಕ್ಕಾಗಿಯೇ? ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಈ ಪೋಸ್ಟರ್ ಹಿಡಿದು ಕುಳಿತರೆ ಸೂಕ್ತ” ಎಂದು ಹೇಳಿದೆ. ವಿಜಯೇಂದ್ರ ಅವರು ಹಿಡಿದಿದ್ದ ಪೋಸ್ಟರ್‌ ಅನ್ನು ಎಡಿಟ್ ಮಾಡಿ, “ನಾನು ಆರ್‌ಟಿಜಿಎಸ್‌ ಮೂಲಕ ಲಂಚ ಪಡೆದಿದ್ದೇನೆ. 40,000 ಕೋಟಿ ರೂ. ಅಕ್ರಮದಲ್ಲಿ ಪಾಲುದಾರ, ನನ್ನನ್ನು ಬಂಧಿಸಿ” ಎಂದು ಬರೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

 

ಈಶ್ವರಪ್ಪ ಅವರ ಪೋಸ್ಟರ್‌ಅನ್ನು ‘ನಾನು 40 ಪರ್ಸೆಂಟ್ ಕಮಿಷನ್ ನುಂಗಿ ಸಂತೋಷ್ ಪಾಟೀಲ್ ಸಾವಿಗೆ ಕಾರಣನಾಗಿದ್ದೇನೆ. ನನ್ನನ್ನು ಬಂಧಿಸಿ’ ಎಂದು ಎಡಿಟ್ ಮಾಡಲಾಗಿದ್ದು, “ಈಶ್ವರಪ್ಪ ಅವರು ಹಿಡಿಯಬೇಕಾದ ಪೋಸ್ಟರ್ ಇದು! ನ್ಯಾಯಾಲಯದಲ್ಲಿ ಬಿಜೆಪಿಗರ ಅಕ್ರಮಗಳು, ಅನಾಚಾರಗಳು, ಹಗರಣಗಳು ಸಾಬೀತಾದರೆ ನನ್ನನ್ನೂ ಬಂಧಿಸಿ ಎಂದು ಹೇಳುವುದೇ ಬೇಡ, ಬಂಧನ ಆಗೇ ಆಗುತ್ತದೆ!” ಎಂದು ಕಾಂಗ್ರೆಸ್‌ ಪೋಸ್ಟ್‌ ಮಾಡಿದೆ.

ಈ ಸುದ್ದಿ ಓದಿದ್ದೀರಾ?: ಬಾಬಾಬುಡನ್‌ಗಿರಿ ಗೋರಿ ಧ್ವಂಸ ಕೇಸ್ ರೀ ಓಪನ್ ಆಗಿಲ್ಲ | ದೃಶ್ಯ ಮಾಧ್ಯಮಗಳ ವರದಿ ಸುಳ್ಳು: ಸಿಎಂ ಕಚೇರಿ ಸ್ಪಷ್ಟನೆ

ಮಾಜಿ ಸಚಿವ ಸುನೀಲ್ ಕುಮಾರ್ ಅವರ ಪೋಸ್ಟರ್‌ಅನ್ನು, ‘ಪರಶುರಾಮ ಮೂರ್ತಿಯ ಕಂಚನ್ನು ಕದ್ದಿದ್ದೇನೆ. ಸರ್ಕಾರಿ ಸಿಮೆಂಟ್ ಕದ್ದಿದ್ದೇನೆ. ನನ್ನನ್ನೂ ಬಂಧಿಸಿ’ ಎಂದು ಎಡಿಟ್‌ ಮಾಡಿದ್ದು, “ನನ್ನನ್ನೂ ಬಂಧಿಸಿ ಎನ್ನುತ್ತಿರುವ ಸುನಿಲ್ ಕುಮಾರ್ ಅವರೇ, ಪರಶುರಾಮ ಮೂರ್ತಿಗೆ ಕಂಚಿನ ಬದಲು ಫೈಬರ್ ಹಾಕಿದ್ದಕ್ಕೆ ನಿಮ್ಮನ್ನು ಬಂಧಿಸಬೇಕೆ? ಅಥವಾ ಸರ್ಕಾರದ ಸಿಮೆಂಟ್ ಕಳ್ಳತನದ ಆರೋಪಕ್ಕಾಗಿ ಬಂಧಿಸಬೇಕೆ? ರಾಮನ ಹೆಸರಲ್ಲಿ ರಾವಣನ ಕೆಲಸ ಮಾಡುವ ಆರೋಪಿಗಳನ್ನು ಬಂಧಿಸಬೇಕಲ್ಲವೇ?” ಎಂದು ಟೀಕಿಸಿದೆ.

ಬಿಜೆಪಿ ಮಾಜಿ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರ ಪೋಸ್ಟ್‌ಅನ್ನು ‘ನಾನು ಕಾರು ಚಲಾಯಿಸಿ ಇಬ್ಬರ ಹತ್ಯೆ ಮಾಡಿದ್ದೇನೆ, ನನ್ನನ್ನೂ ಬಂಧಿಸಿ’ ಎಂದು ಎಡಿಟ್ ಮಾಡಿರುವ ಕಾಂಗ್ರೆಸ್‌, “ರಾಜ್ಯ ಬಿಜೆಪಿ ನಾಯಕರು ನಿಜವಾಗಿಯೂ ಹಿಡಿದು ಕೂರಬೇಕಾದ ಪೋಸ್ಟರ್ ಹೀಗಿರಬೇಕು. ಸಿಟಿ ರವಿ ಅವರೇ ನಿಮ್ಮನ್ನು ಬಂಧಿಸಬೇಕಾದ ಕಾರಣಗಳು ಬೇರೆ ಇವೆಯಲ್ಲವೇ?” ಎಂದು ವ್ಯಂಗ್ಯವಾಡಿದೆ.

ಸಂಸದ ಪ್ರತಾಪ್ ಸಿಂಹ ಅವರ ಪೋಸ್ಟರ್‌ಅನ್ನು, ‘ನಾನು ಸಂಸತ್ ದಾಳಿಕೋರರಿಗೆ ಪಾಸ್ ಕೊಟ್ಟು ಸಹಕರಿಸಿದ್ದೇನೆ, ನನ್ನನ್ನೂ ಬಂಧಿಸಿ’ ಎಂದು ಎಡಿಟ್ ಮಾಡಿರುವ ಕಾಂಗ್ರೆಸ್, “ಪ್ರತಾಪ್ ಸಿಂಹ ಅವರೇ, ನೀವು ಈ ಪೋಸ್ಟರ್ ಹಿಡಿದು ಕೂರುವ ಧೈರ್ಯ ತೋರಿಸಿ, ನಿಮ್ಮವರೇ ಹೇಳುವ ದಮ್ಮು, ತಾಕತ್ತು ಪ್ರದರ್ಶಿಸಿ!” ಎಂದು ಕುಟುಕಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...