ಬಿಜೆಪಿಯಿಂದ ಎಎಪಿ ಅಭ್ಯರ್ಥಿಗಳ ಬೇಟೆ ಆರೋಪ; ತನಿಖೆಗೆ ಲೆಫ್ಟಿನೆಂಟ್ ಗವರ್ನರ್ ಆದೇಶ

Date:

ದೆಹಲಿ ವಿಧಾನಸಭಾ ಚುನವಣೆ ನಡೆದಿದ್ದು, ಫೆಬ್ರವರಿ 8ರಂದು ಫಲಿತಾಂಶ ಪ್ರಕಟವಾಗಲಿದೆ. ಫಲಿತಾಂಶಕ್ಕೂ ಮುನ್ನವೇ ತಮ್ಮ ಅಭ್ಯರ್ಥಿಗಳನ್ನು ಬಿಜೆಪಿ ಬೇಟೆಯಾಡಲು (ಖರೀದಿಸಿ, ಪಕ್ಷಕ್ಕೆ ಸೇರಿಸಿಕೊಳ್ಳಲು) ಪ್ರಯತ್ನಿಸುತ್ತಿದೆ ಎಂದು ಕೇಜ್ರಿವಾಲ್ ಆರೋಪಿಸಿದ್ದಾರೆ. ಅವರ ಆರೋಪದ ವಿರುದ್ಧ ಬಿಜೆಪಿ ದೂರು ನೀಡಿದ್ದು, ಈ ಬೆನ್ನಲ್ಲೇ, ತನಿಖೆ ನಡೆಸಲು ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ ಸಕ್ಸೇನಾ ಆದೇಶಿಸಿದ್ದಾರೆ.

- Advertisement -

ಎಎಪಿಯ ಆರೋಪಗಳು ಮಾನನಷ್ಟಕರ ಮತ್ತು ಚುನಾವಣಾ ಫಲಿತಾಂಶಕ್ಕೂ ಮುನ್ನ ತನ್ನ ವರ್ಚಸ್ಸಿಗೆ ಕಳಂಕ ತರುವ ಉದ್ದೇಶ ಹೊಂದಿವೆ ಎಂದು ಬಿಜೆಪಿ ವಾದಿಸಿದೆ. ಬಿಜೆಪಿ ದೂರು ಬಂದ ಬಳಿಕ, ಎಎಪಿ ಆರೋಪವು ತನಿಖೆಗೆ ಅರ್ಹವಾಗಿದೆ ಎಂದಿರುವ ಲೆಫ್ಟಿನೆಂಟ್ ಗವರ್ನರ್, ತನಿಖೆ ನಡೆಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇತ್ತೀಚೆಗೆ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಾಕಿರುವ ಕೇಜ್ರಿವಾಲ್, “ಎಎಪಿಯ 16 ಅಭ್ಯರ್ಥಿಗಳಿಗೆ ಬಿಜೆಪಿಯಿಂದ ಆಫರ್‌ಗಳು ಬಂದಿವೆ. ಎಎಪಿ ಜೊರೆದು ಬಿಜೆಪಿಗೆ ಪಕ್ಷಾಂತರ ಮಾಡಿದರೆ ಅವರಿಗೆ ಸಚಿವ ಸ್ಥಾನಗಳು ಮತ್ತು ತಲಾ 15 ಕೋಟಿ ರೂ. ನೀಡುವುದಾಗಿ ಬಿಜೆಪಿ ಭರವಸೆ ನೀಡಿದೆ” ಎಂದು ಆರೋಪಿಸಿದ್ದಾರೆ.

“ಕೆಲವು ಏಜೆನ್ಸಿಗಳು ಆ ಪಕ್ಷವು (ಬಿಜೆಪಿ) 55ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಹೇಳುತ್ತಿವೆ. ಕಳೆದ ಎರಡು ಗಂಟೆಗಳಲ್ಲಿ, ನಮ್ಮ 16 ಅಭ್ಯರ್ಥಿಗಳಿಗೆ ಬಿಜೆಪಿಯಿಂದ ಕರೆಗಳು ಬಂದಿವೆ. ಅವರಿಗೆ ಎಎಪಿ ತೊರೆದು ತಮ್ಮ ಪಕ್ಷಕ್ಕೆ ಸೇರಿದರೆ, ಅವರನ್ನು ಮಂತ್ರಿಗಳನ್ನಾಗಿ ಮಾಡಿ ತಲಾ 15 ಕೋಟಿ ರೂ. ನೀಡಲಾಗುವುದು ಎಂಬ ಆಮಿಷವೊಡ್ಡಲಾಗಿದೆ” ಎಂದು ಕೇಜ್ರಿವಾಲ್ ವಿವರಿಸಿದ್ದಾರೆ.

“ಬಿಜೆಪಿ ನಿಜವಾಗಿಯೂ 55ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವುದಾದರೆ, ಅವರು ನಮ್ಮ ಅಭ್ಯರ್ಥಿಗಳನ್ನು ಏಕೆ ತಮ್ಮ ಪಕ್ಷಕ್ಕೆ ಕರೆಯುತ್ತಿದ್ದಾರೆ? ಈ ನಕಲಿ ಸಮೀಕ್ಷೆಗಳು ಎಎಪಿ ಅಭ್ಯರ್ಥಿಗಳನ್ನು ವಿಚಲಿತಗೊಳಿಸುವ ವಾತಾವರಣ ಸೃಷ್ಟಿಸುವ ಪಿತೂರಿ ಭಾಗವಾಗಿವೆ. ಆದರೆ, ನಮ್ಮ ಅಭ್ಯರ್ಥಿಗಳಲ್ಲಿ ಯಾರೂ ಪಕ್ಷಾಂತರ ಮಾಡುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಕೇಜ್ರಿವಾಲ್ ಆರೋಪದ ವಿರುದ್ಧ ಲೆಫ್ಟಿನೆಂಟ್‌ ಗವರ್ನರ್‌ಗೆ ಬಿಜೆಪಿ ದೂರು ನೀಡಿದೆ. ದೂರು ಬಂದ ಬೆನ್ನಲ್ಲೇ ತನಿಖೆಗೆ ಆದೇಶಿಸಲಾಗಿದೆ.

“ಈ ವಿಷಯದ ಬಗ್ಗೆ ಸತ್ಯವನ್ನು ತಿಳಿಯಲು ಭ್ರಷ್ಟಾಚಾರ ನಿಗ್ರಹ ದಳ (ACB) ಮೂಲಕ ಸಂಪೂರ್ಣ ತನಿಖೆ ನಡೆಸಬೇಕು” ಎಂದು ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಹೇಳಿರುವುದಾಗಿ ಅವರ ಕಚೇರಿ ಹೇಳಿಕೆ ಬಿಡುಗಡೆ ಮಾಡಿದೆ.

ದೆಹಲಿಯ ಎಲ್ಲ 70 ವಿಧಾನಸಭಾ ಸ್ಥಾನಗಳಿಗೆ ಬುಧವಾರ ಮತದಾನ ನಡೆದಿದೆ. ಶನಿವಾರ ಮತಗಳ ಎಣಿಕೆ ನಡೆಯಲಿದೆ. ಬುಧವಾರ ಸಂಜೆ ಹಲವಾರು ಚುನಾವಣೊತ್ತರ ಸಮೀಕ್ಷೆಗಳು ಬಂದಿದ್ದು, ಈ ಬಾರಿ ಬಿಜೆಪಿ ಅಧಿಕಾರ ಪಡೆಯುತ್ತದೆ ಎಂದು ಹೇಳುತ್ತಿವೆ. ಆದಾಗ್ಯೂ, 3ನೇ ಬಾರಿಗೆ ಅಧಿಕಾರ ಉಳಿಸಿಕೊಳ್ಳುವ ವಿಶ್ವಾಸದಲ್ಲಿ ಎಎಪಿ ಇದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

22 ನಿಮಿಷದ ಜಾಹೀರಾತು, 75 ಸಾವಿರ ದಂಡ! ಸಿನಿಪ್ಲೆಕ್ಸ್‌ ಕಿವಿಹಿಂಡಿದ ಗ್ರಾಹಕ ವೇದಿಕೆ

ಸಿನಿಮಾ ಶುರುವಾಗುವ ಮುನ್ನ 22 ನಿಮಿಷಗಳ ಕಾಲ ವಾಣಿಜ್ಯ ಜಾಹೀರಾತುಗಳು ಮತ್ತು...

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...