ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕ್ರಮ; ಅಭ್ಯರ್ಥಿಯಾಗಿ ಕಟೀಲ್ ಹೆಸರನ್ನೇ ಹೇಳದ ನಾಯಕರು

Date:

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ನೂತನ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ಮಂಗಳವಾರ ಮಂಗಳೂರಿನಲ್ಲಿ ನಡೆದಿದೆ. ನೂತನ ಜಿಲ್ಲಾ ಅಧ್ಯಕ್ಷ ಸತೀಶ್ ಕುಂಪಲ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಬಿಜೆಪಿಯ ಹಲವಾರು ನಾಯಕರು ಹಿಂದುತ್ವದ ಭಾಷಣ ಮಾಡಿದ್ದಾರೆ. ಆದರೆ, ಸಮಾರಂಭದಲ್ಲಿ ಯಾರೊಬ್ಬರೂ ಬಿಜೆಪಿ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಹೆಸರು ಪ್ರಸ್ತಾಪಿಸಿಲ್ಲ. ಜಿಲ್ಲೆಯಲ್ಲಿ ಅವರ ಸಾಧನೆಗಳ ಬಗ್ಗೆ ಮಾತನಾಡಿಲ್ಲ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಅವರೇ ಅಭ್ಯರ್ಥಿಯಾಗುತ್ತಾರೆ ಎಂಬ ಬಗ್ಗೆಯೂ ಯಾರೂ ತುಟಿಬಿಚ್ಚಿಲ್ಲ. ಇದು, ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಕಳೆದುಕೊಂಡ ಕಟೀಲ್, ಸಂಸತ್ ಟಿಕೆಟ್‌ಅನ್ನೂ ಕಳೆದುಕೊಳ್ಳಬಹುದೆಂಬ ಚರ್ಚೆಯನ್ನು ಹುಟ್ಟುಹಾಕಿದೆ.

- Advertisement -

ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ, ವಿಧಾನ ಸಭೆಯ ಪ್ರತಿಪಕ್ಷದ ನಾಯಕ ಆರ್. ಅಶೋಕ್, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೋಟಾ ಶ್ರೀನಿವಾಸ್ ಪೂಜಾರಿ, ಮಾಜಿ ಉಪ ಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ, ಜಿಲ್ಲೆಯ ಬಿಜೆಪಿ ಶಾಸಕರು, ಮಾಜಿ ಶಾಸಕರು ಸೇರಿದಂತೆ ಹಲವರು ಭಾಗಿಯಾಗಿದ್ದರು. ಲೋಕಸಭಾ ಚುನಾವಣೆ ಸಿದ್ಧತೆ ಹಿನ್ನೆಲೆ ಅದ್ದೂರಿ ಕಾರ್ಯಕ್ರಮ ಮಾಡಿದ್ದಾರೆ. ಚುನಾವಣೆ ಸಿದ್ದತೆ ಬಗ್ಗೆ ಎಲ್ಲರೂ ಮಾತನಾಡಿದ್ದಾರೆ. ಆದರೆ, ಕಟೀಲ್ ಮತ್ತೆ ಅಭ್ಯರ್ಥಿಯಾಗುತ್ತಾರೆಯೇ ಎಂಬ ಬಗ್ಗೆ ಯಾರೊಬ್ಬರೂ ಚಕಾರ ಎತ್ತಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರಂತೂ ಅಪ್ಪಿತಪ್ಪಿಯೂ ನಳಿನ್ ಕುಮಾರ್ ಕಟೀಲ್ ಅವರ ಹೆಸರನ್ನು ಚುನಾವಣೆಯೊಂದಿಗೆ ತಳುಕು ಹಾಕಿ ಮಾತನಾಡಲಿಲ್ಲ. ಸಾಂಭವ್ಯ ಅಭ್ಯರ್ಥಿ ಎಂದೂ ಹೇಳದೆ ಭಾಷಣ ಮುಗಿಸಿದರು. ಅವರು ಉದ್ದೇಶಪೂರ್ವಕವಾಗಿಯೇ ಕಟೀಲ್ ಹೆಸರು ಹೇಳಲಿಲ್ಲವೆಂಬುದು ಅವರ ಮಾತಿನ ದಾಟಿಯಲ್ಲಿ ಕಾಣಿಸುತ್ತಿತ್ತು.

ಭಾಷಣ ಮಾಡಿದ ಮುಖಂಡರೆಲ್ಲರೂ ರಾಜ್ಯ ಬಿಜೆಪಿ ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಹೆಸರು ಉಲ್ಲೇಖಿಸಿದಾಗೆಲ್ಲ ಭಾರೀ ಶಿಳ್ಳೆ, ಚಪ್ಪಾಳೆ ಕೇಳಿ ಬರುತ್ತಿತ್ತು. ಇನ್ನು, ಸ್ವತಃ ನಳಿನ್ ಕುಮಾರ್ ಅವರೇ ಭಾಷಣ ಮಾಡಿದಾಗ, ಶಿಳ್ಳೆ, ಚಪ್ಪಾಳೆಗಳು ಮಾಯವಾಗಿದ್ದವು.

ಬಿಜೆಪಿ ನೂತನ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರುಕೋಟಾ ಶ್ರೀನಿವಾಸ್ ಪೂಜಾರಿಯೇ ತನ್ನ ರಾಜಕೀಯ ಗುರುವೆಂದು ಬಹಿರಂಗವಾಗಿ ಘೋಷಿಸಿದರು. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮುಂದಿನ ಚುನಾವಣೆಯಲ್ಲಿ 3 ಲಕ್ಷ ಮತಗಳ ಅಂತರದಿಂದ ಬಿಜೆಪಿ ಗೆಲ್ಲತ್ತದೆ ಎಂದರು. ಆದರೆ, ನಳಿನ್ ಅಭ್ಯರ್ಥಿಯಾಗುತ್ತಾರೆಂದು ಎಲ್ಲಿಯೂ ಹೇಳಲಿಲ್ಲ. ಬದಲಾಗಿ, ಅಭ್ಯರ್ಥಿಯನ್ನು ಗೆಲ್ಲಿಸುವುದೇ ನನ್ನ ಗುರಿಯೆಂದು ಹೇಳಿ ಮಾತು ಮುಗಿಸಿದರು.

ಎಲ್ಲರೂ ಮೋದಿ, ರಾಮ, ರಾಮಮಂದಿರ ಗುಣಗಾನ ಮಾಡಿದರು. ಯಾರೊಬ್ಬರೂ ನಳಿನ್ ಕುಮಾರ್ ಅವರ ಒಂದಿಂಚು ಸಾಧನೆಯ ಬಗ್ಗೆಯೂ ಸೊಲ್ಲೆತ್ತಲಿಲ್ಲ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ತಮಿಳುನಾಡು | ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆ ಪ್ರಶ್ನಿಸಿ ಮದ್ರಾಸ್ ಹೈಕೋರ್ಟ್‌ಗೆ ಅರ್ಜಿ

ತಮಿಳುನಾಡು ಸರ್ಕಾರವು ಮಹಿಳೆಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರಿಗೆ ಸರ್ಕಾರಿ ಬಸ್‌ಗಳಲ್ಲಿ ಜಾರಿಗೆ...