ಅನುದಾನ ನೀಡಿಕೆಯಲ್ಲಿ ತಾರತಮ್ಯ ನೀಡಿ ಅನುಸರಿಸಲಾಗುತ್ತಿದೆ ಎಂದು ಆರೋಪಿಸಿ ಅತ್ತ ದೆಹಲಿಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಬುಧವಾರ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಇತ್ತ ಬೆಂಗಳೂರಿನಲ್ಲಿ ಪ್ರತಿಪಕ್ಷ ಬಿಜೆಪಿಯು ಬರ ಪರಿಹಾರ ಕ್ರಮಗಳಿಗೆ ಆಗ್ರಹಿಸಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದೆ.
ಬುಧವಾರ ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಬಳಿ ಸೇರಿರುವ ಬಿಜೆಪಿ ಶಾಸಕರು, ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಸೇರಿದಂತೆ ಮತ್ತಿತರರು ಭಾಗವಹಿಸಿದ್ದಾರೆ.
ರಾಜ್ಯದ ಕಾಂಗ್ರೆಸ್ ಸರ್ಕಾರವು ಕೇಂದ್ರದಿಂದ ಬಂದ ಅನುದಾನವನ್ನು ದುರ್ಬಳಕೆ ಮಾಡಿಕೊಂಡು ಅನುದಾನ ನೀಡಿಲ್ಲ ಎಂದು ಆರೋಪಿಸುತ್ತಿದೆ. ಕಾಂಗ್ರೆಸ್ ಸರ್ಕಾರವು ಹಾಲು ಉತ್ಪಾದಕರನ್ನು ವಂಚಿಸಿ ನಂದಿನಿಯನ್ನು ಮುಳುಗಿಸುತ್ತಿದೆ. ಸರ್ಕಾರವು ಎಸ್‌ಸಿ-ಎಸ್‌ಟಿಗಳ ಹಣ ನುಂಗಿ ಹಾಕಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ ಎಂದು ಬಿಜೆಪಿ ನಾಯಕರು ದೂರಿದ್ದು, ಪ್ರತಿಭಟನೆ ನಡೆಸಿದರು.
ಇದನ್ನು ಓದಿದ್ದೀರಾ? ದೆಹಲಿ ಚಲೋ | ಇದು ಎಲ್ಲ ರಾಜ್ಯಗಳ ಪ್ರಶ್ನೆ; ಅನ್ಯಾಯ ಮುಂದುವರಿಯಬಾರದು: ಸಿಎಂ ಸಿದ್ದರಾಮಯ್ಯ
ರಾಜ್ಯ ಸರ್ಕಾರವೇ 222ಕ್ಕೂ ಹೆಚ್ಚು ತಾಲೂಕುಗಳನ್ನು ಬರಗಾಲಪೀಡಿತ ಎಂದು ಘೋಷಿಸಿದ್ದರೂ ಕುಡಿಯುವ ನೀರು ಸೇರಿದಂತೆ ಬರ ಪರಿಹಾರದ ಯಾವುದೇ ಕ್ರಮಗಳನ್ನು ಕೈಗೊಳ್ಳದೇ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.
#WATCH | BJP Karnataka MPs hold protest in front of the Gandhi statue in Parliament over the alleged misuse of funds by the Karnataka government. pic.twitter.com/QosWkqhNLA
— ANI (@ANI) February 7, 2024
ಪ್ರತಿಭಟನೆಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವರು ಭಾಗವಹಿಸಿದ್ದಾರೆ. ಈ ನಡುವೆ ದೆಹಲಿಯಲ್ಲಿ ಕೂಡ ಬಿಜೆಪಿ ಸಂಸದರು ಸಂಸತ್ ಭವನದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು.