ರಾಜ್ಯ ಸರ್ಕಾರದ ವಿರುದ್ಧ ಜೂನ್ 7, 8ರಂದು ಪ್ರತಿಭಟನೆ: ಬಿಜೆಪಿ

Date:

  • ನೂತನ ಸರ್ಕಾರದ ವಿರುದ್ಧ ಬೀದಿಗಿಳಿಯಲು ಸಿದ್ದವಾದ ಬಿಜೆಪಿ
  • ಕಾಂಗ್ರೆಸ್ ಸರ್ಕಾರದ ಗೊಂದಲದ ನೀತಿಗಳ ವಿರುದ್ದ ಪ್ರತಿಭಟನೆ

ರಾಜ್ಯ ಸರಕಾರದ ಮೂರು ನಿರ್ಧಾರಗಳನ್ನು ವಾಪಸ್ ಪಡೆಯಲು ಆಗ್ರಹಿಸಿ ನಾಳೆ ಮತ್ತು ನಾಡಿದ್ದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ತಿಳಿಸಿದರು.

- Advertisement -

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು (ಜೂನ್ 4) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರಕಾರದ ಮೂರು ಗೊಂದಲದ ನಿರ್ಧಾರಗಳನ್ನು ವಾಪಸ್ ಪಡೆಯಲು ಆಗ್ರಹಿಸಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

“ಗ್ಯಾರಂಟಿ ಯೋಜನೆ ಜಾರಿ ವಿಚಾರದಲ್ಲಿ ಮೊನ್ನೆ 200 ಯೂನಿಟ್‌ವರೆಗೆ ವಿದ್ಯುತ್ ಉಚಿತ ಎಂದಿದ್ದ ಸರಕಾರ, ಈಗ 80 ಯೂನಿಟ್‌ವರೆಗೆ ಎಂದು ಆದೇಶ ಹೊರಡಿಸಿ ಗೊಂದಲದ ನೀತಿ ಪ್ರದರ್ಶಿಸಿದೆ” ಎಂದು ರವಿಕುಮಾರ್ ಆಕ್ಷೇಪಿಸಿದರು.

“ಒಂದು ಕಡೆ ರಾಜ್ಯ ಸರ್ಕಾರ ವಿದ್ಯುತ್ ಶುಲ್ಕವನ್ನೂ ಏರಿಸಿದೆ. ಒಂದು ಯೂನಿಟ್‌ಗೆ 70 ಪೈಸೆ ಹೆಚ್ಚಾಗಿದೆ. ಸರಕಾರ ಒಂದೆಡೆ ಉಚಿತ ಎನ್ನುತ್ತದೆ; ಮತ್ತೊಂದು ಕಡೆ ಶುಲ್ಕ ಹೆಚ್ಚಿಸಿ ಜನರಿಂದಲೇ ಮತ್ತೆ ವಸೂಲಾತಿ ಮಾಡುತ್ತಿದೆ. ಇದನ್ನು ಬಿಜೆಪಿ ಖಂಡಿಸುತ್ತದೆ. ಹೆಚ್ಚಿಸಿದ 70 ಪೈಸೆ ದರವನ್ನು ವಾಪಸ್ ಪಡೆಯಲು ಆಗ್ರಹಿಸುತ್ತದೆ” ಎಂದು ತಿಳಿಸಿದರು.

ಹಾಲಿನ ಪ್ರೋತ್ಸಾಹ ಧನ ಇಳಿಕೆ ಮಾಡಿರುವ ವಿಚಾರವಾಗಿ ಮಾತನಾಡಿದ ರವಿಕುಮಾರ್, “ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಾಲು ಖರೀದಿಯ ಪ್ರೋತ್ಸಾಹ ಧನ ಪ್ರತಿ ಲೀಟರ್‌ಗೆ 5 ರೂಪಾಯಿ ಇತ್ತು. ಈಗ ಅದನ್ನು 1.5 ರೂ. ಕಡಿಮೆ ಮಾಡಿದ್ದೀರಿ. ಹಾಲು ಉತ್ಪಾದಕರಿಗೆ ದೊಡ್ಡ ಹೊಡೆತ ಇದು. ಇದನ್ನು ಬದಲಿಸಿ ಹಿಂದಿನಂತೆ ಪ್ರೋತ್ಸಾಹಧನ ಕೊಡಿ” ಎಂದು ರವಿಕುಮಾರ್ ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ?: ಸಚಿವ ವೆಂಕಟೇಶ್‌ ಕಸಾಯಿ ಖಾನೆಗೆ ಭೇಟಿ ನೀಡಿ ಬಳಿಕ ಹೇಳಿಕೆ ನೀಡಲಿ; ಪ್ರಭು ಚೌಹಾಣ್‌

ಇನ್ನು ಪಶು ಸಂಗೋಪನಾ ಸಚಿವ ವೆಂಕಟೇಶ್ ಹೇಳಿಕೆ ಖಂಡಿಸಿದ ರವಿಕುಮಾರ್, “ಹಸುಗಳನ್ನು ನಮ್ಮ ದೇಶದಲ್ಲಿ ಪವಿತ್ರ ಭಾವನೆಯಿಂದ ಪೂಜೆ ಮಾಡುತ್ತಾರೆ. ಮಹಾತ್ಮ ಗಾಂಧಿಯವರು ಕೂಡ ಗೋಹತ್ಯೆ ಮಾಡಬಾರದು ಎಂದಿದ್ದರು. ಈ ಬಗ್ಗೆ ಅರಿವಿದ್ದೂ ರಾಜ್ಯ ಸರ್ಕಾರ ಇದರ ವಿರುದ್ಧ ಹೋಗುತ್ತಿರುವುದು ಸರಿಯಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“1948 ಮತ್ತು 1964ರಲ್ಲಿ ಗೋಹತ್ಯೆ ನಿಷೇಧ ಕಾನೂನನ್ನು ಕಾಂಗ್ರೆಸ್ ಸರ್ಕಾರವೇ ಜಾರಿಗೆ ತಂದಿತ್ತು. ಇದರಲ್ಲಿ ಎಮ್ಮೆ ಮತ್ತು ಕೋಣಗಳನ್ನು ವಧಿಸಬಹುದೆಂದು ಇದೆ. 1978ರ ಕಾನೂನಿನಲ್ಲಿ ಎತ್ತು ಮತ್ತು ಹೋರಿಗಳನ್ನು, 2020ರ ನಮ್ಮ ಸರ್ಕಾರ ತಂದ ಕಾನೂನಿನಲ್ಲಿ ಗೋಹತ್ಯೆ ಮತ್ತು ಎತ್ತು/ಹೋರಿಗಳನ್ನು ಹತ್ಯೆ ಮಾಡಬಾರದು ಎಂದು ಹೇಳಿದೆ. ಆದರೆ, ಈ ಸರಕಾರವು ಗೋಹತ್ಯೆ ಅವಕಾಶ ಮಾಡಿಕೊಡಲು ಹೊರಟಿದೆ, ಇದು ಸರಿಯಲ್ಲ” ಎಂದರು.

ಜೊತೆಗೆ ಕಾನೂನು ರದ್ದತಿ ಪ್ರಸಾಪ್ತವನ್ನು ಬಿಜೆಪಿ ಖಂಡಿಸುವುದಾಗಿ ತಿಳಿಸಿದ ಅವರು ಗೋಹತ್ಯಾ ನಿಷೇಧ ಕಾನೂನು ಹಿಂಪಡೆದರೆ ದೊಡ್ಡ ಪ್ರಮಾಣದ ಹೋರಾಟ ಹಮ್ಮಿಕೊಳ್ಳುವುದಾಗಿ ಎಚ್ಚರಿಕೆ ನೀಡಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್ ಧರಣಿ ಸ್ಥಳ ರದ್ದತಿ ಖಂಡಿಸಿ ಎಸ್‌ಎಫ್‌ಐ, ಡಿವೈಎಫ್‌ಐ ಪ್ರತಿಭಟನಾ ಮೆರವಣಿಗೆ: ಹಲವು ನಾಯಕರು ಪೊಲೀಸ್ ವಶಕ್ಕೆ

ದೇಶದ ರಾಜಧಾನಿ ದೆಹಲಿಯ ಐತಿಹಾಸಿಕ 'ಜಂತರ್ ಮಂತರ್' ಅನ್ನು ಪ್ರಜಾಸತ್ತಾತ್ಮಕ ಪ್ರತಿಭಟನಾ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಓವೈಸಿ: ಅರ್ಜಿಯ ತುರ್ತು ವಿಚಾರಣೆಗೆ ಮನವಿ

ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್) ನಡೆಸುತ್ತಿರುವ ಚುನಾವಣಾ ಆಯೋಗದ...

ಪಶ್ಚಿಮ ಬಂಗಾಳ | ದುರ್ಗಾ ಪೂಜೆ ಪಂಡಾಲ್‌ನಲ್ಲಿ ಮಮತಾ ಮೇಲೆ ದಾಳಿ; ಟಿಎಂಸಿ ಮುಖಂಡರೇ ಗುರಿಯೆ?

ಈಗಾಗಲೇ ಸರಣಿ ದಾಳಿಯು ಟಿಎಂಸಿ ಕಾರ್ಯಕರ್ತರಲ್ಲಿ ಆತಂಕ ಸೃಷ್ಟಿಸಿದೆ. ಹೀಗಿರುವಾಗ ನಿನ್ನೆಯಷ್ಟೇ...

KPSC ಅಕ್ರಮ | ಫೋನ್ ಟ್ಯಾಪಿಂಗ್ ಆರೋಪದ ನೆರಳು; ಹೈಕೋರ್ಟ್ ಎಸ್‌ಐಟಿ ತಂಡಕ್ಕೆ ಸುಪ್ರೀಂ ಬ್ರೇಕ್

ಕರ್ನಾಟಕ ಲೋಕಸೇವಾ ಆಯೋಗದ (KPSC) ಗಂಭೀರ ಅಕ್ರಮ ಮತ್ತು ಭ್ರಷ್ಟಾಚಾರ ಪ್ರಕರಣಗಳ...