ಕಲಾಪದಿಂದ ಸದಸ್ಯರ ಅಮಾನತು ಖಂಡಿಸಿ ಬಿಜೆಪಿ ಪ್ರತಿಭಟನೆ

Date:

Advertisements
  • ಶಾಸಕರ ಅಮಾನತು ಖಂಡಿಸಿ ರಾಜ್ಯಪಾಲರಿಗೆ ದೂರು ನೀಡಲು ಬಿಜೆಪಿ ನಿರ್ಧಾರ
  • ಸಿದ್ದರಾಮಯ್ಯ ಮೇಲೆ ಮಾತ್ರ ಬಸಪ್ಪ, ಆದರೆ ಒಳಗೆ ಮಾತ್ರ ವಿಷಪ್ಪ: ಛಲವಾದಿ

ಬಿಜೆಪಿಯ ಹತ್ತು ಜನ ಸದಸ್ಯರನ್ನು ವಿಧಾನಸಭೆ ಕಲಾಪದಿಂದ ಅಮಾನತು ಮಾಡಿರುವ ಸ್ಪೀಕರ್ ಯು ಟಿ ಖಾದರ್ ಆದೇಶ ಖಂಡಿಸಿ ಬಿಜೆಪಿ ಸದಸ್ಯರು ವಿಧಾನಸೌಧದ ಆವರಣದ ಗಾಂಧಿ ಪ್ರತಿಮೆ ಎದುರು ಗುರುವಾರ ಧರಣಿ ನಡೆಸಿದರು.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಚಿವರಾದ ಆರಗ ಜ್ಞಾನೇಂದ್ರ, ಸುನಿಲ್‌ ಕುಮಾರ್‌, ಎಸ್‌ ಸುರೇಶ್‌ ಕುಮಾರ್‌, ಮುನಿರತ್ನ ಸೇರಿದಂತೆ ವಿಧಾನಸಭೆ ಮತ್ತು ವಿಧಾನ ಪರಿಷತ್‌ ಸದಸ್ಯರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ಮಾಜಿ ಸಚಿವ ಆರ್.ಅಶೋಕ್ ಮಾತನಾಡಿ, “ಸ್ಪೀಕರ್ ಪೀಠಕ್ಕೆ ಯು ಟಿ ಖಾದರ್​ ಅಗೌರವ ತೋರಿದ್ದಾರೆ. ಸ್ಪೀಕರ್ ಆದವರು ಒಂದು ಪಾರ್ಟಿ ಪರವಾಗಿ ಇರಬಾರದು. ಸೋನಿಯಾ, ರಾಹುಲ್​ರನ್ನು ಸ್ಪೀಕರ್ ಭೇಟಿಯಾಗಿದ್ದಾರೆ. ಐಎಎಸ್ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಇದರ ವಿರುದ್ಧ ನಾವು ಹೋರಾಟ ಮಾಡಿ ನ್ಯಾಯ ಕೇಳಿದ್ದೆವು. ಪ್ರಶ್ನೆ ಮಾಡಿದ್ದಕ್ಕೆ ನಮ್ಮನ್ನು ಅಮಾನತು ಮಾಡಿದ್ದಾರೆ. ಸ್ಪೀಕರ್ ಕ್ರಮ ಖಂಡಿಸಿ ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ” ಎಂದು ಹರಿಹಾಯ್ದರು.

Advertisements

ಸಿದ್ದರಾಮಯ್ಯ ಒಬ್ಬ ಗೋಮುಖ ವ್ಯಾಘ್ರ: ಛಲವಾದಿ ನಾರಾಯಣಸ್ವಾಮಿ

“ಸಿದ್ದರಾಮಯ್ಯ ಒಬ್ಬ ಗೋಮುಖ ವ್ಯಾಘ್ರ. ಬಿಜೆಪಿಯ ಹೋರಾಟ ನ್ಯಾಯಯುತವಾಗಿತ್ತು. ಡೆಪ್ಯುಟಿ ಸ್ಪೀಕರ್ ಅಂತ ದಲಿತರ ಮೇಲೆ ಪ್ರೀತಿ ತೋರಿಸುವ ಸಿದ್ದರಾಮಯ್ಯ ನವರೇ ದಲಿತರ ಸಮಾಧಿ ಮೇಲೆ ಕುಳಿತಿರೋದು ನೀವೇ ತಾನೇ? ನೀವು ಸಿಎಂ ಆಗಿ ಕುಳಿತಿರೋದು ನಿಮ್ಮ ಜಾಗದಲ್ಲಿ ಅಲ್ಲ, ದಲಿತರ ಸ್ಥಾನದಲ್ಲಿ. ನಿಮಗೆ ತಾಕತ್ ಇದ್ರೆ ಘೋಷಣೆ ಮಾಡಿ. ನೀವು ಅನುಭವಿಸಿರುವ ಎಲ್ಲಾ ಅಧಿಕಾರ ದಲಿತರಿಗೆ ಸೇರಬೇಕಿದೆ” ಎಂದು ಛಲವಾದಿ ನಾರಾಯಣಸ್ವಾಮಿ ಕಿಡಿಕಾರಿದರು.

“ನಿಮಗೆ ಸ್ವಲ್ಪ ದಲಿತ ಕಾಳಜಿ ಇದ್ರೆ ಇವತ್ತು ರಾಜೀನಾಮೆ ನೀಡಿ. ದಲಿತರಿಗೆ ಸಿಎಂ ಸ್ಥಾನ ಬಿಟ್ಟು ಕೊಡಿ. ಇಲ್ಲವಾದಲ್ಲಿ ನೀವು ಒಬ್ಬ ಗೋಮುಖ ವ್ಯಾಘ್ರ. ಸಿದ್ದರಾಮಯ್ಯ ಮೇಲೆ ಮಾತ್ರ ಬಸಪ್ಪ, ಆದರೆ ಒಳಗೆ ಮಾತ್ರ ವಿಷಪ್ಪ” ವಾಗ್ದಾಳಿ ನಡೆಸಿದರು.

ರಾಜ್ಯಪಾಲರಿಗೆ ದೂರು

ವಿಧಾನಸಭೆಯಿಂದ ಬಿಜೆಪಿಯ 10 ಶಾಸಕರ ಅಮಾನತು ಹಿನ್ನೆಲೆ ರಾಜ್ಯಪಾಲ ಗೆಹ್ಲೋಟ್​​ಗೆ ದೂರು ನೀಡಲು ಬಿಜೆಪಿ ಶಾಸಕರು ನಿರ್ಧರಿಸಿದ್ದಾರೆ. ವಿಧಾನಸೌಧದಿಂದ ರಾಜಭವನದವರೆಗೂ ಬಿಜೆಪಿ ನಾಯಕರು ಪಾದಯಾತ್ರೆ ಮೂಲಕ ತೆರಳಿ ದೂರು ನೀಡಲು ಮುಂದಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X