ಆಂತರಿಕ ಸಮಸ್ಯೆ ಸರಿಮಾಡಿಕೊಳ್ಳಲು ಬಿಜೆಪಿ ಪ್ರತಿಭಟನೆ: ಡಿಸಿಎಂ ಡಿ ಕೆ ಶಿವಕುಮಾರ್

Date:

Advertisements

ಬಿಜೆಪಿಯಲ್ಲಿ ಆಂತರಿಕವಾಗಿ ಸಮಸ್ಯೆಯಿದೆ. ಅದನ್ನು ಸರಿ ಮಾಡಿಕೊಳ್ಳಲು ಈಗ ಮತ್ತೊಮ್ಮೆ ಪ್ರತಿಭಟನೆ ಮಾಡುತ್ತಿದ್ದಾರೆ. ಅವರ ಪ್ರತಿಭಟನೆಯಲ್ಲಿ ಯಾವುದೇ ಹುರುಳಿಲ್ಲ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು.

ಸದಾಶಿವನಗರದ ನಿವಾಸದ ಬಳಿ ಬಿಜೆಪಿಯ ಪ್ರತಿಭಟನೆ ಬಗ್ಗೆ ಮಾಧ್ಯಮದವರು ಪ್ರಶ್ನಿಸಿದಾಗ ಉತ್ತರಿಸಿದ ಅವರು, “ಮುಡಾ ಅಕ್ರಮ ಎಂದು ಮೈಸೂರು ಚಲೋ ಮಾಡಿದರು. ಅದಕ್ಕೆ ಈಗಾಗಲೇ ನಾವು ಉತ್ತರ ಕೊಟ್ಟಿದ್ದೇವೆ. ಈಗ ಪ್ರತಿಭಟನೆ ಮಾಡುವವರನ್ನು ಬೇಡ ಎನ್ನಲು ಆಗುತ್ತದೆಯೇ”ಎಂದು ಪ್ರಶ್ನಿಸಿದರು

ತುಂಗಭದ್ರಾ ತುಂಬಿದ ತಕ್ಷಣ ಬಾಗಿನ ಅರ್ಪಣೆ

Advertisements

“ತುಂಗಭದ್ರಾ ಅಣೆಕಟ್ಟಿನ ಗೇಟ್ ಅನ್ನು ಕಾರ್ಮಿಕರ, ಇಂಜಿನಿಯ‌ರ್‌ಗಳ, ಅಧಿಕಾರಿಗಳ ಶ್ರಮದಿಂದ ದುರಸ್ತಿ ಮಾಡಲಾಗಿದೆ. ಅಣೆಕಟ್ಟು ತುಂಬಿದ ತಕ್ಷಣ ನಾನು ಮತ್ತು ಮುಖ್ಯಮಂತ್ರಿಗಳು ಬಾಗಿನ ಅರ್ಪಿಸುವ ಕೆಲಸ ಮಾಡುತ್ತೇವೆ” ಎಂದರು.

“ದುರಸ್ತಿ ಕಾರ್ಯದಲ್ಲಿ ತೊಡಗಿಕೊಂಡ ಪ್ರತಿಯೊಬ್ಬ ಕಾರ್ಮಿಕರನ್ನು ಗೌರವಿಸುವ ಕೆಲಸ ಸರ್ಕಾರ ಮಾಡಲಿದೆ. ಇಡೀ ದೇಶವೇ ಏನಾಗಬಹುದು ಎಂದು ಕಾತರದಿಂದ ನೋಡುತ್ತಿತ್ತು. ನಾವು ಇದರಲ್ಲಿ ಯಶಸ್ಸು ಕಂಡಿದ್ದೇವೆ. ವಿರೋಧ ಪಕ್ಷಗಳು ಈ ವಿಷಯದ ಬಗ್ಗೆ ಟೀಕೆ ಮಾಡುತ್ತಿದ್ದವು. ಆಗ ನಾವೇನು ಮಾತನಾಡಲಿಲ್ಲ. ನಾವು ಕೆಲಸ ಮಾಡಿ ಸಾಧಿಸಿದ್ದೇವೆ. ಟೀಕೆಗಳು ಸಾಯುತ್ತವೆ. ಅದಕ್ಕೆ ಕೆಲಸಗಳು ಉಳಿಯುತ್ತವೆ ಎಂದು ಹೇಳುತ್ತಿರುತ್ತೇನೆ” ಎಂದು ಹೇಳಿದರು.

“ರಾಜ್ಯದ ಎಲ್ಲ ಅಣೆಕಟ್ಟುಗಳ ಸುರಕ್ಷತೆಗೆ ಎಂದು ತಾಂತ್ರಿಕ ಸಮಿತಿ ರಚನೆ ಮಾಡಿದ್ದೇವೆ. ಅವರು ಎಲ್ಲ ಅಣೆಕಟ್ಟುಗಳ ಸುರಕ್ಷಾತ ವರದಿಯನ್ನು ನೀಡಲಿದ್ದಾರೆ. ಆಲಮಟ್ಟಿ ತುಂಬಿ ತುಳುಕುತ್ತಿದೆ. ಮಂಡ್ಯ ಸೇರಿದಂತೆ ಇತರೆ ಗ್ರಾಮಾಂತರ ಭಾಗಗಳಲ್ಲಿ ಇನ್ನೂ ಕೆರೆಗಳು ತುಂಬಿಲ್ಲ. ಉತ್ತಮ ಮಳೆಯಾಗಿ ತುಂಬವ ನಿರೀಕ್ಷೆ ಇದೆ” ಎಂದು ತಿಳಿಸಿದರು.

ಗುರುವಾರ ಬಿಜೆಪಿ ಪ್ರತಿಭಟನೆ

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಗುರುವಾರ ರಾಜ್ಯಾಧ್ಯಂತ ಬಿಜೆಪಿ ಪ್ರತಿಭಟನೆಗೆ ಕರೆ ಕೊಟ್ಟಿದೆ. ಬೆಂಗಳೂರು ನಗರ ಸೇರಿದಂತೆ ರಾಜ್ಯಾದ್ಯಂತ ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿ ಪ್ರತಿಭಟನೆಯನ್ನು ನಡೆಸಿ ಸಿಎಂ ರಾಜೀನಾಮಗೆ ಒತ್ತಾಯಿಸಲಿದೆ. ಅಲ್ಲದೆ ರಾಜ್ಯಪಾಲರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಕಾಂಗ್ರೆಸ್ ನಾಯಕರ ವಿರುದ್ಧವೂ ಕ್ರಮಕ್ಕೆ ಆಗ್ರಹಿಸಲಿದ್ದಾರೆ.

“ರಾಜ್ಯಪಾರಿಗೆ ಅವಮಾನ ಮಾಡಿದ ಕಾಂಗ್ರೆಸ್ ಕ್ರಮವನ್ನು ಖಂಡಿಸಿ ಹಾಗೂ ಹಗರಣಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿ ನಾಳೆ (ಆ.22) ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಗುವುದು” ಎಂದು ಸುನೀಲ್‌ ಕುಮಾರ್‌ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X