ಅಭ್ಯರ್ಥಿ ಪಟ್ಟಿ ಘೋಷಣೆಗೆ ಕಡೆಗೂ ಸಿದ್ಧವಾದ ಬಿಜೆಪಿ; ಏಪ್ರಿಲ್ 7ಕ್ಕೆ ಹುರಿಯಾಳುಗಳ ಪಟ್ಟಿ ಬಿಡುಗಡೆ?

Date:

  • ಏಪ್ರಿಲ್ ಮೊದಲ ವಾರದ ಅಂತ್ಯಕ್ಕೆ ಬಿಜೆಪಿ ಅಭ್ಯರ್ಥಿ ಪಟ್ಟಿ ಬಿಡುಗಡೆ
  • ಎಲ್ಲ ಮುಖಂಡರಿಗೂ ರಾಜ್ಯ ಪ್ರವಾಸಕ್ಕೆ ಸೂಚನೆ ನೀಡಿದ ವರಿಷ್ಟರು

ಚುನಾವಣೆ ನೀತಿ ಸಂಹಿತೆ ಬಳಿಕ ಬಿಜೆಪಿ ಅಭ್ಯರ್ಥಿ ಪಟ್ಟಿ ಬಿಡುಗಡೆ ಮಾಡಲಾಗುವುದೆಂದು ತಿಳಿಸಿದ್ದ ಕಮಲ ಪಕ್ಷ ನಾಯಕರು ಅದರಂತೆ ನಡೆದುಕೊಂಡಿದ್ದಾರೆ. ಉಮೇದುವಾರರ ಪಟ್ಟಿ ಬಿಡುಗಡೆ ಮಾಡಲು ಮುಹೂರ್ತ ನಿಗದಿ ಮಾಡಿಕೊಂಡುವ ಕಮಲ ಪಕ್ಷ ಏಪ್ರಿಲ್ 6 ಅಥವಾ 7 ರಂದು ಹೆಸರು ಘೋಷಣೆ ಮಾಡಲಿದೆ.

ಬೆಳಗಾವಿಯಲ್ಲಿ ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರಲ್ಹಾದ್ ಜೋಶಿ, ಪಕ್ಷದ ಅಭ್ಯರ್ಥಿ ಆಯ್ಕೆ ಬಗ್ಗೆ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ. ಈ ಪ್ರಕ್ರಿಯೆ ಬಹುತೇಕ ಅಂತಿಮಗೊಂಡಿದೆ. ಏಪ್ರಿಲ್ 6 ಅಥವಾ 7ರಂದು ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ಹೇಳಿದರು.

ಉಳಿದಂತೆ ಬಿಜೆಪಿ ಚುನಾವಣಾ ತಯಾರಿ ಕುರಿತಂತೆ ಮಾಹಿತಿ ಒದಗಿಸಿದ ಅವರು, ಪಕ್ಷದ ನಾಯಕರು ಚುನಾವಣೆಯನ್ನು ಬಹಳ ಗಂಭಿರವಾಗಿ ಪರಿಗಣಿಸಿದ್ದೇವೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಎಲ್ಲಾ ಸಂಸದರ ಸಭೆ ಕರೆಯಲಾಗಿದೆ. ಅಲ್ಲಿ ಬಾಕಿ ಚುನಾವಣಾ ಕಾರ್ಯತಂತ್ರಗಳ ಚರ್ಚೆ ನಡೆಯಲಿದೆ.

ಅದರ ಜೊತೆಜೊತೆಗೆ ನನ್ನನ್ನೂ ಒಳಗೊಂಡಂತೆ ಎಲ್ಲ ನಾಯಕರು, ಸಂಸದರು ರಾಜ್ಯಾದ್ಯಂತ ಪ್ರವಾಸ ಮಾಡುತ್ತೇವೆ.ಈ ಕಾರಣದಿಂದ ಚುನಾವಣೆ ಮುಗಿಯುವವರೆಗೆ ನಮ್ಮ ಎಲ್ಲಾ ಸಂಸದರು, ರಾಜ್ಯಸಭಾ ಸದಸ್ಯರು ಅವರವರ ಜಿಲ್ಲೆಗಳಲ್ಲಿ ಇದ್ದು ಕಾರ್ಯನಿರ್ವಹಿಸಬೇಕಾಗುತ್ತದೆ ಎಂದು ಜೋಶಿ ಹೇಳಿದರು.

ಈ ಸುದ್ದಿ ಓದಿದ್ದೀರಾ?: ಬಿಜೆಪಿಗೆ ʼಮಾರಿ ಹಬ್ಬʼ ಮಾಡಲು ಜನ ʼಮತದಾನದ ದೊಣ್ಣೆʼ ಹಿಡಿದು ಕಾಯುತ್ತಿದ್ದಾರೆ: ಕೃಷ್ಣ ಬೈರೇಗೌಡ

ಇದೇ ವೇಳೆ ವಿಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ ಪ್ರಲ್ಹಾದ್ ಜೋಶಿ, ಸುಳ್ಳು ಆಶ್ವಾಸನೆಗಳ ಗ್ಯಾರಂಟಿ ಕಾರ್ಡ್ ತೋರಿಸಿ ಕಾಂಗ್ರೆಸ್ ಮತಯಾಚನೆ ಮಾಡುತ್ತಿದೆ. ಜನ ಇದನ್ನು ನಂಬುವುದಿಲ್ಲ. ಈ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಸೋಲು ಕಟ್ಟಿಟ್ಟ ಬುತ್ತಿ. ರಾಜ್ಯದಲ್ಲಿ ಸ್ಪಷ್ಟ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬರುತ್ತೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಪ್ರಧಾನಿ ಮೋದಿ ನೇತೃತ್ವದಲ್ಲಿ ನಮ್ಮ ಸರ್ಕಾರ ಜನಪರ ಕೆಲಸಗಳನ್ನು ಮಾಡಿದೆ. ಇವೇ ನಮ್ಮ ಮತಯಾಚನೆಯ ಬಂಡವಾಳ. ಅಭಿವೃದ್ದಿ ಕಾರ್ಯಗಳನ್ನು ನೋಡಿಕೊಂಡೇ ಮತದಾರರು ಮರಳಿ ಬಿಜೆಪಿಯನ್ನು ಅಧಿಕಾರಕ್ಕೆ ತರುತ್ತಾರೆ ಎಂದು ಪ್ರಲ್ಹಾದ್ ಜೋಶಿ ವಿಶ್ವಾಸ ವ್ಯಕ್ತಪಡಿಸಿದರು.

+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈತ್ರಿ ಕಗ್ಗಂಟು | ಪ್ರತಾಪ್ ಸಿಂಹಗೆ ಬಿಜೆಪಿ ಟಿಕೆಟ್ ಸಿಗುವುದೇ ಡೌಟು!

ಲೋಕಸಭಾ ಚುನಾವಣೆಗಾಗಿ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿ ಮಾಡಿಕೊಂಡಿವೆ. ರಾಜ್ಯದಲ್ಲಿ...

ಕಲಬುರಗಿ | ಕೆಇಎ ಪರೀಕ್ಷಾ ಅಕ್ರಮ ಪ್ರಕರಣ; ಇಬ್ಬರು ಪ್ರಾಂಶುಪಾಲರ ಬಂಧನ

ಕಳೆದ ಅಕ್ಟೋಬರ್‌ 28 ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸಿದ...

ಹೆಚ್ಚುವರಿಯಾಗಿ 188 ಇಂದಿರಾ ಕ್ಯಾಂಟೀನ್ ಸ್ಥಾಪನೆ: ಸಿದ್ದರಾಮಯ್ಯ ಭರವಸೆ

ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಹೇಳಿಕೆ ಸ್ಥಳದ ಅಭಾವವಿರುವ...

ಗುತ್ತಿಗೆದಾರರ ಬಾಕಿ ಹಣ ಪಾವತಿ ವಿಚಾರ: ರಾಜ್ಯ ಸರ್ಕಾರದ ವಿರುದ್ಧ ಹೈಕೋರ್ಟ್‌ ಕಿಡಿ

'ಇನ್ನೆಷ್ಟು ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳಬೇಕು?' ಹೈಕೋರ್ಟ್‌ ಕಿಡಿ ಬಾಕಿ ಪಾವತಿಯಲ್ಲೂ...