ಬಿಎಸ್‌ಪಿ ಸಂಸದ ಡ್ಯಾನಿಶ್ ಅಲಿ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿದ ಬಿಜೆಪಿ ಸಂಸದ ರಮೇಶ್ ಬಿಧೂರಿ ಅವರನ್ನು ಮುಂಬರುವ ವಿಧಾನಸಭಾ ಚುನಾವಣೆಗೆ ರಾಜಸ್ಥಾನದ ಟೋಂಕ್ ಜಿಲ್ಲೆಗೆ ಉಸ್ತುವಾರಿಯನ್ನಾಗಿ ನೇಮಿಸಿರುವ ಬಿಜೆಪಿ ನಿರ್ಧಾರದ ಬಗ್ಗೆ ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್ ಟೀಕಿಸಿದ್ದಾರೆ.
ಈ ಬಗ್ಗೆ ಟ್ವಿಟರ್‌ನಲ್ಲಿ ಬರೆದುಕೊಂಡಿರುವ ಕಪಿಲ್ ಸಿಬಲ್ ಅವರು, ಕೇಸರಿ ಪಕ್ಷವು “ದ್ವೇಷಕ್ಕೆ ಪ್ರತಿಫಲ ನೀಡುತ್ತದೆ”. ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಬಿಎಸ್‌ಪಿ ಸಂಸದ ಡ್ಯಾನಿಶ್ ಅಲಿ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿದ ಬಿಧೂರಿ ಅವರಿಗೆ ಬಹುಮಾನ ನೀಡಲಾಗಿದೆ. ಇವರನ್ನು ರಾಜಸ್ಥಾನದ ಟೋಂಕ್ ಜಿಲ್ಲೆಯ ಬಿಜೆಪಿ ಉಸ್ತುವಾರಿಯನ್ನಾಗಿ ಘೋಷಿಸಲಾಗಿದೆ. ಟೋಂಕ್‌ನಲ್ಲಿ ಮುಸ್ಲಿಂ ಸಮುದಾಯ ಶೇ.29.25 ಯಿದ್ದು, ರಾಜಕೀಯ ಲಾಭಾಂಶಕ್ಕಾಗಿ ದ್ವೇಷವನ್ನು ಸಂಕೇತಿಸಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಅವರ ಪ್ರಬಲ ಭದ್ರಕೋಟೆಯಾಗಿರುವ ರಾಜಸ್ಥಾನದ ಟೋಂಕ್ ಜಿಲ್ಲೆಯ ಉಸ್ತುವಾರಿಯಾಗಿ ಬಿಧೂರಿ ಅವರನ್ನು ಬಿಜೆಪಿ ಘೋಷಿಸಿದ ಒಂದು ದಿನದ ನಂತರ ಸಿಬಲ್ ಟ್ವೀಟ್ ಮಾಡಿದ್ದಾರೆ.
ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಮತ್ತು ಇತರ ಹಲವು ವಿರೋಧ ಪಕ್ಷದ ಸಂಸದರು ಬಿಧೂರಿಯನ್ನು ಸಂಸತ್ತಿನಿಂದ ಅಮಾನತುಗೊಳಿಸಬೇಕೆಂದು ಒತ್ತಾಯಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಪೋಸ್ಟರ್ ವಿವಾದದ ನಂತರ ಸಸ್ಯಾಹಾರಿಗಳಿಗೆ ಪ್ರತ್ಯೇಕ ಸ್ಥಳ ಮೀಸಲಿಟ್ಟ ಬಾಂಬೆ ಐಐಟಿ: ಮತ್ತೊಂದು ವಿವಾದ
ಅವರು ಬಳಸುವ ಭಾಷೆಯನ್ನು ಸಂಸತ್ತಿನ ಒಳಗೆ ಅಥವಾ ಹೊರಗೆ ಬಳಸಬಾರದು. ಸದನದಲ್ಲಿ ಬಿಧೂರಿ ಮಾಡಿದ ಆಕ್ಷೇಪಾರ್ಹ ಮಾತುಗಳನ್ನು ಸ್ಪೀಕರ್ ಬಿರ್ಲಾ ಅವರು “ಗಂಭೀರವಾಗಿ ಗಮನಿಸಿದರು” ಮತ್ತು ಭವಿಷ್ಯದಲ್ಲಿ ಅಂತಹ ನಡವಳಿಕೆಯನ್ನು ಪುನರಾವರ್ತಿಸಿದರೆ “ಕಠಿಣ ಕ್ರಮ” ನೀಡುವುದಾಗಿ ಎಚ್ಚರಿಕೆ ನೀಡಿದರು.
ಅಲಿ ಅವರು ತಮ್ಮ ಪ್ರಕರಣವನ್ನು ವಿಶೇಷಾಧಿಕಾರ ಸಮಿತಿಗೆ ಶಿಫಾರಸ್ಸು ಮಾಡಲು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದು ಈ ವಿಷಯದ ಬಗ್ಗೆ ತನಿಖೆಗೆ ಆದೇಶಿಸುವಂತೆ ಒತ್ತಾಯಿಸಿದರು. ಲೋಕಸಭೆಯಲ್ಲಿ ಬಿಎಸ್‌ಪಿ ಸಂಸದರ ವಿರುದ್ಧ ಅಸಂಸದೀಯ ಪದಗಳನ್ನು ಬಳಸಿದ್ದಕ್ಕಾಗಿ ಬಿಜೆಪಿ ಸಂಸದ ಬಿಧೂರಿ ಅವರಿಗೆ ಶೋಕಾಸ್ ನೋಟಿಸ್ ನೀಡಿದೆ.