ಕೇರಳ | ಕ್ರಿಸ್‌ಮಸ್ ಕ್ಯಾರೋಲ್ ಗುಂಪಿನ ಮೇಲೆ ದಾಳಿ: ಬಿಜೆಪಿ ಸದಸ್ಯನ ಬಂಧನ

Date:

ಕೇರಳದ ವಲಯಾರ್‌ನಿಂದ ಕೇವಲ ಒಂದು ಕಿಲೋಮೀಟರ್ ದೂರದಲ್ಲಿರುವ ಪಾಲಕ್ಕಾಡ್‌ನ ಪುತ್ತುಶ್ಯೇರಿಯಲ್ಲಿ ಮಕ್ಕಳ ಕ್ರಿಸ್‌ಮಸ್ ಕ್ಯಾರೋಲ್‌ ಗುಂಪಿನ ಮೇಲೆ ದಾಳಿ ಮಾಡಿದ ಬಿಜೆಪಿ–ಆರ್‌ಎಸ್‌ಎಸ್ ಸದಸ್ಯನನ್ನು ಬಂಧಿಸಲಾಗಿದೆ. ಇದೇ ಪ್ರದೇಶದಲ್ಲಿ ಛತ್ತೀಸ್‌ಗಢದ ದಲಿತ ವಲಸೆ ಕಾರ್ಮಿಕನ ಹತ್ಯೆ ಮಾಡಲಾಗಿತ್ತು.

- Advertisement -

ಆರೋಪಿ ಪುತ್ತುಶ್ಯೇರಿಯ ಕಲಾದಿತರ ನಿವಾಸಿ ಅಶ್ವಿನ್ ರಾಜ್‌ನನ್ನು ಕಸಬಾ ಪೊಲೀಸರು ವಶಕ್ಕೆ ಪಡೆದಿದ್ದು, ಆತ ಭಾರತೀಯ ಜನತಾ ಪಕ್ಷ(ಬಿಜೆಪಿ) ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘದ(ಆರ್‌ಎಸ್‌ಎಸ್‌) ಸಕ್ರಿಯ ಸದಸ್ಯ ಎಂದು ಹೇಳಲಾಗಿದೆ. ಶೀಘ್ರದಲ್ಲೇ ನ್ಯಾಯಾಲಯಕ್ಕೆ ಹಾಜರುಪಡಿಸುವ ನಿರೀಕ್ಷೆಯಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಇದನ್ನು ಓದಿದ್ದೀರಾ? ಕೇರಳ | ಕ್ರಿಸ್‌ಮಸ್ ಆಚರಣೆಗೆ ಸಂಘಪರಿವಾರ ಅಡ್ಡಿ; ಗೋದಲಿ ಧ್ವಂಸ, ಬೆದರಿಕೆ

ಸೋಮವಾರ ತಡರಾತ್ರಿ ಪುತ್ತುಶ್ಯೇರಿಯ ಸುರಭಿ ನಗರದಲ್ಲಿ ಈ ಘಟನೆ ನಡೆದಿದ್ದು, ಅಶ್ವಿನ್ ರಾಜ್ ಮತ್ತು ಇತರ ಇಬ್ಬರು ಸುಮಾರು 10 ಜನರಿದ್ದ ಕ್ರಿಸ್‌ಮಸ್ ಕ್ಯಾರೋಲ್ ಗುಂಪಿನ ಮೇಲೆ ದಾಳಿ ನಡೆಸಿದೆ. ಈ ಪ್ರದೇಶದಲ್ಲಿ ಕ್ಯಾರೋಲ್ ನಡೆಸಲು ಬಿಡಲ್ಲ ಎಂದು ಅಶ್ವಿನ್ ಮತ್ತು ಆತನ ಸ್ನೇಹಿತರು ಹೇಳಿದ್ದಾರೆ ಎಂದು ಆರೋಪಿಸಲಾಗಿದೆ.

ಗುಂಪು ಕ್ಯಾರೋಲ್ ವೇಳೆ ‘ಸಿಪಿಐ(ಎಂ)’ ಎಂದು ಉಲ್ಲೇಖಿಸಿದೆ. ಇದರಿಂದಾಗಿ ವಾಗ್ವಾದ ಉಂಟಾಗಿದೆ ಎಂದು ವರದಿಯಾಗಿದೆ. ದಾಳಿಕೋರರು ಬ್ಯಾಂಡ್ ಸೆಟ್ ಮತ್ತು ಇತರ ಸಂಗೀತ ಉಪಕರಣಗಳಿಗೆ ಹಾನಿ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಅದಾದ ಬಳಿಕ ಕ್ಯಾರೋಲ್ ಗುಂಪು ಕಸಬಾ ಪೊಲೀಸರಿಗೆ ದೂರು ನೀಡಿದೆ. ದಾಳಿಯನ್ನು ಬಿಜೆಪಿ-ಆರ್‌ಎಸ್‌ಎಸ್ ಕಾರ್ಯಕರ್ತರು ನಡೆಸಿದ್ದಾರೆ ಎಂದು ಆರೋಪಿಸಿದೆ.

ಘಟನೆಯ ರಾತ್ರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ದಾಳಿಕೋರರು ಪರಾರಿಯಾಗಿದ್ದರು. ಕಸಬಾ ಇನ್ಸ್‌ಪೆಕ್ಟರ್ ಎಂ. ಸುಜಿತ್ ಪ್ರಕರಣ ದಾಖಲಿಸಲಾಗಿದ್ದು ತನಿಖೆ ನಡೆಯುತ್ತಿದೆ ಎಂದು ದೃಢಪಡಿಸಿದ್ದಾರೆ.

ಇದನ್ನು ಓದಿದ್ದೀರಾ? ಬೆಂಗಳೂರು | ಜಿನೊಮಿಕ್ ಸೀಕ್ವೆನ್ಸ್​ಗೆ 45 ಸ್ಯಾಂಪಲ್ ಕಳಿಸಿದ ಆರೋಗ್ಯ ಇಲಾಖೆ

ಇನ್ನು ಸಿಪಿಐಎಂ ಪುತ್ತುಶ್ಶೇರಿ ಪ್ರದೇಶ ಸಮಿತಿಯ ನಾಯಕರು ದಾಳಿಗೆ ಒಳಗಾದವರು 180-15 ವರ್ಷದ ಮಕ್ಕಳು ಎಂದಿದ್ದಾರೆ. ಬಿಜೆಪಿ-ಆರ್‌ಎಸ್‌ಎಸ್ ಕಾರ್ಯಕರ್ತರು ಕೋಮು ಸಾಮರಸ್ಯವನ್ನು ಕದಡಲು ಮತ್ತು ಪ್ರದೇಶದ ಶಾಂತಿಯುತ ವಾತಾವರಣವನ್ನು ಭಂಗಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಕಳೆದ ವರ್ಷವೂ ಸಹ, ಪಾಲಕ್ಕಾಡ್‌ನ ಸರ್ಕಾರಿ ಶಾಲೆಯಲ್ಲಿ ಕ್ರಿಸ್‌ಮಸ್ ಆಚರಣೆಗೆ ಅಡ್ಡಿಪಡಿಸಿದ್ದಕ್ಕಾಗಿ ವಿಶ್ವ ಹಿಂದೂ ಪರಿಷತ್‌ನ ಇಬ್ಬರು ನಾಯಕರು ಮತ್ತು ಬಜರಂಗದಳದ ಕಾರ್ಯಕರ್ತನ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

4 ವರ್ಷಗಳಲ್ಲಿ 111 ಸಂಸದರು, ಶಾಸಕರ ಪಕ್ಷಾಂತರ: ಶೇ. 26ರಷ್ಟು ನಾಯಕರನ್ನು ಸೇರಿಸಿಕೊಂಡ ಬಿಜೆಪಿ!

ದೇಶದ ರಾಜಕೀಯ ಕ್ಷೇತ್ರದಲ್ಲಿ ಜನಪ್ರತಿನಿಧಿಗಳ ಪಕ್ಷಾಂತರ ಪರ್ವ ತಡೆಯಿಲ್ಲದೆ ಮುಂದುವರಿದಿದೆ. ಅದರಲ್ಲೂ...

ಮಳೆ ಅಬ್ಬರ: ಉತ್ತರ ಪ್ರದೇಶದಲ್ಲಿ 10 ಮಂದಿ ಸಾವು; ಒಡಿಶಾದಲ್ಲಿ ಪ್ರವಾಹ

ದೇಶದ ಹಲವು ರಾಜ್ಯಗಳಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಉತ್ತರ ಪ್ರದೇಶ...

26 ಬಾರಿ ಸೋತರೂ ಕುಗ್ಗದ ಛಲ; 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕ ಹುದ್ದೆ ಪಡೆದ ವೃದ್ಧ

ಸರಿಯಾದ ಪ್ರಯತ್ನ ಮತ್ತು ಛಲವಿದ್ದರೆ ವಯಸ್ಸು ಕೇವಲ ಒಂದು ಸಂಖ್ಯೆಯಷ್ಟೇ ಎಂಬುದನ್ನು...

1,870 ಕೋಟಿ ರೂ. ದೇಣಿಗೆ ದಂಧೆ ಆರೋಪ: ಗುಜರಾತ್‌ನ 3 ರಾಜಕೀಯ ಪಕ್ಷಗಳ ಅಕ್ರಮ ಬಯಲು

ಗುಜರಾತ್‌ನಲ್ಲಿ ನೋಂದಾಯಿತವಾಗಿದ್ದ, ಆದರೆ ಮಾನ್ಯತೆ ಪಡೆಯದ ಮೂರು ರಾಜಕೀಯ ಪಕ್ಷಗಳು ಆದಾಯ...