ಲೋಕಸಭಾ ಚುನಾವಣೆಯಲ್ಲೂ ಬಿಜೆಪಿಯನ್ನು ಸೋಲಿಸಬೇಕು; ಸಿಎಂ ಜೊತೆ ‘ಎದ್ದೇಳು ಕರ್ನಾಟಕ’ ನಿಯೋಗ ಚರ್ಚೆ

Date:

ನಾಡಿನ ಜನತೆ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಸಿದ್ಧಾಂತವನ್ನು ಚುನಾವಣೆಯಲ್ಲಿ ಸ್ಪಷ್ಟವಾಗಿ ತಿರಸ್ಕರಿಸಿದ್ದಾರೆ. ಇದಕ್ಕಾಗಿ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಶ್ರಮಿಸಿದವರ ನಿರೀಕ್ಷೆಗೆ ತಕ್ಕಂತೆ ಸರ್ಕಾರ ಕೆಲಸ ಮಾಡುತ್ತದೆ. ಕನ್ನಡ ನಾಡಿನ ನೆಮ್ಮದಿ ಕೆಡಿಸುವ ವಿಚಾರದಲ್ಲಿ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ʼಕೋಮುವಾದಿ ಬಿಜೆಪಿಯನ್ನು ಸೋಲಿಸಲುʼ ರಾಜ್ಯದ ನಾನಾ ಭಾಗಗಳಲ್ಲಿ ಶ್ರಮಿಸಿದ ‘ಎದ್ದೇಳು ಕರ್ನಾಟಕ’ ಅಭಿಯಾನದ ನಿಯೋಗವು ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಹಲವಾರು ವಿಚಾರಗಳ ಬಗ್ಗೆ ಚರ್ಚಿಸಿದೆ. ಲೋಕಸಭಾ ಚುನಾವಣೆಯಲ್ಲೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು, ಸಂವಿಧಾನದ ಆಶಯಗಳನ್ನು ಗೆಲ್ಲಿಸುವ ಮೂಲಕ ಬಿಜೆಪಿಯನ್ನು ಸೋಲಿಸಲು ಅಗತ್ಯವಾಗಿ ಮಾಡಬೇಕಾದ ಸಿದ್ಧತೆಗಳ ಬಗ್ಗೆ ಮಾತುಕತೆ ನಡೆಸಿದೆ.

ನಿಯೋಗದೊಂದಿಗೆ ಮಾತನಾಡಿದ ಸಿದ್ದರಾಮಯ್ಯ, “ರಾಜ್ಯದಲ್ಲಿ ಬಡವರು, ದಲಿತರು, ಹಿಂದುಳಿದವರು ಮತ್ತು ಅಲ್ಪಸಂಖ್ಯಾತರು ಭಯದ ವಾತಾವರಣದಲ್ಲಿ ಬದುಕುವ ಸನ್ನಿವೇಶ ಸೃಷ್ಟಿಯಾಗಿತ್ತು. ಇದನ್ನು ನಮ್ಮ ಸರ್ಕಾರ ಬದಲಾಯಿಸಿ, ಈ ವರ್ಗಗಳ ಜನರಲ್ಲಿ ಸುರಕ್ಷತೆಯ ಭಾವ ಮೂಡಿಸಲು ಕೆಲಸ ಮಾಡಲಿದೆ. ಈಗಾಗಲೇ ಕೆಲಸ ಪ್ರಾರಂಭವಾಗಿದೆ” ಎಂದು ತಿಳಿಸಿದರು.

“ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಸಮಾಜದಲ್ಲಿ ಭೀತಿಯ ವಾತಾವರಣ ಸೃಷ್ಟಿಸುವವರು, ಸಾಮಾಜಿಕ ಜಾಲತಾಣಗಳ ಮೂಲಕ ಸಾಮರಸ್ಯ ಕದಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಪೊಲೀಸ್‌ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿದ್ದೇನೆ. ಇನ್ನು ಮುಂದೆ ರಾಜ್ಯದಲ್ಲಿ ಅನೈತಿಕ ಪೊಲೀಸ್‌ಗಿರಿಗೆ ಅವಕಾಶವಿಲ್ಲ” ಎಂದರು.

“ಸರ್ಕಾರವು ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಲಿದೆ. ಚುನಾವಣೆ ಸಂದರ್ಭದಲ್ಲಿ ಭರವಸೆ ನೀಡಿದ 5 ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಲಾಗುವುದು. ಇದಕ್ಕೆ ವಾರ್ಷಿಕ 59,000 ಕೋಟಿ ರೂ. ಹಣಕಾಸಿನ ಅಗತ್ಯವಿದ್ದು, ಪ್ರಸಕ್ತ ವರ್ಷದ ಬಾಕಿ ಉಳಿದ ತಿಂಗಳುಗಳಿಗೆ 41,000 ಕೋಟಿ ರೂ. ಗಳ ಅಗತ್ಯವಿದೆ” ಎಂದು ವಿವರಿಸಿದರು.

ಈ ಸುದ್ದಿ ಓದಿದ್ದೀರಾ?: ಬಿಜೆಪಿ ಸಭೆ | ಶಾಸಕರಿಗೆ ಲೋಕಸಭೆ ಚುನಾವಣೆಯ ಗುರಿ; ಅಂತಿಮವಾಗದ ವಿಪಕ್ಷ ನಾಯಕ ಆಯ್ಕೆ

“ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಮರುಪರಿಶೀಲಿಸಿ, ಹೊಸ ನೀತಿ ಜಾರಿ ಜೊತೆಗೆ ಹಲವು ಜನ ವಿರೋಧಿ ಕಾಯ್ದೆಗಳನ್ನು ರದ್ದುಪಡಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ” ಎಂದು ತಿಳಿಸಿದರು.

ನಿಯೋಗದಲ್ಲಿ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಕೆ.ಎಂ ರಾಮಚಂದ್ರಪ್ಪ, ಕರ್ನಾಟಕ ಜನಶಕ್ತಿಯ ನೂರ್ ಶ್ರೀಧರ್, ವಿಜಯಮ್ಮ, ಮಲ್ಲಿಗೆ, ಜಾಗತಿಕ ಲಿಂಗಾಯಿತ ಮಹಾಸಭಾದ ಜಿ.ಬಿ.ಪಾಟೀಲ್, ಜಮಾತ್‌ ಎ ಇಸ್ಲಾಮಿ ಹಿಂದ್‌ನ ಯೂಸುಫ್ ಖನ್ನಿ, ತಾರಾರಾವ್ ಸೇರಿದಂತೆ 30ಕ್ಕೂ ಅಧಿಕ ಮಂದಿ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. EVM ಮೇಲೆ ನಿಗಾ ಇರಿಸುವ ಕೆಲಸ ಇನ್ನು ಮುಂದೆ ಆಗಬೇಕು.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಲಿಪ್‌ಸ್ಟಿಕ್‌ ಹಾಕಿದ ಮಹಿಳೆಯರು ಮುಂದೆ ಬರುತ್ತಾರೆ’; ಮಹಿಳಾ ಮೀಸಲಾತಿ ಬಗ್ಗೆ ಆರ್‌ಜೆಡಿ ನಾಯಕ ಸೆಕ್ಸಿಸ್ಟ್ ಹೇಳಿಕೆ

ಮಹಿಳಾ ಮೀಸಲಾತಿ ಮಸೂದೆಯ ಅಂಗೀಕಾರದಿಂದ ‘ಲಿಪ್‌ಸ್ಟಿಕ್‌ ಮತ್ತು ಬಾಬ್-ಕಟ್ ಹೇರ್ ಸ್ಟೈಲ್’...

ಮುಂಗಾರು ಅಂತ್ಯ; 236 ತಾಲೂಕುಗಳ ಪೈಕಿ 4 ತಾಲೂಕುಗಳಲ್ಲಷ್ಟೇ ಅತ್ಯಧಿಕ ಮಳೆ

ರಾಜ್ಯದಲ್ಲಿ ನೈರುತ್ಯ ಮುಂಗಾರು ಮಳೆಯ ಅವಧಿ ಇಂದಿಗೆ ಮುಗಿದಿದೆ. ಸಾಮಾನ್ಯವಾಗಿ ಜೂನ್...

ʼಗಾಂಧಿ ಗ್ರಾಮ ಪುರಸ್ಕಾರʼಕ್ಕೆ 233 ಗ್ರಾಮ ಪಂಚಾಯಿತಿ ಆಯ್ಕೆ: ಪ್ರಿಯಾಂಕ್‌ ಖರ್ಗೆ

ಅ.2ರಂದು ಸಿಎಂ ಸಿದ್ದರಾಮಯ್ಯ ಅವರಿಂದ ಪ್ರಶಸ್ತಿ ಪ್ರದಾನ 4 ಗ್ರಾಮ...

ನಿತೀಶ್ ಪ್ರಯಾಣಕ್ಕೆ ಸಂಚಾರ ತಡೆ; ಟ್ರಾಫಿಕ್‌ನಲ್ಲಿ ಸಿಲುಕಿದ ಜೀವನ್ಮರಣ ಹೋರಾಟ ನಡೆಸುತ್ತಿದ್ದ ಮಗು

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಪ್ರಯಾಣಕ್ಕಾಗಿ ಪೊಲೀಸರು ರಸ್ತೆಯಲ್ಲಿ ಇತರ ವಾಹನ...