ಬಿಜೆಪಿ ಪಿಎಂ ಮೋದಿಯನ್ನು ಬದಲಿಸಿ, ಹೊಸ ನಾಯಕರನ್ನು ಆಯ್ಕೆ ಮಾಡಬೇಕು: ಟಿಎಂಸಿ ನಾಯಕಿ

Date:

ಬಿಜೆಪಿ ಹೊಸ ನಾಯಕರನ್ನು ಆಯ್ಕೆ ಮಾಡಿಕೊಳ್ಳಬೇಕು ಮತ್ತು ಪ್ರಧಾನಿ ನರೇಂದ್ರ ಮೋದಿಯನ್ನು ಬದಲಾಯಿಸಬೇಕು ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕಿ ಸಾಗರಿಕಾ ಘೋಸ್ ಹೇಳಿದ್ದಾರೆ.

- Advertisement -

“ಬಿಜೆಪಿಯು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಂಪೂರ್ಣವಾಗಿ ಕೇಂದ್ರಿಕರಿಸಿ ಪ್ರಚಾರವನ್ನು ಮಾಡಿದೆ. ಆದರೂ ಕೂಡಾ ಮೋದಿ ಅವರಿಗೆ ಲೋಕಸಭೆ ಚುನಾವಣೆಯಲ್ಲಿ ಬಹುಮತ ಪಡೆಯಲು ಸಾಧ್ಯವಾಗಿಲ್ಲ. ಈ ಕಾರಣದಿಂದಾಗಿ ಅವರ ಸ್ಥಾನವನ್ನು ಬದಲಾಯಿಸಬೇಕು” ಎಂದು ಅಭಿಪ್ರಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಈ ಬಗ್ಗೆ ಎಕ್ಸ್‌ ಪೋಸ್ಟ್ ಮಾಡಿರುವ ಸಾಗರಿಕಾ ಘೋಸ್, “ನರೇಂದ್ರ ಮೋದಿ ಅವರ ‘ಪ್ರಮಾಣ ವಚನ’ ವನ್ನು ಆಚರಿಸುತ್ತಿರುವ ಎಲ್ಲರಿಗೂ, ಭಾರತದ ಏಕೈಕ ಮಹಿಳಾ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಂದ ಸಂದೇಶ” ಎಂದು ಟಿಎಂಸಿ ನಾಯಕಿ ಬರೆದುಕೊಂಡಿದ್ದಾರೆ.

“ಜನಾದೇಶವನ್ನು ಸಂಪೂರ್ಣವಾಗಿ ಕಳೆದುಕೊಂಡಿರುವ ಮತ್ತು ಜನರಿಂದ ತಿರಸ್ಕರಿಸಲ್ಪಟ್ಟ ಪ್ರಧಾನಿಗಾಗಿ ಸಮಾರಂಭ ನಡೆದ ಸಂದರ್ಭದಲ್ಲಿ ಮಮತಾ ಬ್ಯಾನರ್ಜಿ ತನ್ನ ಎಲ್ಲಾ ದೀಪಗಳನ್ನು ಆಫ್ ಮಾಡಿ ಕತ್ತಲೆಯಲ್ಲಿ ಕುಳಿತರು” ಎಂದು ಟಿಎಂಸಿ ನಾಯಕಿ ಹೇಳಿದ್ದಾರೆ.

ಇದನ್ನು ಓದಿದ್ದೀರಾ?  ಈ ದಿನ ಸಂಪಾದಕೀಯ | ಮೂರನೇ ಬಾರಿಗೆ ಪ್ರಧಾನಿಯಾದ ಮೋದಿ, ಹೊಸ ಮನುಷ್ಯರಾಗುವರೇ?

“ವಾರಣಾಸಿಯಲ್ಲಿ ಬಹುತೇಕ ಸೋತ, ಅಯೋಧ್ಯೆಯಲ್ಲಿ ಸೋತ, ಸಂಪೂರ್ಣವಾಗಿ ತನ್ನ ಮೇಲೆಯೇ ಕೇಂದ್ರೀಕೃತವಾದ ಪ್ರಚಾರದ ಹೊರತಾಗಿಯೂ ಬಹುಮತವನ್ನು ಪಡೆಯಲು ಸಾಧ್ಯವಾಗದ ಮೋದಿಯನ್ನು ಬದಲಾಯಿಸಬೇಕು. ಬಿಜೆಪಿ ಹೊಸ ನಾಯಕರನ್ನು ಆಯ್ಕೆ ಮಾಡಲಿ” ಎಂದು ಸಾಗರಿಕಾ ಘೋಸ್ ಅಭಿಪ್ರಾಯಿಸಿದ್ದಾರೆ.

ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ಮೂರನೇ ಅವಧಿಗೆ ನರೇಂದ್ರ ಮೋದಿ ಪ್ರಧಾನಿಯಾಗಿ ಭಾನುವಾರ ಪ್ರಮಾಣ ವಚನ ಸ್ವೀಕರಿಸಿದರು. ಪ್ರಧಾನಿ ಮೋದಿ 2019ರಲ್ಲಿ ನಾಲ್ಕು ಲಕ್ಷಕ್ಕೂ ಅಧಿಕ ಅಂತರದಲ್ಲಿ ಗೆಲುವು ಕಂಡಿದ್ದರು. ಆದರೆ ಈ ಬಾರಿ ಬರೀ 1,52,513 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...

ಇಂದೋರ್‌ನಲ್ಲಿ 1.36 ಲಕ್ಷ ಮತದಾರರ ಹೆಸರು ಡಿಲೀಟ್‌: ‘ದಾಖಲೆಗಳೇ ಇಲ್ಲ’ ಎಂದ ಅಧಿಕಾರಿಗಳು, ‘ಆರ್‌ಟಿಐ’ ಉತ್ತರದಲ್ಲಿ ಬಹಿರಂಗ

ಮಧ್ಯಪ್ರದೇಶದ ಇಂದೋರ್‌ ಜಿಲ್ಲೆಯಲ್ಲಿ ಒಟ್ಟು 1.36 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರುಗಳನ್ನು...

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...