2024ರಲ್ಲಿ ನಡೆದ ಲೋಕಸಭಾ ಚುನಾವಣೆ ಮತ್ತು ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಗೆ ಬಿಜೆಪಿ ಒಟ್ಟು 1,737.68 ಕೋಟಿ ರೂ. ಖರ್ಚು ಮಾಡಿರುವುದಾಗಿ ಹೇಳಿಕೊಂಡಿದೆ. ಈ ವೆಚ್ಚವು ಇದೇ ಚುನಾವಣೆಗಳಿಗೆ ಕಾಂಗ್ರೆಸ್ ಖರ್ಚು ಮಾಡಿದ ಮೊತ್ತಕ್ಕಿಂತ ಬರೋಬ್ಬರಿ ಮೂರು ಪಟ್ಟು ಹೆಚ್ಚಾಗಿದೆ.
ಚುನಾವಣೆಗಳಿಗೆ ತಾನು ಖರ್ಚು ಮಾಡಿರುವ ಹಣದ ಬಗ್ಗೆ ಚುನಾವಣಾ ಆಯೋಗಕ್ಕೆ ಬಿಜೆಪಿ ಮಾಹಿತಿ ನೀಡಿದೆ. ಅದರಲ್ಲಿ, ಒಟ್ಟು 1,737 ಕೋಟಿ ರೂ. ಖರ್ಚು ಮಾಡಿರುವುದಾಗಿ ಹೇಳಿಕೊಂಡಿರುವ ಬಿಜೆಪಿ, ಅದರಲ್ಲಿ, ಚುನಾವಣಾ ಪ್ರಚಾರಕ್ಕೆ 884.45 ಕೋಟಿ ರೂ. ಮತ್ತು ಅಭ್ಯರ್ಥಿಗಳ ವೆಚ್ಚಕ್ಕೆ 853.23 ಕೋಟಿ ರೂ. ವ್ಯಯಿಸಿರುವುದಾಗಿ ಹೇಳಿಕೊಂಡಿದೆ.
ಇದೇ ಲೋಕಸಭಾ ಚುನಾವಣೆ ಮತ್ತು ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಒಟ್ಟು 584.65 ಕೋಟಿ ರೂ. ಖರ್ಚು ಮಾಡಿದ್ದಾಗಿ ಆಯೋಗಕ್ಕೆ ವರದಿ ಸಲ್ಲಿಸಿದೆ. ಕಾಂಗ್ರೆಸ್‌ನ ವೆಚ್ಚಕ್ಕೆ ಹೋಲಿಸಿದರೆ, ಬಿಜೆಪಿ ಮೂರು ಪಟ್ಟು ಅಧಿಕ ಹಣವನ್ನು ಖರ್ಚು ಮಾಡಿದೆ.
ಅಲ್ಲದೆ, 2019ರ ಚುನಾವಣೆಗಳಲ್ಲಿ ಬಿಜೆಪಿ 1,264.33 ಕೋಟಿ ರೂ. ಖರ್ಚು ಮಾಡಿತ್ತು. ಆ ಮೊತ್ತಕ್ಕೆ ಹೋಲಿಸಿದರೆ, 2024ರಲ್ಲಿ ಬಿಜೆಪಿ ವೆಚ್ಚವು 37% ಅಧಿಕವಾಗಿದೆ. https://youtu.be/wll0F146Waw?si=ZeZ2ToObPejesNKR