ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣೆ | ನನ್ನ ಸ್ಪರ್ಧೆ ಖಚಿತ, ಗೆಲುವು ನಿಶ್ಚಿತ: ಬಸನಗೌಡ ಪಾಟೀಲ್‌ ಯತ್ನಾಳ್

Date:

ಬಿ ವೈ ವಿಜಯೇಂದ್ರ ಅವರ ಬದಲಾವಣೆಗೆ ಬಿಜೆಪಿಯ ಒಂದು ಬಣ ತೀವ್ರ ಆಗ್ರಹಪಡಿಸುತ್ತಿದೆ. ಪ್ರತಿದಿನ ವಿಜಯೇಂದ್ರ ವಿರುದ್ಧ ಶಾಸಕ ಯತ್ನಾಳ್ ಬಹಿರಂಗ ಹೇಳಿಕೆ ನೀಡುವ ಮೂಲಕ ಪಕ್ಷಕ್ಕೆ ಮುಜುಗರ ಸೃಷ್ಟಿಸುತ್ತಿದ್ದಾರೆ. ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ಸಂಬಂಧಿಸಿದಂತೆ ತಾವೂ ಆಕಾಂಕ್ಷಿ ಎಂದು ಬಸನಗೌಡ ಪಾಟೀಲ್‌ ಯತ್ನಾಳ್ ಹೇಳಿದ್ದಾರೆ.

- Advertisement -

ವಿಜಯಪುರದಲ್ಲಿ ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದ ಅವರು, “ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಲು ನಮ್ಮದೊಂದು ಕೋರ್‌ ಕಮಿಟಿ ನಿರ್ಣಯಿಸಿದರೆ ಸ್ಪರ್ಧೆ ಮಾಡುತ್ತೇವೆ. ಅಲ್ಲಿ ನನ್ನ ಹೆಸರೇ ಅಂತಿಮವಾದರೆ ನಾನೇ ಸ್ಪರ್ಧಿಸುತ್ತೇನೆ, ಗೆಲುವು ನಿಶ್ಚಿತ, ಠೇವಣಿ ಉಚಿತ”ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ಉಸ್ತುವಾರಿ ಸಭೆಗೆ ನಾನು ಹೋಗಿಲ್ಲ. ಅಲ್ಲಿ 600 ಶಾಸಕರ ಬೆಂಬಲವಿದೆ. ಅಲ್ಲಿ ನಮಗೇನು ಕೆಲಸ. ವಿಜಯೇಂದ್ರ ಅವರಿಗೆ 600 ಶಾಸಕರು, 1500 ಸಂಸದರು, 2000 ಎಂಎಲ್‌ಸಿಗಳ ಬೆಂಬಲವಿದೆ. ಯತ್ನಾಳ್, ಜಾರಕಿಹೊಳಿ ಹಿಂದೆ ಯಾರಿದ್ದಾರೆ? ಅದಕ್ಕೆ ನಾವು ಹೋಗಿಲ್ಲ” ಲೇವಡಿ ಮಾಡಿದರು.

“ರಾತ್ರಿ ಡಿ ಕೆ ಶಿವಕುಮಾರ್‌ ಮನೆ, ಬೆಳಿಗ್ಗೆ ಸಿದ್ದರಾಮಯ್ಯ ಮನೆ, 11ಕ್ಕೆ ಬೋಲೋ ಭಾರತ್‌ ಮಾತಾ ಕೀ ಜೈ. ಹೀಗಾದರೆ ಹೇಗೆ?” ಎಂದು ಪರೋಕ್ಷವಾಗಿ ವಿಜಯೇಂದ್ರ ವಿರುದ್ಧ ಕುಟುಕಿದರು.

ರೆಡ್ಡಿ-ರಾಮುಲು ಒಂದಾಗಬೇಕು

“ರೆಡ್ಡಿ-ರಾಮುಲು ಜಗಳವಾಡಬಾರದು. ಇಬ್ಬರು ಒಂದಾಗಿರಬೇಕು. ರೆಡ್ಡಿ-ಶ್ರೀರಾಮುಲು ಮಧ್ಯೆ ಕೆಲವರು ಹುಳಿ ಹಿಂಡಿದ್ದಾರೆ. ಇಲ್ಲ-ಸಲ್ಲದ್ದನ್ನೆಲ್ಲ ಹೇಳಿ ಇಬ್ಬರ ನಡುವೆ ಬೆಂಕಿ ಹಚ್ಚಿದ್ದಾರೆ. ಅವರಿಬ್ಬರೂ ಒಂದಾಗಿರಬೇಕು. ಕಷ್ಟದಿಂದ ಬಂದಿರುವ ಅವರಿಬ್ಬರೂ ಒಂದಾಗಿರಬೇಕು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಕಲಿ ಔಷಧ ಜಾಲ ಭೇದಿಸಿದ ಎಸ್‌ಐಟಿ: ಅಜರ್‌ಬೈಜಾನ್‌ಗೆ ಪರಾರಿಯಾಗಿದ್ದ ಕಿಂಗ್‌ಪಿನ್‌ ಪ್ರಶಾಂತ್‌ ಸೆರೆ

ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ನಕಲಿ ಔಷಧ...

RSSಗೆ ಅಪಾರ್ಟ್‌ಮೆಂಟ್ ಬಾಗಿಲು ತೆರೆದಿದ್ದಕ್ಕೆ ಪ್ರಿಯಾಂಕ್ ಖರ್ಗೆ ಆಕ್ಷೇಪ: ಪಾರದರ್ಶಕತೆ ಪ್ರಶ್ನಿಸುವಂತೆ ಸಂಘಗಳಿಗೆ ಸಲಹೆ

ಬೆಂಗಳೂರಿನ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ಆರ್‌ಎಸ್‌ಎಸ್‌ ಆಯೋಜಿಸಿದ್ದ ಸಭೆಗೆ ಗೃಹ ಸಚಿವ ಪ್ರಿಯಾಂಕ್...

ರಾಜ್ಯದಲ್ಲಿ 1.07 ಕೋಟಿ ಮತದಾರರ ಹೆಸರು ಡಿಲೀಟ್: ಮರು ಸೇರ್ಪಡೆಗೆ ಕೇವಲ 7.7 ಲಕ್ಷ ಅರ್ಜಿ

ವಿಶೇಷ ತೀವ್ರ ಪರಿಷ್ಕರಣೆ (SIR) ಅಡಿಯಲ್ಲಿ ರಾಜ್ಯದ ಮತದಾರರ ಪಟ್ಟಿಯಿಂದ ಬರೋಬ್ಬರಿ...