ರಾಜ್ಯ ರಾಜಕಾರಣದಲ್ಲಿ ಪಕ್ಷಗಳ ಆಂತರಿಕ ಬಣ ಬಡಿದಾಟ ಭಾರೀ ಸದ್ದು ಮಾಡುತ್ತಿದೆ. ಬಿಜೆಪಿಯಲ್ಲಿ ಶಾಸಕ ಯತ್ನಾಳ್ ಮತ್ತು ಹಾಲಿ ಅಧ್ಯಕ್ಷ ವಿಜಯೇಂದ್ರ ಬಣಗಳ ನಡುವೆ ಬಹಿರಂಗ ವಾಗ್ವಾದಗಳು ನಡೆಯುತ್ತಿವೆ. ಕಾಂಗ್ರೆಸ್‌ನಲ್ಲಿಯೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಚರ್ಚೆ ಮುನ್ನೆಲೆಯಲ್ಲಿದೆ ಇದೀಗ, ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ಇಬ್ಬರು ಲಿಂಗಾಯತ ನಾಯಕರ ಹೆಸರನ್ನು ಫೈನಲ್ ಮಾಡಲಾಗಿದ್ದು, ಆ ಇಬ್ಬರಲ್ಲಿ ಒಬ್ಬರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಗದ್ದುಗೆ ಸಿಗಲಿದೆ ಎಂದು ಹೇಳಲಾಗುತ್ತಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ಮಾಜಿ ಮುಖ್ಯಮಂತ್ರಿ, ಹಾಲಿ ಸಂಸದ ಬಸವರಾಜ ಬೊಮ್ಮಾಯಿ ಮತ್ತು ಕೇಂದ್ರ ಸಚಿವ ವಿ ಸೋಮಣ್ಣ ಹೆಸರುಗಳನ್ನು ಪಟ್ಟಿ ಮಾಡಲಾಗಿದೆ ಎಂದು ಚರ್ಚೆಯಾಗುತ್ತಿದೆ.
ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಮಗೆ ಬಿಜೆಪಿ ಅಧ್ಯಕ್ಷಗಿರಿ ಕೊಡಬೇಕೆಂದು ಬಿಜೆಪಿ ಹೈಕಮಾಂಡ್‌ಗೆ ಮನವಿ ಮಾಡಿದ್ದರು. ಆದಾಗ್ಯೂ, ಹಾಲಿ ಅಧ್ಯಕ್ಷ ವಿಜಯೇಂದ್ರ ವಿರುದ್ಧ ಬಹಿರಂಗವಾಗಿ ವಾಗ್ದಾಳಿ ನಡೆಸುತ್ತಿರುವ ಯತ್ನಾಳ್‌ಗೆ ಬಿಜೆಪಿ ಶಿಸ್ತು ಕಮಿಟಿಯು ಎರಡು ಬಾರಿ ನೋಟಿಸ್ ಕೊಟ್ಟಿದೆ. ನೋಟಿಸ್ ಯತ್ನಾಳ್ ಉತ್ತರಿಸಿದ್ದು, ಅವರ ಉತ್ತರ ಸಮರ್ಥನೀಯ ಅಥವಾ ಸಮಂಜಸವಾಗಿಲ್ಲ ಎಂದು ಶಿಸ್ತು ಕಮಿಟಿ ಹೇಳಿದೆ. ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳಲು ಶಿಸ್ತು ಸಮಿತಿ ಎದುರು ನೋಡುತ್ತಿದೆ ಎಂದು ಹೇಳಲಾಗುತ್ತಿದೆ.
ಆದರೆ, ಯತ್ನಾಳ್ ಕೂಡ ಲಿಂಗಾಯತ ಸಮುದಾಯಕ್ಕೆ ಸೇರಿದವರು. ಅದರಲ್ಲೂ ಪಂಚಮಸಾಲಿ ಸಮುದಾಯದವರು. ಈ ಸಮುದಾಯಕ್ಕೆ ಬಿಜೆಪಿಯಲ್ಲಿರುವ ಏಕೈಕ ನಾಯಕ ಎಂದು ಯತ್ನಾಳ್ ಗುರುತಿಸಿಕೊಂಡಿದ್ದಾರೆ. ಹೀಗಾಗಿ, ಅವರ ವಿರುದ್ಧ ಕ್ರಮ ಕೈಗೊಂಡರೆ ಪಕ್ಷದ ವಿರುದ್ಧ ಪಂಚಮಸಾಲಿ ಸಮುದಾಯ ತಿರುಗಿಬೀಳಬಹುದು ಎಂಬ ಆತಂಕವೂ ಬಿಜೆಪಿಯಲ್ಲಿದೆ.
ಇನ್ನು, ಹಾಲಿ ಅಧ್ಯಕ್ಷ ವಿಜಯೇಂದ್ರ ಕೂಡ ಲಿಂಗಾಯತ ಸಮುದಾಯವರೇ ಆಗಿದ್ದಾರೆ. ಅವರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿದರೂ, ಲಿಂಗಾಯತರು ಪಕ್ಷದಿಂದ ದೂರ ಉಳಿಯಬಹುದು ಎಂಬ ಎಚ್ಚರಿಕೆ ಬಿಜೆಪಿಯಲ್ಲಿದೆ. ಹೀಗಾಗಿ, ವಿಜಯೇಂದ್ರ ಸ್ಥಾನಕ್ಕೆ ಮತ್ತೊಬ್ಬ ಲಿಂಗಾಯತ ನಾಯಕರನ್ನೇ ಪ್ರತಿಷ್ಠಾಪಿಸಲು ಬಿಜೆಪಿ ಹೈಕಮಾಂಡ್ ಮುಂದಾಗಿದೆ ಎಂದು ತಿಳಿದುಬಂದಿದೆ.
ಹೀಗಾಗಿ, ಯುಡಿಯೂರಪ್ಪ ಅವರ ಆಪ್ತ, ಲಿಂಗಾಯತ ಸಮುದಾಯದ ಬಸವರಾಜ ಬೊಮ್ಮಾಯಿ ಅಥವಾ ವಿಜಯೇಂದ್ರ ಬಣದ ಆಚೆಗೂ ಎಲ್ಲರೊಂದಿಗೆ ಒಡನಾಟ ಇಟ್ಟುಕೊಂಡಿರುವ ವಿ ಸೋಮಣ್ಣ ಅವರನ್ನು ರಾಜ್ಯಾಧ್ಯಕ್ಷ ಹುದ್ದೆಗೇರಿಸಲು ಬಿಜೆಪಿ ಚಿಂತನೆ ನಡೆಸಿದೆ. ಈ ಇಬ್ಬರ ಹೆಸರನ್ನು ಅಂತಿಮ ಪಟ್ಟಿಯಲ್ಲಿ ಇಟ್ಟುಕೊಂಡಿದೆ ಎಂದು ಹೇಳಲಾಗಿದೆ.
ಅಂತಿಮವಾಗಿರುವ ಇಬ್ಬರೂ ಮನುವ್ಯಾದಿಗಳ ಚೌಕಿದಾರರು ಅವರು ಹಿಂದೆಯೂ ಲಿಂಗಾಯತ ಆಗಿರಲಿಲ್ಲ ಮುಂದೇನೂ ಆಗುವುದಿಲ್ಲ ಲಿಂಗಾಯತ ಅವರಿಗೆ ರಾಜಕೀಯ ದಂಧೆಗೆ ಒಂದು ಸರಕು ಅಷ್ಟೇ