ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ; ಲಿಂಗಾಯತ ನಾಯಕರಿಗೆ ಮಣೆ?

Date:

ರಾಜ್ಯ ರಾಜಕಾರಣದಲ್ಲಿ ಪಕ್ಷಗಳ ಆಂತರಿಕ ಬಣ ಬಡಿದಾಟ ಭಾರೀ ಸದ್ದು ಮಾಡುತ್ತಿದೆ. ಬಿಜೆಪಿಯಲ್ಲಿ ಶಾಸಕ ಯತ್ನಾಳ್ ಮತ್ತು ಹಾಲಿ ಅಧ್ಯಕ್ಷ ವಿಜಯೇಂದ್ರ ಬಣಗಳ ನಡುವೆ ಬಹಿರಂಗ ವಾಗ್ವಾದಗಳು ನಡೆಯುತ್ತಿವೆ. ಕಾಂಗ್ರೆಸ್‌ನಲ್ಲಿಯೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಚರ್ಚೆ ಮುನ್ನೆಲೆಯಲ್ಲಿದೆ ಇದೀಗ, ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ಇಬ್ಬರು ಲಿಂಗಾಯತ ನಾಯಕರ ಹೆಸರನ್ನು ಫೈನಲ್ ಮಾಡಲಾಗಿದ್ದು, ಆ ಇಬ್ಬರಲ್ಲಿ ಒಬ್ಬರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಗದ್ದುಗೆ ಸಿಗಲಿದೆ ಎಂದು ಹೇಳಲಾಗುತ್ತಿದೆ.

- Advertisement -

ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ಮಾಜಿ ಮುಖ್ಯಮಂತ್ರಿ, ಹಾಲಿ ಸಂಸದ ಬಸವರಾಜ ಬೊಮ್ಮಾಯಿ ಮತ್ತು ಕೇಂದ್ರ ಸಚಿವ ವಿ ಸೋಮಣ್ಣ ಹೆಸರುಗಳನ್ನು ಪಟ್ಟಿ ಮಾಡಲಾಗಿದೆ ಎಂದು ಚರ್ಚೆಯಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಮಗೆ ಬಿಜೆಪಿ ಅಧ್ಯಕ್ಷಗಿರಿ ಕೊಡಬೇಕೆಂದು ಬಿಜೆಪಿ ಹೈಕಮಾಂಡ್‌ಗೆ ಮನವಿ ಮಾಡಿದ್ದರು. ಆದಾಗ್ಯೂ, ಹಾಲಿ ಅಧ್ಯಕ್ಷ ವಿಜಯೇಂದ್ರ ವಿರುದ್ಧ ಬಹಿರಂಗವಾಗಿ ವಾಗ್ದಾಳಿ ನಡೆಸುತ್ತಿರುವ ಯತ್ನಾಳ್‌ಗೆ ಬಿಜೆಪಿ ಶಿಸ್ತು ಕಮಿಟಿಯು ಎರಡು ಬಾರಿ ನೋಟಿಸ್ ಕೊಟ್ಟಿದೆ. ನೋಟಿಸ್‌ ಯತ್ನಾಳ್ ಉತ್ತರಿಸಿದ್ದು, ಅವರ ಉತ್ತರ ಸಮರ್ಥನೀಯ ಅಥವಾ ಸಮಂಜಸವಾಗಿಲ್ಲ ಎಂದು ಶಿಸ್ತು ಕಮಿಟಿ ಹೇಳಿದೆ. ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳಲು ಶಿಸ್ತು ಸಮಿತಿ ಎದುರು ನೋಡುತ್ತಿದೆ ಎಂದು ಹೇಳಲಾಗುತ್ತಿದೆ.

ಆದರೆ, ಯತ್ನಾಳ್‌ ಕೂಡ ಲಿಂಗಾಯತ ಸಮುದಾಯಕ್ಕೆ ಸೇರಿದವರು. ಅದರಲ್ಲೂ ಪಂಚಮಸಾಲಿ ಸಮುದಾಯದವರು. ಈ ಸಮುದಾಯಕ್ಕೆ ಬಿಜೆಪಿಯಲ್ಲಿರುವ ಏಕೈಕ ನಾಯಕ ಎಂದು ಯತ್ನಾಳ್ ಗುರುತಿಸಿಕೊಂಡಿದ್ದಾರೆ. ಹೀಗಾಗಿ, ಅವರ ವಿರುದ್ಧ ಕ್ರಮ ಕೈಗೊಂಡರೆ ಪಕ್ಷದ ವಿರುದ್ಧ ಪಂಚಮಸಾಲಿ ಸಮುದಾಯ ತಿರುಗಿಬೀಳಬಹುದು ಎಂಬ ಆತಂಕವೂ ಬಿಜೆಪಿಯಲ್ಲಿದೆ.

ಇನ್ನು, ಹಾಲಿ ಅಧ್ಯಕ್ಷ ವಿಜಯೇಂದ್ರ ಕೂಡ ಲಿಂಗಾಯತ ಸಮುದಾಯವರೇ ಆಗಿದ್ದಾರೆ. ಅವರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿದರೂ, ಲಿಂಗಾಯತರು ಪಕ್ಷದಿಂದ ದೂರ ಉಳಿಯಬಹುದು ಎಂಬ ಎಚ್ಚರಿಕೆ ಬಿಜೆಪಿಯಲ್ಲಿದೆ. ಹೀಗಾಗಿ, ವಿಜಯೇಂದ್ರ ಸ್ಥಾನಕ್ಕೆ ಮತ್ತೊಬ್ಬ ಲಿಂಗಾಯತ ನಾಯಕರನ್ನೇ ಪ್ರತಿಷ್ಠಾಪಿಸಲು ಬಿಜೆಪಿ ಹೈಕಮಾಂಡ್‌ ಮುಂದಾಗಿದೆ ಎಂದು ತಿಳಿದುಬಂದಿದೆ.

ಹೀಗಾಗಿ, ಯುಡಿಯೂರಪ್ಪ ಅವರ ಆಪ್ತ, ಲಿಂಗಾಯತ ಸಮುದಾಯದ ಬಸವರಾಜ ಬೊಮ್ಮಾಯಿ ಅಥವಾ ವಿಜಯೇಂದ್ರ ಬಣದ ಆಚೆಗೂ ಎಲ್ಲರೊಂದಿಗೆ ಒಡನಾಟ ಇಟ್ಟುಕೊಂಡಿರುವ ವಿ ಸೋಮಣ್ಣ ಅವರನ್ನು ರಾಜ್ಯಾಧ್ಯಕ್ಷ ಹುದ್ದೆಗೇರಿಸಲು ಬಿಜೆಪಿ ಚಿಂತನೆ ನಡೆಸಿದೆ. ಈ ಇಬ್ಬರ ಹೆಸರನ್ನು ಅಂತಿಮ ಪಟ್ಟಿಯಲ್ಲಿ ಇಟ್ಟುಕೊಂಡಿದೆ ಎಂದು ಹೇಳಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ ರಾಹುಲ್ ಗಾಂಧಿ ಸಮರ!

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ...

ಕರ್ನಾಟಕದ ನೀರಾವರಿ ಯೋಜನೆಗಳಿಗೆ ಕೇಂದ್ರದ ನೆರವು ಕೋರಿದ ಸಿಎಂ ಡಿಕೆ ಶಿವಕುಮಾರ್

ರಾಜ್ಯದ ಕುಡಿಯುವ ನೀರು, ನೀರಾವರಿ ಹಾಗೂ ಬರ ಪರಿಹಾರದ ಅಗತ್ಯಗಳನ್ನು ಈಡೇರಿಸಲು...

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...