ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆಯ ಬಗ್ಗೆ ನಮಗೆ ಯಾವುದೇ ಆಕ್ಷೇಪವಿಲ್ಲ. ಆದರೆ ಅದರ ಹೆಸರಿನಲ್ಲಿ ನಡೆಯುತ್ತಿರುವ ಅಪಪ್ರಚಾರಗಳನ್ನು ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.
ಭಾನುವಾರ ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಿ ದರ್ಶನ ಪಡೆದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ವಿಜಯೇಂದ್ರ ಅವರು, “ಎಸ್‌ಐಟಿ ರಚನೆಯಾದಗಲೇ ಅದನ್ನು ಸ್ವಾಗತಿಸಿದ್ದೇವೆ” ಎಂದರು.
ಇದನ್ನು ಓದಿದ್ದೀರಾ? ಆ.17ರಂದು ಧರ್ಮಸ್ಥಳಕ್ಕೆ ಬಿಜೆಪಿ ನಾಯಕರ ಭೇಟಿ, ಎಸ್‍ಐಟಿ ತನಿಖೆ ಶೀಘ್ರ ಮುಗಿಯಲಿ: ಬಿ ವೈ ವಿಜಯೇಂದ್ರ
“ಧರ್ಮಸ್ಥಳ ಕ್ಷೇತ್ರದ ವಿರುದ್ದ ನಡೆಯುತ್ತಿರುವ ಷಡ್ಯಂತ್ರಗಳನ್ನು ಸಹಿಸಲು ಸಾಧ್ಯವಿಲ್ಲ. ಡಿ.ಕೆ ಶಿವಕುಮಾರ್ ಅವರೇ ಈ ಬಗ್ಗೆ ಹೇಳಿದ್ದಾರೆ. ಆದರೆ ಅಂತಹ ಶಕ್ತಿಗಳ ವಿರುದ್ದ ಕ್ರಮಕ್ಕೆ ಸರ್ಕಾರ ಯಾಕೆ ಮುಂದಾಗುತ್ತಿಲ್ಲ” ಎಂದು ಪ್ರಶ್ನಿಸಿದರು.

ಈ ವೇಳೆ ಬಿಜೆಪಿ ನಾಯಕರಾದ ಸಿ.ಟಿ ರವಿ, ಛಲವಾದಿ ನಾರಾಯಣಸ್ವಾಮಿ, ಸಂಸದ ಬ್ರಿಜೇಶ್ ಚೌಟ, ಶಾಸಕರುಗಳಾದ ವೇದವ್ಯಾಸ್ ಕಾಮತ್, ಹರೀಶ್ ಪೂಂಜ, ಭಗೀರಥಿ ಮುರುಳ್ಯ, ಉಮಾನಾಥ್ ಕೋಟ್ಯಾನ್, ಭರತ್ ಶೆಟ್ಟಿ, ಪ್ರತಾಪ ಸಿಂಹ ನಾಯಕ್, ಯಶ್‌ಪಾಲ್ ಸುವರ್ಣ ಹಾಗೂ ಇತರರು ಇದ್ದರು. ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
