ಸ್ಪೀಕರ್ ಸ್ಥಾನಕ್ಕೆ ಹಗ್ಗಜಗ್ಗಾಟ; ಬಿಜೆಪಿ ಸಭಾಧ್ಯಕ್ಷ – ಟಿಡಿಪಿಗೆ ಉಪಸಭಾಧ್ಯಕ್ಷ ಸ್ಥಾನ ಸಿಗುವ ಸಾಧ್ಯತೆ

Date:

3ನೇ ಅವಧಿಯ ಎನ್‌ಡಿಎ ಸರ್ಕಾರದಲ್ಲಿ ಬಿಜೆಪಿ ಲೋಕಸಭಾ ಸ್ಪೀಕರ್ ಹುದ್ದೆಯನ್ನು ಉಳಿಸಿಕೊಳ್ಳುವ ಸಾಧ್ಯತೆಯಿದೆ. ಹಿಂದಿನ ಸರ್ಕಾರದಲ್ಲಿ ಸ್ಪೀಕರ್‌ ಆಗಿದ್ದ ಓಂ ಬಿರ್ಲಾ ಅವರೇ ಮತ್ತೊಂದು ಅವಧಿಗೆ ಸಭಾಧ್ಯಕ್ಷರಾಗಿ ಮುಂದುವರಿಯುತ್ತಾರೆ ಎಂದು ಹೇಳಲಾಗುತ್ತಿದೆ.

ಲೋಕಸಭೆ ಸ್ಪೀಕರ್ ಯಾರಾಗಲಿದ್ದಾರೆ ಎಂಬುದರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ನಿರ್ಧರಿಸಲಿದ್ದು, ಅವರ ನಿರ್ಧಾರವನ್ನು ಬಿಜೆಪಿಯ ಮಿತ್ರಪಕ್ಷಗಳು ಒಪ್ಪಿಕೊಳ್ಳುತ್ತವೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಜೂನ್ 24ರಿಂದ ಪ್ರಾರಂಭವಾಗುವ 18ನೇ ಲೋಕಸಭೆಯ ಮೊದಲ ಅಧಿವೇಶನಕ್ಕೆ ಮುಂಚಿತವಾಗಿ, ಸ್ಪೀಕರ್ ಆಯ್ಕೆ ಕುರಿತು ಎನ್‌ಡಿಎ ಮಿತ್ರಪಕ್ಷಗಳ ನಿರ್ಣಾಯಕ ಸಭೆ ಈ ವಾರ ನಡೆಯಲಿದೆ ಎಂದು ತಿಳಿದುಬಂದಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಎನ್‌ಡಿಎಯಲ್ಲಿ ಮುಂದುವರೆಯಲು ಮತ್ತು ಸರ್ಕಾರಕ್ಕೆ ಬೆಂಬಲ ನೀಡಲು ಬಿಜೆಪಿ ಮುಂದೆ ಟಿಡಿಪಿ ಇಟ್ಟಿದ್ದ ಬೇಡಿಕೆಗಳಲ್ಲಿ ಸ್ಪೀಕರ್ ಸ್ಥಾನವೂ ಒಂದಾಗಿತ್ತು. ಸ್ಪೀಕರ್ ಹುದ್ದೆಯನ್ನು ತಮ್ಮ ಪಕ್ಷಕ್ಕೆ ನೀಡಬೇಕೆಂದು ಟಿಡಿಪಿ ನಾಯಕರು ಒತ್ತಾಯಿಸಿದ್ದರು. ಆದರೂ, ಸಭಾಧ್ಯಕ್ಷ ಸ್ಥಾನವನ್ನು ತಮ್ಮಲ್ಲಿಯೇ ಉಳಿಸಿಕೊಳ್ಳಲು ಬಿಜೆಪಿ ಮುಂದಾಗಿದೆ.

“ಮಿತ್ರಪಕ್ಷಗಳಿಗೆ ಒಪ್ಪಿಗೆಯಾಗುವ ಸಭಾಧ್ಯಕ್ಷರನ್ನು ಆಯ್ಕೆ ಮಾಡುವುದು ಬಿಜೆಪಿ ಉದ್ದೇಶ. ಜೂನ್ 26 ರೊಳಗೆ ಸ್ಪೀಕರ್ ಆಯ್ಕೆಗೆ ಸುವ್ಯವಸ್ಥಿತ ವಿಧಾನವನ್ನು ರೂಪಿಸಲು ಜೂನ್ 20 ರಂದು ಎನ್‌ಡಿಎ ಮಿತ್ರಪಕ್ಷಗಳ ಸಭೆ ನಡೆಯಬಹುದು. ಸಭೆಯ ನಂತರ ಎಲ್ಲವೂ ಸ್ಪಷ್ಟವಾಗುತ್ತದೆ” ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ಹೇಳಿದ್ದಾರೆ.

ಲೋಕಸಭಾ ಸ್ಪೀಕರ್ ಸ್ಥಾನಕ್ಕೆ ಬಿಜೆಪಿ ಸಂಸದೆ ಡಿ ಪುರಂದೇಶ್ವರಿ ಮತ್ತು ಆರು ಬಾರಿ ಸಂಸದ ಮತ್ತು ಮಾಜಿ ಕೇಂದ್ರ ಸಚಿವ ರಾಧಾ ಮೋಹನ್ ಸಿಂಗ್ ಹೆಸರುಗಳು ಕೂಡ ಮುನ್ನಲೆಯಲ್ಲಿವೆ. ಸಭೆಯಲ್ಲಿ ಟಿಡಿಪಿ ಕೂಡ ಸ್ಪೀಕರ್ ಸ್ಥಾನಕ್ಕೆ ಪಟ್ಟು ಹಿಡುವ ಸಾಧ್ಯತೆಗಳಿವೆ.

ಟಿಡಿಪಿಗೆ ಉಪ ಸ್ಪೀಕರ್ ಹುದ್ದೆ ಸಾಧ್ಯತೆ

ಸ್ಪೀಕರ್ ಸ್ಥಾನಕ್ಕೆ ಬೇಡಿಕೆ ಇಟ್ಟಿರುವ ಟಿಡಿಪಿಗೆ ಉಪ ಸ್ಪೀಕರ್ ಸ್ಥಾನವನ್ನು ನೀಡಿ, ಸಮಾಧಾನಿಸುವ ತಂತ್ರವನ್ನು ಬಿಜೆಪಿ ಎಣೆಯುತ್ತಿದೆ ಎಂದು ಹೇಳಲಾಗಿದೆ.

“ಸ್ಪೀಕರ್ ನೇಮಕದ ಜೊತೆಗೆ, ಲೋಕಸಭೆಯ ಉಪ ಸ್ಪೀಕರ್ ಹುದ್ದೆಯನ್ನು ತೆಲುಗು ದೇಶಂ ಪಕ್ಷಕ್ಕೆ (ಟಿಡಿಪಿ) ನೀಡುವ ಮೂಲಕ ಮೈತ್ರಿ ಪಾಲುದಾರಿಕೆಯಲ್ಲಿ ಪ್ರಾತಿನಿಧ್ಯವನ್ನು ಸಮತೋಲನಗೊಳಿಸುವ ಗುರಿಯನ್ನು ಬಿಜೆಪಿ ಹೊಂದಿದೆ. ಇದು ಒಳಗೊಳ್ಳುವಿಕೆ ಮತ್ತು ಪರಿಣಾಮಕಾರಿ ಆಡಳಿತಕ್ಕೆ ಎನ್‌ಡಿಎ ಬದ್ಧತೆಯನ್ನು ಸೂಚಿಸುತ್ತದೆ” ಎಂದು ಬಿಜೆಪಿ ನಾಯಕರೊಬ್ಬರು ಹೇಳಿದ್ದಾರೆ.

ಈ ನಡುವೆ, ಪ್ರತಿಪಕ್ಷಗಳು ಮುಂದಿನ ವಾರ ಸ್ಪೀಕರ್ ಹುದ್ದೆಗೆ ಚುನಾವಣೆ ನಡೆಸಲು ಒತ್ತಾಯಿಸುವ ಸಾಧ್ಯತೆಗಳೂ ಇವೆ. ಒಂದು ವೇಳೆ ಚುನಾವಣೆ ಸಂಭವಿಸಿದರೆ, ಸ್ವತಂತ್ರ ಭಾರತದ ಇತಿಹಾಸದಲ್ಲಿ ಇದು ಮೊದಲ ನಿದರ್ಶನವಾಗಲಾಗಿದೆ. ಈವರೆಗೆ ಎಂದಿಗೂ ಸಭಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿಲ್ಲ. ಯಾವಾಗಲೂ ಸಭಾಧ್ಯಕ್ಷರನ್ನು ಒಮ್ಮತದಿಂದ ಆಯ್ಕೆ ಮಾಡಲಾಗುತ್ತದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರಕ್ಕೆ ವಿಶೇಷ ಸ್ಥಾನಮಾನದ ಬೇಡಿಕೆ; ‘ಚಾನ್ಸೇ ಇಲ್ಲ’ ಎಂದ ಕೇಂದ್ರ ಸಚಿವ ಮಾಂಝಿ

ಬಿಹಾರಕ್ಕೆ ವಿಶೇಷ ಸ್ಥಾನಮಾನ ನೀಡಬೇಕೆಂದು ಎನ್‌ಡಿಎ ಸರ್ಕಾರದ ಪಾಲುದಾರ ಜೆಡಿಯು ಕೇಂದ್ರ...

ಅಕ್ರಮವಾಗಿ ‘ಕೆಂಪು ಬೀಕನ್’ ಅಳವಡಿಸಿದ್ದ ಐಎಎಸ್ ಅಧಿಕಾರಿಯ ಆಡಿ ಕಾರು ವಶ

ತಮ್ಮ ಐಷಾರಾಮಿ ಕಾರಿಗೆ ಅಕ್ರಮವಾಗಿ 'ಕೆಂಪು ಬೀಕನ್' ದೀಪವನ್ನು ಅಳವಡಿಸಿದ ಆರೋಪದ...

ಬಾಲ್ಯವಿವಾಹ | ಕರ್ನಾಟಕಕ್ಕೆ 2ನೇ ಸ್ಥಾನ: ನಾಚಿಕೆಗೇಡಿನ ಸಂಗತಿ ಎಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಕಳೆದ ಮೂರು ವರ್ಷಗಳಲ್ಲಿ ಭಾರತದಲ್ಲಿ ಸಾವಿರಾರು ಬಾಲ್ಯವಿವಾಹಗಳು ನಡೆದಿವೆ. ಅತಿ ಹೆಚ್ಚು...

ತಮಿಳುನಾಡು ಬಿಎಸ್‌ಪಿ ಮುಖ್ಯಸ್ಥ ಆರ್ಮ್‌ಸ್ಟ್ರಾಂಗ್ ಹತ್ಯೆ ಆರೋಪಿ ಎನ್‌ಕೌಂಟರ್‌ಗೆ ಬಲಿ

ತಮಿಳುನಾಡಿನ ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಮುಖ್ಯಸ್ಥ ಕೆ ಆರ್ಮ್‌ಸ್ಟ್ರಾಂಗ್ ಹತ್ಯೆಯ...