ಒಂದು ತಿಂಗಳಲ್ಲಿಯೇ ಆಡಳಿತ ವಿರೋಧಿ ಅಲೆ, ರಾಜ್ಯ ಸರ್ಕಾರದ ಸಾಧನೆ: ಬಿಜೆಪಿ ವ್ಯಂಗ್ಯ

Date:

Advertisements
  • ಕಾಯ್ದೆಗಳ ಹಿಂಪಡೆದು ಹಿಂದೂ ವಿರೋಧಿ ಸರ್ಕಾರ ಎಂದು ಸಾಬೀತುಪಡಿಸಿದೆ
  • ಬಿಜೆಪಿ ತಂದ ಶ್ರೇಷ್ಠ ಸ್ವಾತಂತ್ರ್ಯ ಹೋರಾಟಗಾರರ ಪಠ್ಯವನ್ನು ಪರಿಷ್ಕರಿಸಿದೆ

ರಾಜ್ಯದ ಇತಿಹಾಸದಲ್ಲಿಯೇ ಕೇವಲ ಒಂದು ತಿಂಗಳಲ್ಲಿಯೇ ಆಡಳಿತ ವಿರೋಧಿ ಅಲೆಯನ್ನು ಎದುರಿಸುತ್ತಿರುವುದು ಸಿದ್ದರಾಮಯ್ಯ ಅವರ ಸರ್ಕಾರದ ಏಕೈಕ ಸಾಧನೆ ಎಂದು ಬಿಜೆಪಿ ವ್ಯಂಗ್ಯವಾಡಿದೆ.

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಬಿಜೆಪಿ, “ದ್ವೇಷದ ಬಜಾರಿನಲ್ಲಿ ಪ್ರೀತಿಯ ಅಂಗಡಿ ತೆರೆಯುತ್ತೇವೆಂದು ಸುಳ್ಳಿನಿಂದ ಶುರುವಾದ ಎಟಿಎಂ ಸರ್ಕಾರ ಅಧಿಕಾರಕ್ಕೆ ಬಂದ ನಂತರದ ಪ್ರತಿ ಕ್ಷಣದಿಂದಲೂ ದ್ವೇಷವೇ ನಮ್ಮ ತಂದೆ-ತಾಯಿ, ದ್ವೇಷವೇ ನಮ್ಮ ಬಂಧು-ಬಳಗ ಎನ್ನುವ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಾ ಒಂದು ತಿಂಗಳು ಪೂರೈಸಿದೆ” ಎಂದು ಟೀಕಿಸಿದೆ.

“ಬರದಿಂದ ಬಸವಳಿಯುತ್ತಿರುವ ರಾಜ್ಯದ ಜನತೆಗೆ, ಬೆಲೆಯೇರಿಕೆ ಬರೆಯನ್ನು ಎಳೆದಿರುವ ಈ ಸರ್ಕಾರ ತಾನು ಚುನಾವಣಾ ಪೂರ್ವ ನೀಡಿದ್ದ ಗ್ಯಾರಂಟಿಗಳನ್ನು ಈಡೇರಿಸಿಲ್ಲ. ಅಧಿಕಾರ ಹಿಡಿದ ಮೇಲೆ ಎಲ್ಲದಕ್ಕೂ ಕಂಡಿಷನ್ ಅಪ್ಲೈ ಎಂದು ಹೇಳುತ್ತಾ, ವರ್ಗಾವಣೆ ದಂಧೆಯಲ್ಲಿ ನಿರಂತರವಾಗಿ ಸಿದ್ದರಾಮಯ್ಯರವರ ಸರ್ಕಾರ ತೊಡಗಿದೆ” ಎಂದು ಆರೋಪಿಸಿದೆ.

Advertisements

“ಕೇವಲ ಬಾಯಿಮಾತಿಗೆ ಸರ್ವಜನಾಂಗದ ಶಾಂತಿಯ ತೋಟ ಎಂದು ಬೊಗಳೆ ಬಿಡುವ ಸಿದ್ದರಾಮಯ್ಯ ಅವರ ಆಡಳಿತದಲ್ಲಿ ಟಿಪ್ಪು ಛಾಯೆ ಎದ್ದು ಕಾಣುತ್ತದೆ. ಗೋ ಹತ್ಯೆ ನಿಷೇಧ, ಮತಾಂತರ ನಿಷೇಧ ಕಾಯ್ದೆಯನ್ನು ಹಿಂಪಡೆಯುವ ಮೂಲಕ ತಾವು ಹಿಂದೂ ವಿರೋಧಿ ಸರ್ಕಾರ ಎಂಬುದನ್ನು ಸಿದ್ದರಾಮಯ್ಯರ ಈ ತುಘಲಕ್ ಸರ್ಕಾರ ಸಾಬೀತುಪಡಿಸುತ್ತಿದೆ” ಎಂದು ಕಿಡಿಕಾರಿದೆ.

“ಎಲ್ಲ ದಿನ ಬಳಕೆ ವಸ್ತುಗಳ ಬೆಲೆಯೇರಿಕೆ, ವಿದ್ಯುತ್ ದರ ಏರಿಕೆಯಿಂದ ಜನಜೀವನ ದುರ್ಬರವಾಗಿದೆ. ಆದರೆ, ಇವುಗಳ ಬಗ್ಗೆ ಕಿಂಚಿತ್ತೂ ಗಮನಹರಿಸದೇ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸುವವರ ವಾಕ್ ಸ್ವಾತಂತ್ರ್ಯವನ್ನು ಕಿತ್ತುಕೊಳ್ಳುವ ಮೂಲಕ ಸಂವಿಧಾನ ವಿರೋಧಿಯಾಗಿದೆ. ಆಡಳಿತವನ್ನು ದುರುಪಯೋಗಪಡಿಸಿಕೊಂಡು ದಬ್ಬಾಳಿಕೆಯ ಕ್ರೌರ್ಯವನ್ನು ಮೆರೆಯುತ್ತಿದೆ” ಎಂದು ಆರೋಪಿಸಿದೆ.

“ಭಾರತದ ಭವಿಷ್ಯದ ಪ್ರಜೆಗಳಿಗೆ ರಾಷ್ಟ್ರೀಯತೆಯ ಚಿಂತನೆಗಳನ್ನು ಪರಿಚಯಿಸುವ ನಿಟ್ಟಿನಲ್ಲಿ, ಬಿಜೆಪಿ ಸರ್ಕಾರ ತಂದ ಶ್ರೇಷ್ಠ ಸ್ವಾತಂತ್ರ್ಯ ಹೋರಾಟಗಾರರ ಪಠ್ಯವನ್ನು ಪರಿಷ್ಕರಿಸಿದೆ. ಹಾಗೂ ತಮ್ಮ ಬಾಲಬಡುಕರ ಪಠ್ಯವನ್ನು ತುರುಕಿ, ಮಕ್ಕಳ ವಿಚಾರದಲ್ಲಿಯೂ ಸಹ ತನ್ನ ದ್ವೇಷದ ಅಂಗಡಿಯನ್ನು ಈ ನಾಚಿಕೆಗೇಡು ಸರ್ಕಾರ ಮುಂದುವರೆಸಿದೆ” ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.

“ಈ ಮೊದಲು ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್‌ರ ಜಗಳದಲ್ಲಿ ಡಾ. ಜಿ ಪರಮೇಶ್ವರ್‌ ಮತ್ತು ಖರ್ಗೆ ಬಣಗಳು ಲಾಭ ಪಡೆಯಲು ಹವಣಿಸಿದ್ದವು. ಆದರೆ, ಇವರಿಬ್ಬರ ಕುರ್ಚಿ ಕಾಳಗದಲ್ಲಿ ಕಾಂಗ್ರೆಸ್‌ನ ಬಣಗಳು ಸೇರಿ ಸರ್ಕಾರ ಸಹ ಬಡವಾಗಿದ್ದು, ಇದರ ನೇರ ಪರಿಣಾಮ ರಾಜ್ಯದ ಜನತೆಯ ಮೇಲೆ ಬೀರುತ್ತಿದೆ” ಎಂದು ದೂರಿದೆ.

“ಕಾಂಗ್ರೆಸ್‌ನ ಈ ಎಲ್ಲ ಜನವಿರೋಧಿ ನೀತಿಗಳ ಮತ್ತು ಭ್ರಷ್ಟ ಸರ್ಕಾರದ ವಿರುದ್ಧ ಬಿಜೆಪಿ ಸದನದ ಹೊರಗೆ ಹಾಗೂ ಒಳಗೆ ರಾಜ್ಯದ ಜನತೆಯ ಪರ ಹೋರಾಟ ನಡೆಸಲಿದೆ” ಎಂದು ಎಚ್ಚರಿಕೆ ನೀಡಿದೆ.

ಈ ಸುದ್ದಿ ಓದಿದ್ದೀರಾ? ರಾಜ್ಯಪಾಲರ ಮೂಲಕ ಸುಳ್ಳು ಹೇಳಿಸಿ, ಜನರನ್ನು ಕಾಂಗ್ರೆಸ್‌ ಸರ್ಕಾರ ಯಾಮಾರಿಸಿದೆ: ಬಸವರಾಜ ಬೊಮ್ಮಾಯಿ ಕಿಡಿ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X