ಹಗರಣಗಳು ಬಯಲಿಗೆ ಬರುವ ಭಯದಿಂದ ಸದನದಲ್ಲಿ ಬಿಜೆಪಿ ಗದ್ದಲ: ಡಿ ಕೆ ಶಿವಕುಮಾರ್ ವಾಗ್ದಾಳಿ

Date:

Advertisements

ಸರ್ಕಾರದ ಮೇಲೆ ಆರೋಪ ಮಾಡಿದ ಬಿಜೆಪಿಯವರಿಗೆ ಉತ್ತರವನ್ನು ಕೇಳುವ ಸಹನೆ, ಸಂಯಮ ಇರಲಿಲ್ಲ. ಅವರ ಹಗರಣಗಳು ಬಯಲಿಗೆ ಬರುವ ಭಯದಿಂದ ಸದನದಲ್ಲಿ ಗಲಾಟೆ ಮಾಡಿ ಸದನದ ಬಾವಿಗೆ ಇಳಿದರು. ಮುಖ್ಯಮಂತ್ರಿಗಳು ಉತ್ತರವನ್ನು ಕೊಡಬೇಕಾದರೆ ತೊಂದರೆ ಮಾಡಿದರು ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು.

ವಿಧಾನಸಭೆ ಕಲಾಪವನ್ನು ಸೋಮವಾರಕ್ಕೆ ಮುಂದೂಡಿದ ನಂತರ ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗೆ ಶುಕ್ರವಾರ ಉತ್ತರಿಸಿದ ಅವರು “ಬಿಜೆಪಿ ಸರ್ಕಾರದಲ್ಲಿ ಕೆಲವು ಹಗರಣಗಳನ್ನು ಮುಚ್ಚಿಹಾಕಿದ್ದಾರೆ, ಮುಚ್ಚಿಹಾಕಲು ಪ್ರಯತ್ನ ಪಟ್ಟಿದ್ದಾರೆ. ಬಿಜೆಪಿಯ ಬ್ರಹ್ಮಾಂಡ ಭ್ರಷ್ಟಾಚಾರವನ್ನು ವಿಧಾನಸಭೆಯಲ್ಲಿ ಮುಖ್ಯಮಂತ್ರಿಗಳು ಬಯಲಿಗೆ ಎಳೆದಿದ್ದಾರೆ. ಪರಶುರಾಮ ಥೀಮ್ ಪಾರ್ಕ್ ಹಗರಣ, ಗಂಗಾಕಲ್ಯಾಣ ಅಕ್ರಮ, ಬಿಟ್ ಕಾಯಿನ್ ಹಗರಣ, ಪಿಎಸ್ ಐ ಹಗರಣ ಸೇರಿದಂತೆ ಅನೇಕ ಹಗರಣಗಳು ನಡೆದಿವೆ” ಎಂದರು.

“ಯಡಿಯೂರಪ್ಪ ಅವರ ಆಪ್ತ ಉಮೇಶ್ ಮನೆಯಲ್ಲಿ 750 ಕೋಟಿಗೂ ಹೆಚ್ಚು ಅಕ್ರಮ ಹಣ ವರ್ಗಾವಣೆ ಸೇರಿದಂತೆ ಅನೇಕ ಅಕ್ರಮಗಳ ದಾಖಲೆಗಳು ದೊರೆತಿವೆ. ಯಡಿಯೂರಪ್ಪ ಅವರ ವಿರುದ್ಧ ಮಾಜಿ ಸಚಿವ ಈಶ್ವರಪ್ಪ ಅವರು ರಾಜ್ಯಪಾಲರಿಗೆ ದೂರು ನೀಡಿದ್ದರು. ಅದು ಸಹ ತನಿಖೆ ನಡೆಯುತ್ತಿದೆ. ಗುರು ರಾಘವೇಂದ್ರ ಬ್ಯಾಂಕ್ ಅಲ್ಲಿ ಸಾವಿರಾರು ಕೋಟಿ ರೂಪಾಯಿಗಳು ಹಗರಣವಾಗಿದ್ದರೂ ಸಿಬಿಐಗೆ ನೀಡಿಲ್ಲ. ಅದನ್ನು ಸಹ ತನಿಖೆಗೆ ನೀಡಲು ಚರ್ಚೆ ಮಾಡಲಾಗುವುದು” ಎಂದು ತಿಳಿಸಿದರು.

Advertisements

ಬಿಜೆಪಿ ಆರೋಪ ಮಾಡಿದ ನಂತರ ನೀವು ತನಿಖೆ ಮಾಡಲು ಮುಂದಾಗಿದ್ದೀರಿ ಎಂದು ಕೇಳಿದಾಗ “ಈ ರೀತಿ ಏನೂ ಆಗಿಲ್ಲ. ಯಾರನ್ನೂ ರಕ್ಷಿಸುವ ಉದ್ದೇಶ ನಮಗಿಲ್ಲ. ಎಲ್ಲವನ್ನು ಬಯಲಿಗೆ ಎಳೆದು ಸಾರ್ವಜನಿಕರ ಗಮನಕ್ಕೆ ತರುವ ಉದ್ದೇಶ ನಮ್ಮದು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

Download Eedina App Android / iOS

X