ಉತ್ತರ ಕನ್ನಡ | ಮನೆ ಬಳಿ ಹೋದರೂ ಬಿಜೆಪಿ ಅಭ್ಯರ್ಥಿ ಕಾಗೇರಿಗೆ ಗೇಟ್ ತೆರೆಯದ ಅನಂತ್‌ ಕುಮಾರ್ ಹೆಗಡೆ!

Date:

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಹಾಗೂ ವಿವಾದಾತ್ಮಕ ಬಿಜೆಪಿ ಮುಖಂಡ ಅನಂತ್‌ ಕುಮಾರ್ ಹೆಗಡೆಯವರ ಬದಲಿಗೆ ಬಿಜೆಪಿಯ ಟಿಕೆಟ್ ಗಿಟ್ಟಿಸಿಕೊಂಡಿರುವ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರಿಗೆ ಹೊಸ ತಲೆನೋವು ಆರಂಭವಾಗಿದೆ.

ಚುನಾವಣೆಯ ದೃಷ್ಟಿಯಿಂದ ತಮ್ಮ ಪರ ಪ್ರಚಾರ ನಡೆಸಲು ಬಿಜೆಪಿಯ ಶಾಸಕರು ಹಾಗೂ ಸಂಸದರ ಬೆಂಬಲ ಪಡೆಯಲು ಯತ್ನಿಸುತ್ತಿದ್ದಾರೆ. ಆದರೆ, ಯಾರೂ ಕೂಡ ಕಾಗೇರಿಯವರ ಸಂಪರ್ಕಕ್ಕೇ ಸಿಗುತ್ತಿಲ್ಲ ಎಂದು ಅವರ ಆಪ್ತ ಮೂಲಗಳು ಬೇಸರಿಸಿಕೊಂಡಿರುವ ಬಗ್ಗೆ ತಿಳಿದುಬಂದಿದೆ.

ಶಾಸಕ, ಸಂಸದರ ಮನವೊಲಿಸಿ, ಪಕ್ಷದ ಪರ ಪ್ರಚಾರ ನಡೆಸುವುದು ಬಿಜೆಪಿ ಅಭ್ಯರ್ಥಿಯಾಗಿರುವ ವಿಶ್ವೇಶ್ವರ  ದೊಡ್ಡ ಸವಾಲಾಗಿದೆ. ಯಾರೂ ಕೂಡ ಕಾಗೇರಿಯವರ ದೂರವಾಣಿ ಕರೆ ಸ್ವೀಕರಿಸುತ್ತಿಲ್ಲ. ಅಲ್ಲದೇ, ಮನೆಗೆ ಹೋದರೆ ಗೇಟನ್ನೇ ತೆರೆಯುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಈ ನಡುವೆ ಉತ್ತರ ಕನ್ನಡದಲ್ಲಿ ಬಿಜೆಪಿಯ ಈ ಸದ್ಯದ ಪರಿಸ್ಥಿತಿ ನೋಡಿ ಲೋಕಸಭೆ ಚುನಾವಣೆಯಲ್ಲಿ ಗೆಲುವನ್ನು ತಮ್ಮದಾಗಿಸುವಲ್ಲಿ ಕಾಂಗ್ರೆಸ್ ಯೋಜನೆ ಹಾಕಿಕೊಂಡಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಹಾಲಿ ಸಂಸದ ಸಂಸದ ಅನಂತಕುಮಾರ್ ಹೆಗಡೆ ಟಿಕೆಟ್ ಕೈ ತಪ್ಪಿದ ಬೆನ್ನಲ್ಲೇ ಕಾರ್ಯಕರ್ತರಿಗೂ ಸಿಗದಂತಾಗಿದ್ದಾರೆ. ಕಳೆದ ಮೂರ್ನಾಲ್ಕು ತಿಂಗಳಿನಿಂದ ನಿರಂತರವಾಗಿ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಸುದ್ದಿಯಲ್ಲಿದ್ದ ಅನಂತ್ ಕುಮಾರ್ ಹೆಗಡೆ, ಟಿಕೆಟ್ ತಪ್ಪುವ ಸುಳಿವು ಸಿಕ್ಕಿದ ಬೆನ್ನಲ್ಲೇ ಮೌನಕ್ಕೆ ಶರಣಾಗಿದ್ದರು. ಟಿಕೆಟ್ ಘೋಷಣೆಯಾಗುವುದಕ್ಕೂ ಮೂರ್ನಾಲ್ಕು ದಿನಗಳ ಮೊದಲಿನಿಂದಲೇ ಅವರು ಸಾರ್ವಜನಿಕವಾಗಿ ಕಾಣಿಸಿಕೊಂಡಿರಲಿಲ್ಲ. ಇಷ್ಟೇ ಅಲ್ಲದೆ, ಕಾರ್ಯಕರ್ತರ ಸಂಪರ್ಕಕ್ಕೂ ಸಿಗುತ್ತಿರಲಿಲ್ಲ. ಮನೆಗೆ ಯಾರೆ ಬಂದರೂ ಒಳಗೆ ಬಿಡದಂತೆ ತಮ್ಮ ಮನೆಯ ‘ಸೆಕ್ಯೂರಿಟಿ ಗಾರ್ಡ್‌’ಗೆ ಸಂಸದ ಹೆಗಡೆ ಸೂಚಿಸಿದ್ದಾರೆ ಎಂಬ ಮಾತು ಕೂಡ ಬಿಜೆಪಿ ವಲಯದಲ್ಲಿ ಹರಿದಾಡುತ್ತಿದೆ.

ಇದೀಗ ಸಂಸದರ ಮೌನ ಹಾಗೂ ತಮ್ಮದೇ ಪಕ್ಷದ ಕೆಲವು ಶಾಸಕರು ಸಂಪರ್ಕಕ್ಕೆ ಸಿಗದಿರುವುದು ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿಗೆ ತಲೆನೋವಾಗಿ ಪರಿಣಮಿಸಿದೆ.

ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಕಾಗೇರಿ, “ನಾನು ಮತ್ತು ಅನಂತಕುಮಾರ್ ಹೆಗಡೆ ಜೋಡೆತ್ತುಗಳಂತೆ ಕೆಲಸ ಮಾಡಲಿದ್ದೇವೆ. ಅವರನ್ನು ಭೇಟಿಯಾಗಿ ಮಾತುಕತೆ ನಡೆಸುತ್ತೇನೆ ಎಂದಿದ್ದರು. ಆದರೆ, ಕಾಗೇರಿ ಭೇಟಿಗೂ ಅವಕಾಶ ನೀಡದೇ, ಕರೆಯೂ ಸ್ವೀಕರಿಸದೇ ಹೆಗಡೆ ಸಂಪೂರ್ಣ ಮೌನವಾಗಿರುವುದು ಈಗ ಅವರನ್ನು ಸಂಕಷ್ಟಕ್ಕೆ ದೂಡಿದೆ. ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ 28 ವರ್ಷಗಳ ಬಳಿಕ ಬಿಜೆಪಿ ಅಭ್ಯರ್ಥಿಯನ್ನು ಬದಲಿಸಿತ್ತು.

ಈ ಮಧ್ಯೆ, ಸಂಸದ ಅನಂತಕುಮಾರ್ ಹೆಗಡೆ ಮನೆ ಬಳಿ ಹೋಗಿ ಕಾಗೇರಿ ಅರ್ಧ ಗಂಟೆ ಕಾದರೂ ಸೌಜನ್ಯಕ್ಕೂ ಗೇಟ್ ತೆರೆಸಿ ಅವರ ಬಳಿ ಮಾತನಾಡಿಲ್ಲ ಎಂದು ತಿಳಿದುಬಂದಿದೆ. ಅನಂತಕುಮಾರ್ ಹೆಗಡೆ ಈ ಹಿಂದೆ ವಿಧಾನಸಭೆ ಚುನಾವಣೆಯಲ್ಲಿ ಕೂಡ ಹೆಗಡೆ ಇದೇ ರೀತಿ ಮೌನವಾಗಿದ್ದರಿಂದ ಕಾಗೇರಿ ಸೋಲನುಭವಿಸಬೇಕಾಗಿ ಬಂದಿತ್ತು. ಇದೀಗ ಮತ್ತೆ ಹೆಗಡೆ ಮೌನವಾಗಿರುವುದು ಮತ್ತೊಮ್ಮೆ ಕಾಗೇರಿ ಆತಂಕಕ್ಕೆ ಕಾರಣವಾಗಿದೆ.

ಇದನ್ನು ಓದಿದ್ದೀರಾ? ಸಿಎಂ ಹುದ್ದೆಯಿಂದ ಕೇಜ್ರಿವಾಲ್ ಪದಚ್ಯುತಗೊಳಿಸುವಂತೆ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್

ಈ ನಡುವೆ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಶಿವರಾಂ ಹೆಬ್ಬಾರ್ ಕೂಡ ಕಾಗೇರಿ ಕೈಗೆ ಸಿಗದೆ ಅಂತರ ಕಾಯ್ದುಕೊಳ್ಳುತ್ತಿದ್ದಾರೆ. ಬುಧವಾರ ಯಲ್ಲಾಪುರದಲ್ಲೇ ಬಿಜೆಪಿ ಅಭ್ಯರ್ಥಿ ಪರ ಸಭೆ ನಡೆದರೂ ಶಿವರಾಂ ಹೆಬ್ಬಾರ್ ಗೈರಾಗಿದ್ದರು. ಈ ಎಲ್ಲ ಬೆಳವಣಿಗೆಯ ನಡುವೆ ಕಾಂಗ್ರೆಸ್ ಗೆಲುವನ್ನು ತಮ್ಮದಾಗಿಸುವಲ್ಲಿ ಕಾಂಗ್ರೆಸ್ ಯೋಜನೆ ಹಾಕಿಕೊಂಡಿದ್ದು, ತಮ್ಮ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ಪರವಾಗಿ ಭರ್ಜರಿ ಪ್ರಚಾರ ಆರಂಭಿಸಿದ್ದಾರೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬರ ಪರಿಹಾರ | ಮನಮೋಹನ್ ಸಿಂಗ್ ಸರ್ಕಾರ ಎಷ್ಟು ಪರಿಹಾರ ನೀಡಿದೆ ಎಂದು ಲೆಕ್ಕ ಕೊಡಿ: ಆರ್. ಅಶೋಕ್

"ಬರಗಾಲದಿಂದ ಬಳಲಿದ ರಾಜ್ಯದ ಜನತೆಗೆ 3,454 ಕೋಟಿ ರೂ. ಪರಿಹಾರವನ್ನು ಪ್ರಧಾನಿ...

ಬರ ಪರಿಹಾರ | ಬಾಕಿ ಹಣ ಬಿಡುಗಡೆಯಾಗುವವರೆಗೆ ಕಾನೂನು ಹೋರಾಟ ನಿಲ್ಲಲ್ಲ : ಕೃಷ್ಣ ಬೈರೇಗೌಡ

ಎನ್‌ಡಿಆರ್‌ಎಫ್ ಮಾನದಂಡಗಳ ಪ್ರಕಾರ ರಾಜ್ಯಕ್ಕೆ ರೂ.18,172 ಕೋಟಿ ಬರ ಪರಿಹಾರ ಬಿಡುಗಡೆಯಾಗಬೇಕಿತ್ತು....

ಹೆಲಿಕಾಪ್ಟರ್ ಹತ್ತುವಾಗ ಎಡವಿ ಬಿದ್ದು ಬಂಗಾಳ ಸಿಎಂ ಮಮತಾ ಬ್ಯಾನರ್ಜಿಗೆ ಗಾಯ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಲೋಕಸಭೆ ಚುನಾವಣೆ ಪ್ರಚಾರದ...

ಲೋಕಸಭೆ ಚುನಾವಣೆ | ಇನ್ನುಳಿದ ಹಂತಗಳಲ್ಲಿ ಬಿಜೆಪಿ ಸ್ಥಿತಿ ಮತ್ತಷ್ಟು ಹದಗೆಡಲಿದೆ: ಅಖಿಲೇಶ್ ಯಾದವ್

ಲೋಕಸಭೆ ಚುನಾವಣೆಯ ಉಳಿದ ಹಂತಗಳಲ್ಲಿ ಬಿಜೆಪಿಯ ಸ್ಥಿತಿ ಇನ್ನಷ್ಟು ಹದಗೆಡಲಿದೆ ಎಂದು...