ಲೋಕಸಭೆ ಚುನಾವಣೆಗೂ ಮುನ್ನ ಬಿಜೆಪಿ ಗಲಭೆ ಸೃಷ್ಟಿಸಲಿದೆ: ಮಮತಾ ಬ್ಯಾನರ್ಜಿ ಎಚ್ಚರಿಕೆ

Date:

“ಲೋಕಸಭೆ ಚುನಾವಣೆಗೂ ಮುನ್ನ ಬಿಜೆಪಿಯು ರಾಜ್ಯದಲ್ಲಿ ಗಲಭೆಗೆ ಪ್ರಚೋದನೆ ನೀಡಲಿದೆ” ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ, ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಅವರು ಭಾನುವಾರ ಪಶ್ಚಿಮ ಬಂಗಾಳದ ಜನರಿಗೆ ಎಚ್ಚರಿಕೆ ನೀಡಿದ್ದಾರೆ.

- Advertisement -

ಪುರುಲಿಯಾದಲ್ಲಿ ನಡೆದ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಮಮತಾ ಬ್ಯಾನರ್ಜಿ, “ರ್‍ಯಾಲಿಗಳು ಮತ್ತು ಸಭೆಗಳನ್ನು ನಡೆಸಿ, ಆದರೆ ನೀವು ಗಲಭೆ ಮಾಡಬೇಡಿ. ಅವರೇ (ಬಿಜೆಪಿ) ಗಲಭೆ ಮಾಡುತ್ತಾರೆ. ಏಪ್ರಿಲ್ 19 ರಂದು ಮತದಾನ ನಡೆಯಲಿದ್ದು, ಏಪ್ರಿಲ್ 17 ರಂದು ಗಲಭೆ ನಡೆಯಲಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

“ಭಗವಂತ ರಾಮ ನಿಮಗೆ ಗಲಭೆ ಮಾಡಲು ಹೇಳುವುದಿಲ್ಲ. ಆದರೆ ಈ ಜನರು (ಬಿಜೆಪಿ) ಗಲಭೆ ಮಾಡುತ್ತಾರೆ. ಹಾಗೆಯೇ ಗಲಭೆ ಸೃಷ್ಟಿಸಿ ಅವರು ರಾಜ್ಯಕ್ಕೆ ಎನ್‌ಐಎ ಕರೆಸಿಕೊಳ್ಳುತ್ತಾರೆ” ಎಂದು ಆರೋಪಿಸಿದರು.

ಪಶ್ಚಿಮ ಬಂಗಾಳದ ಪೂರ್ವ ಮಿಡ್ನಾಪುರ ಜಿಲ್ಲೆಯ ಭೂಪತಿನಗರದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮೇಲೆ ದಾಳಿ ನಡೆಸಲಾಗಿದ್ದು ಇದಾದ ಕೆಲವು ದಿನಗಳ ನಂತರ ಸಿಎಂ ಮಮತಾ ಬ್ಯಾನರ್ಜಿ ಈ ಹೇಳಿಕೆಯನ್ನು ನೀಡಿದ್ದಾರೆ. 2022 ರಲ್ಲಿ ತೃಣಮೂಲ ಕಾಂಗ್ರೆಸ್ ನಾಯಕನ ನಿವಾಸದಲ್ಲಿ ಸ್ಫೋಟ ನಡೆದಿರುವ ಬಗ್ಗೆ ತನಿಖೆ ನಡೆಸುತ್ತಿರುವಾಗ ಎನ್ಐಎ ಮೇಲೆ ದಾಳಿ ನಡೆದಿದೆ.

ಇದನ್ನು ಓದಿದ್ದೀರಾ?   ಬಿಜೆಪಿಗೆ ಸೇರದಿದ್ದರೆ ಕ್ರಮ ಎನ್ನುತ್ತಿರುವ ತನಿಖಾ ಸಂಸ್ಥೆಗಳು: ಮಮತಾ ಬ್ಯಾನರ್ಜಿ ಆರೋಪ

ಘಟನೆಯ ಬಗ್ಗೆ ಪ್ರಶ್ನಿಸಿದಾಗ “ಎನ್‌ಐಎ ಬಿಜೆಪಿಗೆ ಸಹಕಾರ ಮಾಡುತ್ತಿದೆ” ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. “ಅವರು (ಎನ್‌ಐಎ) ಮಧ್ಯರಾತ್ರಿಯಲ್ಲಿ ಏಕೆ ದಾಳಿ ಮಾಡಿದರು? ಅವರಿಗೆ ಪೊಲೀಸ್ ಅನುಮತಿ ಇದೆಯೇ? ಮಧ್ಯರಾತ್ರಿಯಲ್ಲಿ ಬೇರೆ ಯಾರಾದರೂ ಅಪರಿಚಿತರು ಸ್ಥಳಕ್ಕೆ ಭೇಟಿ ನೀಡಿದರೆ ಸ್ಥಳೀಯರು ಪ್ರತಿಕ್ರಿಯಿಸುವ ರೀತಿ ಹೇಗಿರುತ್ತದೆಯೋ ಅದೇ ರೀತಿ ಸ್ಥಳೀಯರು ಪ್ರತಿಕ್ರಿಯಿಸಿದ್ದಾರೆ” ಎಂದು ಹೇಳಿದ್ದಾರೆ.

“ಚುನಾವಣೆಗೂ ಮುನ್ನವೇ ಯಾಕೆ ಜನರನ್ನು ಬಂಧಿಸುತ್ತಿದ್ದಾರೆ? ಪ್ರತಿ ಬೂತ್ ಏಜೆಂಟರನ್ನು ಬಂಧಿಸುವ ಆಲೋಚನೆಯನ್ನು ಬಿಜೆಪಿ ಹೊಂದಿದೆಯೇ? ಎನ್ಐಎಗೆ ಯಾವ ಹಕ್ಕಿದೆ? ಬಿಜೆಪಿಯನ್ನು ಬೆಂಬಲಿಸಲು ಇದೆಲ್ಲವನ್ನೂ ಮಾಡುತ್ತಿದ್ದಾರೆ. ಬಿಜೆಪಿಯ ಈ ಕೊಳಕು ರಾಜಕಾರಣದ ವಿರುದ್ಧ ಇಡೀ ವಿಶ್ವವೇ ಹೋರಾಡುವಂತೆ ನಾವು ಕರೆ ನೀಡುತ್ತೇವೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಎನ್ಐಎ ತಂಡದ ಕಾರಿನ ಮೇಲೆ ಇಟ್ಟಿಗೆ ಎಸೆಯಲಾಗಿದೆ ಎಂದು ವರದಿಯಾಗಿದೆ. ಬೆಳಗಿನ ಜಾವ 5:30ರ ಸುಮಾರಿಗೆ ಅಕ್ಕಪಕ್ಕದ ನಿವಾಸಿಗಳು ಕಾರಿಗೆ ಕಲ್ಲೆಸೆದು ಘೇರಾವ್ ಹಾಕಿದ್ದಾರೆ ಎನ್ನಲಾಗಿದೆ. ಒಬ್ಬರಿಗೆ ಗಾಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸುದ್ದಿ ಸಂಸ್ಥೆ ಪಿಟಿಐ ಪ್ರಕಾರ, ಎನ್‌ಐಎ ಅಧಿಕಾರಿಗಳ ಗುಂಪು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿ ಕೋಲ್ಕತ್ತಾಗೆ ಹಿಂತಿರುಗುತ್ತಿದ್ದಾಗ ಕಾರಿನ ಮೇಲೆ ದಾಳಿ ನಡೆಸಲಾಗಿದೆ. ಈ ಬಗ್ಗೆ ಎನ್‌ಐಎ ಪೊಲೀಸ್ ದೂರು ದಾಖಲಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಜಾಪ್ರಭುತ್ವದ ಗಟ್ಟಿತನವಿರುವುದು ಪ್ರಜೆಗಳಿಗೆ ಸರ್ಕಾರವನ್ನು ಪ್ರಶ್ನಿಸುವ ಸ್ವಾತಂತ್ರ್ಯ ಇರುವಲ್ಲಿ: ಸಿಎಂ ಡಿ.ಕೆ ಶಿವಕುಮಾರ್

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರದ ಹೊಣೆಗಾರಿಕೆಯೇ ಬುನಾದಿಯಾಗಿದೆ. ಎಲ್ಲರೂ ಸರ್ಕಾರಕ್ಕೆ ಕುರುಡಾಗಿ ತಲೆಬಾಗುವುದೇ...

ಪತ್ರಕರ್ತರ ಮೇಲಿನ ಪೊಲೀಸ್‌ ದಾಳಿಗೆ ಡಿಎಸ್‌ಜೆಎ ಖಂಡನೆ; ಪ್ರೆಸ್ ಕೌನ್ಸಿಲ್‌ನಿಂದ ಮಾರ್ಗಸೂಚಿ ಪ್ರಕಟ

ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ಮತ್ತು ಪೊಲೀಸ್ ಕ್ರಮಗಳನ್ನು ವರದಿ ಮಾಡುತ್ತಿರುವ ಪತ್ರಕರ್ತರ...

ದೇಶದ ಜನತೆ ಅಧಿಕಾರ ಬದಲಾವಣೆ ಬಯಸಿದ್ದಾರೆ, ನೀವು ಹೊರಡುವ ಸಮಯ ಬಂದಿದೆ; ರಾಜ್‌ನಾಥ್‌ಗೆ ಸಿಬಲ್‌ ಎಚ್ಚರಿಕೆ

ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಬಾಂಗ್ಲಾದೇಶ ಮಾದರಿಯಲ್ಲಿ ದೇಶದಲ್ಲಿ 'ಸರ್ಕಾರ ಬದಲಾವಣೆ'ಯ...

ಖ್ಯಾತ ಹಿರಿಯ ಸಂಗೀತ ನಿರ್ದೇಶಕ ದೇವ ಇನ್ನಿಲ್ಲ

ಕನ್ನಡ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಷೆಗಳ ಚಿತ್ರಗಳಿಗೆ ಸುಮಧುರ ಸಂಗೀತ...