ಮಧ್ಯಪ್ರದೇಶ ಚುನಾವಣೆ | ಸಿ ಟಿ ರವಿ ಭಾಗವಹಿಸಿದ್ದ ಸಭೆಗೆ ನುಗ್ಗಿ ಬಿಜೆಪಿ ಕಾರ್ಯಕರ್ತರಿಂದ ಗದ್ದಲ; ವಿಡಿಯೋ ವೈರಲ್

Date:

Advertisements

ಮಧ್ಯಪ್ರದೇಶ ವಿಧಾನಸಭಾ ಚುನಾವಣೆಗಾಗಿ ಭಾರತೀಯ ಜನತಾ ಪಾರ್ಟಿ(ಬಿಜೆಪಿ), ತನ್ನ ಐದನೇ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಿದೆ. ಇದರಲ್ಲಿ 92 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗಿದೆ.

ಪಟ್ಟಿ ಬಿಡುಗಡೆಯಾದ ನಂತರ ಬಿಜೆಪಿಯೊಳಗಿನ ಆಂತರಿಕ ಕಚ್ಚಾಟ ಕೂಡ ಬಯಲಾಗಿದ್ದು, ಜಬಲ್‌ಪುರ ಉತ್ತರ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಅಭಿಲಾಷ್ ಪಾಂಡೆ ನಾಮಪತ್ರ ಸಲ್ಲಿಸಿದ್ದರಿಂದ ಆಕ್ರೋಶಗೊಂಡ ನೂರಾರು ಬಿಜೆಪಿ ಕಾರ್ಯಕರ್ತರು ಬೀದಿಗಿಳಿದಿದ್ದಾರೆ.

ct ravi 3

 

ಇದೇ ವೇಳೆ ಜಬಲ್‌ಪುರದ ರನಿತಾಲ್‌ನಲ್ಲಿರುವ ಬಿಜೆಪಿಯ ವಿಭಾಗೀಯ ಕಚೇರಿಗೆ ನುಗ್ಗಿದ ನೂರಾರು ಬಿಜೆಪಿ ಕಾರ್ಯಕರ್ತರು, ಘೋಷಣೆಗಳನ್ನು ಕೂಗುತ್ತಾ ಒಳಗೆ ಪ್ರವೇಶಿಸಿದರು.

Advertisements

ಕೇಂದ್ರ ಸಚಿವ ಮತ್ತು ರಾಜ್ಯ ಚುನಾವಣಾ ಉಸ್ತುವಾರಿ ಭೂಪೇಂದ್ರ ಯಾದವ್ ಹಾಗೂ ಕರ್ನಾಟಕದ ಬಿಜೆಪಿ ಮುಖಂಡ ಸಿ ಟಿ ರವಿ ಅವರ ಮುಂದೆ ಘೋಷಣೆಗಳನ್ನು ಕೂಗಿದ ಕಾರ್ಯಕರ್ತರು, ರಾಜ್ಯ ಬಿಜೆಪಿ ಅಧ್ಯಕ್ಷ ವಿಡಿ ಶರ್ಮಾ ರಾಜೀನಾಮೆಗೆ ಒತ್ತಾಯಿಸಿ ಅಲ್ಲಿಯೇ ಧರಣಿ ಕುಳಿತರು. ಇದಾದ ನಂತರ ಕಾರ್ಯಕರ್ತರು ಬಹಳ ಹೊತ್ತು ಘೋಷಣೆಗಳನ್ನು ಕೂಗಿದರು. ಸಿಟ್ಟಿಗೆದ್ದ ಕಾರ್ಯಕರ್ತರನ್ನು ಸಮಾಧಾನ ಪಡಿಸಲು ಮುಖಂಡರು ಹರಸಾಹಸ ಪಟ್ಟರೂ ಯಾರ ಮಾತನ್ನೂ ಕೇಳಲು ಸಿದ್ಧರಿರಲಿಲ್ಲ.

ತಳಮಟ್ಟದ ನಾಯಕರನ್ನು ಕಡೆಗಣಿಸಲಾಗಿದೆ ಎಂದು ಕಾರ್ಯಕರ್ತರು ಆರೋಪಿಸಿದ್ದಾರೆ. ಅಭಿಲಾಷ್ ಪಾಂಡೆ ಪಶ್ಚಿಮ ವಿಧಾನಸಭಾ ಕ್ಷೇತ್ರದ ನಿವಾಸಿ, ಆದರೆ ಪಕ್ಷವು ಜಬಲ್‌ಪುರ ಉತ್ತರ ಕ್ಷೇತ್ರದಿಂದ ಟಿಕೆಟ್ ನೀಡಿದೆ. ಧೀರಜ್ ಪಟೇರಿಯಾ ಇಲ್ಲಿ ನಿರಂತರವಾಗಿ ಪಕ್ಷದ ಬಗ್ಗೆ ಮುತುವರ್ಜಿ ವಹಿಸಿ ಕೆಲಸ ಮಾಡುತ್ತಿದ್ದರೂ, ಅವರನ್ನು ಕಡೆಗಣಿಸಲಾಗಿದೆ ಎಂದು ಕಾರ್ಯಕರ್ತರು ಗದ್ದಲ ಸೃಷ್ಟಿಸಿದರು. ಈ ಗಲಾಟೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಅಭ್ಯರ್ಥಿ ಆಯ್ಕೆಯಿಂದ ಕೆರಳಿದ ಕಾರ್ಯಕರ್ತರು ಕೇಂದ್ರ ಸಚಿವ ಹಾಗೂ ರಾಜ್ಯ ಚುನಾವಣಾ ಉಸ್ತುವಾರಿ ಭೂಪೇಂದ್ರ ಯಾದವ್ ಹಾಗೂ ಸಿ ಟಿ ರವಿ ಅವರನ್ನು ಸುತ್ತುವರಿದು ಘೋಷಣೆಗಳನ್ನು ಕೂಗಲು ಆರಂಭಿಸಿದರು. ಈ ವೇಳೆ ಸಚಿವರ ಭದ್ರತಾ ಸಿಬ್ಬಂದಿ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದವೂ ನಡೆದು, ಆತನ ಮೇಲೆ ಹಲ್ಲೆಯೂ ನಡೆಸಲಾಗಿದೆ. ಇದೇ ವೇಳೆ ಭದ್ರತಾ ಸಿಬ್ಬಂದಿ ತನ್ನ ಸೊಂಟದಲ್ಲಿದ್ದ ಪಿಸ್ತೂಲ್ ಅನ್ನು ತೆಗೆಯಲು ಯತ್ನಿಸಿದಾಗ, ಕೆಲವರು ತಡೆದ ದೃಶ್ಯವೂ ಮೊಬೈಲ್‌ಗಳಲ್ಲಿ ಸೆರೆಯಾಗಿದೆ.

ಘಟನೆಯ ವೇಳೆ ಬಿಜೆಪಿ ಮುಖಂಡ ಸಿ ಟಿ ರವಿ ಅವರನ್ನು ಮಾಧ್ಯಮ ಪ್ರತಿನಿಧಿಗಳು ಮಾತನಾಡಿಸಲು ಹೊರಟರು. ಈ ವೇಳೆ ಮಾಧ್ಯಮಗಳ ವಿರುದ್ಧವೇ ಕಿಡಿಕಾರಿದ ಅವರು, ‘ಇದು ಪಕ್ಷದ ಒಳಗಿನ ವಿಚಾರ. ನಾವು ಇದನ್ನು ಪರಿಹರಿಸಿಕೊಳ್ಳುತ್ತೇವೆ. ನೀವು ಇಲ್ಲಿಂದ ಹೊರಡಿ’ ಎಂದು ತಿಳಿಸಿದ್ದಾರೆ. ಸದ್ಯ ಈ ಎಲ್ಲ ಬೆಳವಣಿಗೆಳ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲಾಗಿದೆ.

ಮುಂದಿನ ನವೆಂಬರ್ 17ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ಇದುವರೆಗೆ 230 ಅಭ್ಯರ್ಥಿಗಳ ಪೈಕಿ 228 ಅಭ್ಯರ್ಥಿಗಳನ್ನು ಹೆಸರನ್ನು ಘೋಷಿಸಿದೆ. ಗುಣ ಮತ್ತು ವಿಧಿಶಾ ಕ್ಷೇತ್ರದ ಅಭ್ಯರ್ಥಿಗಳ ಹೆಸರನ್ನು ಇನ್ನೂ ಪ್ರಕಟಿಸಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

Download Eedina App Android / iOS

X