ಆತಿಶಿ ವಿರುದ್ದ ಬಿಜೆಪಿ ಹೂಡಿದ್ದ ಮಾನನಷ್ಟ ಮೊಕದ್ದಮೆ ವಜಾಗೊಳಿಸಿದ ಕೋರ್ಟ್

Date:

ದೆಹಲಿ ಮುಖ್ಯಮಂತ್ರಿ ಆತಿಶಿ ವಿರುದ್ಧ ಬಿಜೆಪಿ ನಾಯಕರು ಹೂಡಿದ್ದ ಮಾನನಷ್ಟ ಮೊಕದ್ದಮೆಯನ್ನು ದೆಹಲಿ ನ್ಯಾಯಾಲಯವು ಮಂಗಳವಾರ ಮಧ್ಯಾಹ್ನ ವಜಾಗೊಳಿಸಿದೆ. ಮಾನನಷ್ಟ ಮೊಕದ್ದಮೆ ಆರೋಪಕ್ಕೆ ಸಂಬಂಧಿಸಿದಂತೆ ಸಮನ್ಸ್ ಜಾರಿಯಾಗಿತ್ತು.

- Advertisement -

ದೆಹಲಿಯ ರೌಸ್ ಅವೆನ್ಯೂ ನ್ಯಾಯಾಲಯವು ಸಮನ್ಸ್ ರದ್ದುಗೊಳಿಸಿ, ಎಎಪಿ ನಾಯಕಿಯ ಹೇಳಿಕೆಯು ಒಟ್ಟಾರೆಯಾಗಿ ವಿರೋಧ ಪಕ್ಷದ ವಿರುದ್ಧವಾಗಿ ಮಾಡಲಾಗಿದೆಯೇ ಹೊರತು ಸಂಘಟನೆ ವೈಯಕ್ತಿಕ ಸದಸ್ಯರ ವಿರುದ್ಧ ಮಾಡಿರುವುದರಲ್ಲ ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಇದನ್ನು ಓದಿದ್ದೀರಾ? ದೆಹಲಿ ಸಿಎಂ ಆತಿಶಿ ಬಂಧನಕ್ಕೆ ಸಿದ್ಧತೆ ನಡೆಸಿದೆಯಾ ಬಿಜೆಪಿ!?

ಕಳೆದ ವರ್ಷ ಏಪ್ರಿಲ್‌ನಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಂಪುಟದಲ್ಲಿದ್ದ ಸಂದರ್ಭದಲ್ಲಿ ಆತಿಶಿ, ತನ್ನನ್ನು ಮತ್ತು ಇತರೆ ಎಎಪಿ ನಾಯಕರನ್ನು ಬಿಜೆಪಿಗೆ ಸಂಬಂಧಿಸಿದ ವ್ಯಕ್ತಿಗಳು ಸಂಪರ್ಕಿಸಿ ಪಕ್ಷಕ್ಕೆ ಸೇರುವಂತೆ, ಸೇರದಿದ್ದರೆ ಒಂದು ತಿಂಗಳ ಒಳಗೆ ಜಾರಿ ನಿರ್ದೇಶನಾಲಯದಿಂದ ಬಂಧನ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದರು ಎಂದು ಆರೋಪಿಸಿದ್ದರು.

ಇದಾದ ಬಳಿಕ ಬಿಜೆಪಿಯ ಪ್ರವೀಣ್ ಶಂಕರ್ ಕಪೂರ್ ಪ್ರಕರಣ ದಾಖಲಿಸಿದ್ದರು. ಬಿಜೆಪಿ ವಿರುದ್ಧ ಆತಿಶಿ ಮತ್ತು ಇತರ ಎಎಪಿ ನಾಯಕರು ಮಾಡಿರುವ ಆರೋಪಗಳು ಸುಳ್ಳು ಎಂದು ಪ್ರತಿಪಾದಿಸಿದ ಕಪೂರ್, ಈ ಆರೋಪವನ್ನು ಸಾಬೀತುಪಡಿಸಲು ಯಾವುದೇ ಸಾಕ್ಷಿಯಿಲ್ಲ ಎಂದು ದೂರಿದ್ದರು. 2024ರ ಲೋಕಸಭೆ ಚುನಾವಣೆಗೂ ಒಂದು ತಿಂಗಳು ಮುನ್ನ ಈ ಘಟನೆ ನಡೆದಿತ್ತು. ಇದಾದ ಕೆಲವೇ ಸಮಯದಲ್ಲಿ ಎಎಪಿಯಲ್ಲಿದ್ದ ಕೈಲಾಶ್ ಗೆಹ್ಲೋಟ್ ಬಿಜೆಪಿ ಸೇರ್ಪಡೆಯಾಗಿದ್ದರು.

ಮುಂದಿನ ವಾರ ದೆಹಲಿಯಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಇದರ ಸಿದ್ಧತೆಯನ್ನು ನಡೆಸಲಾಗುತ್ತಿರುವ ನಡುವೆ ರೋಸ್ ಅವೆನ್ಯೂ ನ್ಯಾಯಾಲಯದ ತೀರ್ಪು ಎಎಪಿಯನ್ನು ನಿರಾಳವಾಗಿಸಿದೆ. ಆತಿಶಿ ತಮ್ಮ ಕಲ್ಕಾಜಿ ಸ್ಥಾನದಿಂದ ಮತ್ತೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಜಾಪ್ರಭುತ್ವದ ಗಟ್ಟಿತನವಿರುವುದು ಪ್ರಜೆಗಳಿಗೆ ಸರ್ಕಾರವನ್ನು ಪ್ರಶ್ನಿಸುವ ಸ್ವಾತಂತ್ರ್ಯ ಇರುವಲ್ಲಿ: ಸಿಎಂ ಡಿ.ಕೆ ಶಿವಕುಮಾರ್

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರದ ಹೊಣೆಗಾರಿಕೆಯೇ ಬುನಾದಿಯಾಗಿದೆ. ಎಲ್ಲರೂ ಸರ್ಕಾರಕ್ಕೆ ಕುರುಡಾಗಿ ತಲೆಬಾಗುವುದೇ...

ಪತ್ರಕರ್ತರ ಮೇಲಿನ ಪೊಲೀಸ್‌ ದಾಳಿಗೆ ಡಿಎಸ್‌ಜೆಎ ಖಂಡನೆ; ಪ್ರೆಸ್ ಕೌನ್ಸಿಲ್‌ನಿಂದ ಮಾರ್ಗಸೂಚಿ ಪ್ರಕಟ

ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ಮತ್ತು ಪೊಲೀಸ್ ಕ್ರಮಗಳನ್ನು ವರದಿ ಮಾಡುತ್ತಿರುವ ಪತ್ರಕರ್ತರ...

ದೇಶದ ಜನತೆ ಅಧಿಕಾರ ಬದಲಾವಣೆ ಬಯಸಿದ್ದಾರೆ, ನೀವು ಹೊರಡುವ ಸಮಯ ಬಂದಿದೆ; ರಾಜ್‌ನಾಥ್‌ಗೆ ಸಿಬಲ್‌ ಎಚ್ಚರಿಕೆ

ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಬಾಂಗ್ಲಾದೇಶ ಮಾದರಿಯಲ್ಲಿ ದೇಶದಲ್ಲಿ 'ಸರ್ಕಾರ ಬದಲಾವಣೆ'ಯ...

ಖ್ಯಾತ ಹಿರಿಯ ಸಂಗೀತ ನಿರ್ದೇಶಕ ದೇವ ಇನ್ನಿಲ್ಲ

ಕನ್ನಡ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಷೆಗಳ ಚಿತ್ರಗಳಿಗೆ ಸುಮಧುರ ಸಂಗೀತ...