ಬಿಜೆಪಿ ಪ್ರಭಾವ ವಿಪರೀತ ಕುಸಿದಿದೆ, ಪ್ರಧಾನಿಯಾಗಲು ಮೋದಿಗೆ ನೈತಿಕತೆ ಇಲ್ಲ: ಸಿಎಂ ಸಿದ್ದರಾಮಯ್ಯ

Date:

Advertisements

ರಾಜ್ಯದಲ್ಲಿ ನಮ್ಮ ನಿರೀಕ್ಷೆಗೆ ತಕ್ಕಂತೆ ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಗಿಲ್ಲ. 15-20 ಸ್ಥಾನ ನಮ್ಮ ನಿರೀಕ್ಷೆಯಾಗಿತ್ತು. ಆದರೆ, 2019 ರಲ್ಲಿ ಕೇವಲ ಒಂದು ಸ್ಥಾನದಲ್ಲಿ ಗೆದ್ದಿದ್ದೆವು. ಈಗ 9 ಕ್ಕೆ ಏರಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಚುನಾವಣಾ ಫಲಿತಾಂಶದ ಬಳಿಕ ಗೃಹ ಕಚೇರಿ ಕೃಷ್ಣಾದಲ್ಲಿ ಪತ್ರಿಕಾಗೋಷ್ಠಿ ಕರೆದು ಮಾತನಾಡಿದ ಅವರು, “ಈ ಬಾರಿ ನಮಗೆ ಶೇ 45.34, ಬಿಜೆಪಿ ಶೇ 46.04 ರಷ್ಟು ಮತ ಪಡಿದಿದೆ. 2019 ರಲ್ಲಿ ಬಿಜೆಪಿ ಶೇ 51.38 ರಷ್ಟು ಮತ ಗಳಿಸಿತ್ತು. ನಮಗೆ ಶೇ31.88 ರಷ್ಟು ಮಾತ್ರ ಮತಗಳು ಬಂದಿದ್ದವು. 2019 ಕ್ಕೆ ಹೋಲಿಸಿದರೆ ನಮ್ಮ ಮತ ಪ್ರಮಾಣ ಹೆಚ್ಚಾಗಿದೆ. ಬಿಜೆಪಿ ಮತ ಪ್ರಮಾಣ ಶೇ5 ರಷ್ಟು ಕುಸಿದಿದೆ” ಎಂದರು.

“ಜೆಡಿಎಸ್ ಜೊತೆ ಹೊಂದಾಣಿಕೆ ಬಳಿಕವೂ ಅವರ ಮತ ಪ್ರಮಾಣದಲ್ಲಿ ಇಳಿಕೆಯಾಗಿದೆ. ಜೆಡಿಎಸ್ ಕೂಡ 2019ಕ್ಕಿಂತ ಕಡಿಮೆ ಪ್ರಮಾಣದ ಮತ ಪಡೆದಿದೆ. ಆದರೂ ನಾವು ನಿರೀಕ್ಷಿತ ಪ್ರಮಾಣದಲ್ಲಿ ಸೀಟು ಗೆದ್ದಿಲ್ಲ. ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಮತ ಪ್ರಮಾಣ ಹೆಚ್ಚಾಗಿದೆ. ಕೇಂದ್ರದಲ್ಲಿ ಅಧಿಕಾರಿದಲ್ಲಿದ್ದ ಬಿಜೆಪಿ ಮೋದಿ ಮುಖ 2014-2019 ಕ್ಕಿಂತ ಕಡಿಮೆ ಸೀಟು ಕಡಿಮೆ ಗಳಿಸಿದ್ದಾರೆ. ಮೋದಿ ಮುಖ ನೋಡಿಯೂ ಬಿಜೆಪಿಗೆ ಬಹುಮತ ಬಂದಿಲ್ಲ. ಯಾವ ಪಕ್ಷಕ್ಕೂ ಬಹುಮತ ಬಂದಿಲ್ಲ” ಎಂದು ಹೇಳಿದರು.

Advertisements

“ಬಿಜೆಪಿ ಸರಳ ಬಹುಮತ ಪಡೆಯುವಲ್ಲೂ ಸೋತಿದೆ. ದೇಶದಲ್ಲಿ ಎಲ್ಲೂ ಮೋದಿಯವರ ಅಲೆ ಕಾಣಲಿಲ್ಲ. ಹೀಗಾಗಿ ಈ ಫಲಿತಾಂಶ ಮೋದಿ ಜನಪ್ರಿಯತೆ ನೆಲಕಚ್ಚಿದೆ ಎನ್ನುವುದು ಮೇಲು ನೋಟಕ್ಕೆ ಗೊತ್ತಾಗಿದೆ. ಸರ್ಕಾರ ಯಾರು ಮಾಡ್ತಾರೆ ಎಮ್ನುವುದು ಈಗಲೇ ಹೇಳಲು ಸಾಧ್ಯವಿಲ್ಲ” ಎಂದರು.

“ಮೋದಿಯವರು ಚುನಾವಣೆಯ ಕೊನೆ ಕೊನೆಗೆ ಧರ್ಮ, ದೇವರ ಹೆಸರಲ್ಲಿ ಮತ ಕೇಳಿ ನೇರವಾಗಿ ಇತರೆ ಧರ್ಮೀಯರ ವಿರುದ್ಧ ಭಾಷಣ ಮಾಡಿದರು, ಹಿಂದುಳಿದವರ ಮೀಸಲಾತಿ ಕಾಂಗ್ರೆಸ್ ಕಿತ್ತುಕೊಳ್ಳುತ್ತದೆ ಎಂದು ಸುಳ್ಳು ಹೇಳಿಕೊಂಡು ತಿರುಗಿದರೂ ಮೋದಿಯವರಿಗೆ ಬಹುಮತ ಬರಲಿಲ್ಲ. NDA ಕಳೆದ ಬಾರಿಗಿಂತ 64 ಸ್ಥಾನ ಕಳೆದುಕೊಂಡಿದೆ. ಇದು ರಾಷ್ಟ್ರ ಮಟ್ಟದಲ್ಲಿ ಬಿಜೆಪಿಯ ಸೋಲು” ಎಂದು ವಿಶ್ಲೇಷಿಸಿದರು.

“ಈ ಸೋಲಿನ ಕಾರಣದಿಂದ ಮೋದಿಯವರಿಗೆ ಮತ್ತೆ ಪ್ರಧಾನಿ ಆಗುವ ನೈತಿಕ ಹಕ್ಕಿಲ್ಲ. ವಿರೋಧ ಪಕ್ಷದ ನಾಯಕರು, ಮುಖ್ಯಮಂತ್ರಿಗಳನ್ನು ಜೈಲಿಗೆ ಹಾಕಿದರು. ED, IT, CBI ಹೆಸರಲ್ಲಿ ಹೆದರಿಸಿದರು, ಬೆದರಿಸಿದರು ಆದರೂ ದೇಶದ ಜನ ಬಿಜೆಪಿಗೆ ಬಹುಮತ ಕೊಡಲಿಲ್ಲ. ರಾಮನ ಹೆಸರಲ್ಲಿ, ರಾಮ ಮಂದಿರದ ಹೆಸರಲ್ಲಿ ಅಯೋಧ್ಯೆಯಲ್ಲೂ ಬಿಜೆಪಿ ಸೋತಿದೆ. ಇದು ಬಿಜೆಪಿಯ ಸೋಲು” ಎಂದರು.

ರಾಹುಲ್ ಗಾಂಧಿಯನ್ನು ದೇಶ ಒಪ್ಪಿಕೊಂಡಿದೆ

“ರಾಹುಲ್ ಗಾಂಧಿಯವರ ಎರಡು ಯಾತ್ರೆಗಳು ಫಲ ನೀಡಿವೆ. ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿಯವರನ್ನು ದೇಶದ ಜನತೆ ಬಹಳ ದೊಡ್ಡ ಮಟ್ಟದಲ್ಲಿ ಒಪ್ಪಿಕೊಂಡಿದ್ದಾರೆ. ಎರಡೂ ಕ್ಷೇತ್ರಗಳಲ್ಲೂ ರಾಹುಲ್ ಗಾಂಧಿ ಭರ್ಜರಿ ಮತಗಳಿಂದ ಗೆದ್ದಿದ್ದಾರೆ. ಅವರಿಗೆ ಅಭಿನಂದಿಸುತ್ತೇನೆ” ಎಂದು ತಿಳಿಸಿದರು.

“ಕೈಯಲ್ಲಿ ಸಂವಿಧಾನ ಹಿಡಿದೇ ರಾಹುಲ್ ಗಾಂಧಿಯವರು ಇಡೀ ದೇಶದಲ್ಲಿ ಚುನಾವಣಾ ಪ್ರಚಾರ ಮಾಡಿದರು. ದೇಶದ ಜನ ಸಂವಿಧಾನದ ಉಳಿವಿಗೆ, ಪ್ರಜಾಪ್ರಭುತ್ವ ಉಳಿವಿಗಾಗಿ ರಾಹುಲ್ ಗಾಂಧಿಯವರ ಕೈ ಹಿಡಿದಿದ್ದಾರೆ. ಸರ್ಕಾರದ ಗ್ಯಾರಂಟಿ ಯೋಜನೆಗಳ ಪರಿಣಾಮ ಏನಾಗಿದೆ ಎನ್ನುವ ಬಗ್ಗೆ ವಿಶ್ಲೇಷಣೆ ನಡೆಯಬೇಕಿದೆ” ಎಂದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ ಜಾಮೀನು

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಧರ್ಮಸ್ಥಳ | ದೂರುದಾರನ ಹಿನ್ನೆಲೆ ತಿಳಿದುಕೊಂಡಿದ್ದರೆ ಸರ್ಕಾರದ ದುಡ್ಡು ಉಳೀತಿತ್ತು: ಆರ್. ಅಶೋಕ್

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂತಿಡಲಾಗಿದೆ ಎಂದು ದೂರು ಕೊಟ್ಟಿದ್ದ ಸಾಕ್ಷಿ ದೂರುದಾರನನ್ನು...

ಚಿತ್ರದುರ್ಗ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಯನ್ನು ಬಂಧಿಸಿದ ಇಡಿ: ನಗದು ಸಹಿತ ಚಿನ್ನಾಭರಣ ವಶಕ್ಕೆ

ಚಿತ್ರದುರ್ಗದ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಮನೆ, ಕಚೇರಿ ಸೇರಿದಂತೆ 31...

ಧರ್ಮಸ್ಥಳ ಪ್ರಕರಣ | ನಾವು ಯಾರ ಪರವೂ ಇಲ್ಲ; ನ್ಯಾಯದ ಪರ: ಡಿಸಿಎಂ ಡಿ.ಕೆ.ಶಿವಕುಮಾರ್

"ನಾವು ಧರ್ಮಸ್ಥಳದವರ ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ...

Download Eedina App Android / iOS

X