ಡೆಂಘೀ ಹರುಡುವ ಸೊಳ್ಳೆಗಳಿಗಿಂತ ಬಿಜೆಪಿಯ ಸುಳ್ಳುಗಳೇ ಹೆಚ್ಚು ಹರಡುತ್ತಿವೆ: ಸಚಿವ ಗುಂಡೂರಾವ್ ಲೇವಡಿ

Date:

ಡೆಂಘೀ ಹರಡುವ ಸೊಳ್ಳೆಗಳಿಗಿಂತ ಬಿಜೆಪಿಯ ಸುಳ್ಳುಗಳೇ ಹೆಚ್ಚು ಹರಡುತ್ತಿದೆ. ವಿಪಕ್ಷ ನಾಯಕರು ಜನರಲ್ಲಿ ಆತಂಕ ಮೂಡಿಸುವ ಬದಲು ಸರ್ಕಾರದ ಜೊತೆ ಕೈ ಜೋಡಿಸಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

- Advertisement -

ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, “ಆರೋಗ್ಯ ಇಲಾಖೆ ಪ್ರತಿನಿತ್ಯ ಡೆಂಘೀ ನಿಯಂತ್ರಿಸುವತ್ತ ಹೆಚ್ಚಿನ ನಿಗಾ ವಹಿಸುತ್ತಿದೆ. ಡೆಂಘೀ ಇಂದಾಗಿ ರಾಜ್ಯದಲ್ಲಿ ಮೆಡಿಕಲ್ ಎಮರ್ಜೆನ್ಸಿ ಘೋಷಿಸುವ ಸ್ಥಿತಿ ಇಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“ಯಾವುದೇ ಬೆಡ್ ಅಥಾವಾ ಔಷಧಿಯ ಕೊರತೆಯಿಲ್ಲ.‌ ಡೆಂಘೀ ಬಗ್ಗೆ ತಾಂತ್ರಿಕ ಸಲಹಾ ಸಮಿತಿಯವರೊಂದಿಗೆ ಚರ್ಚೆ ನಡೆಸಿದ್ದು, ಮೆಡಿಕಲ್ ಎಮರ್ಜೆನ್ಸಿ ಘೋಷಿಸುವ ಅಗತ್ಯವಿಲ್ಲ ಎಂದು ಸಲಹಾ ಸಮಿತಿ ತಿಳಿಸಿದೆ. ಇನ್ನು ಎರಡು ತಿಂಗಳು ಡೆಂಘೀ ಹಾವಳಿ ಇರುತ್ತದೆ. ಜನರು ಹೆಚ್ಚು ಜಾಗೃತರಾಗಬೇಕು” ಎಂದು ಹೇಳಿದರು.

“ಮನೆಯ ಸುತ್ತಮುತ್ತಲು ನೀರು ಶೇಖರಣೆಯಾಗದಂತೆ ನೋಡಿಕೊಳ್ಳಬೇಕು. ಆರೋಗ್ಯ ಇಲಾಖೆ ಕೂಡ ಜನರಲ್ಲಿ ಡೆಂಘೀ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದೆ.‌ ಪ್ರತಿ ಶುಕ್ರವಾರ ಅಭಿಯಾನದ ರೀತಿಯಲ್ಲಿ ಈಡಿಸ್ ಸೊಳ್ಳೆಯ ಉತ್ಪತ್ತಿ ತಾಣಗಳನ್ನ ನಾಶ ಪಡಿಸುವ ಕಾರ್ಯ ನಡೆಸುತ್ತಿದೆ. ಹೆಚ್ಚು ಡೆಂಘೀ ಪ್ರಕರಣಗಳು ಕಂಡು ಬರುವ ಸ್ಥಳಗಳಲ್ಲಿ ಫೀವರ್ ಕ್ಲಿನಿಕ್ ತೆರೆದು, ಟೆಸ್ಟಿಂಗ್ ಹೆಚ್ಚಿಸಲು ಜಿಲ್ಲಾಧಿಕಾರಿಗಳಿಗೆ ಹಾಗೂ ಸಿಇಒ ಗಳಿಗೆ ಸೂಚಿಸಲಾಗಿದೆ” ಎಂದರು.

“ಔಷಧಿಗಳ ಲಭ್ಯತೆ ಇದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಚಿಕಿತ್ಸೆಗೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಆದರೆ ಜನರು ಹೆಚ್ಚು ಜಾಗೃತರಾಗಿ ಡೆಂಘೀ ಹರಡದಂತೆ ಎಚ್ಚರಿಕೆ ವಹಿಸುವುದೇ ಮುಖ್ಯ” ಎಂದು ಸಚಿವರು ಅಭಿಪ್ರಾಯ ವ್ಯಕ್ತಪಡಿಸಿದರು.‌

ಸರ್ಕಾರಿ ಈಜುಕೊಳಕ್ಕೆ ಭೇಟಿ ನೀಡಿದ್ದೆ, ಯಾವುದೇ ರೆಸಾರ್ಟ್‌ಗೆ ಹೋಗಿರಲಿಲ್ಲ

“ಡೆಂಘೀ ಹೆಚ್ಚಳಕ್ಕೂ, ನಾನು ಮಂಗಳೂರಿನ ಅಂತಾರಾಷ್ಟ್ರೀಯ ಸರ್ಕಾರಿ ಈಜುಕೊಳಕ್ಕೆ ಭೇಟಿ ನೀಡಿ ಈಜಿದ್ದಕ್ಕೂ ಎತ್ತಣ ಸಂಬಂಧ? ಮಂಗಳೂರಿನಲ್ಲಿ ನಾನು ಈಜಿದ್ದು ಮಾತ್ರವಲ್ಲ, ಡೆಂಘೀ ಈಡಿಸ್ ಸೊಳ್ಳೆಗಳ ಲಾರ್ವಾ ನಾಶಪಡಿಸುವ ಬೃಹತ್ ಅಭಿಯಾನಕ್ಕೆ ಕೂಡ ಚಾಲನೆ ಕೊಟ್ಟಿದ್ದೇನೆ. ಮನೆ ಮನೆಗೆ ತೆರಳಿ ನೀರು ಶೇಖರಣೆಯಾಗಿರುವ ಸ್ಥಳಗಳನ್ನ ಗುರುತಿಸಿ ಅಲ್ಲಿಯ ನಿವಾಸಿಗಳನ್ನು ಎಚ್ಚರಿಸಿದ್ದೇವೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುದುಚೇರಿ | ತಟ್ಟಂಚಾವಡಿ ಉಪಚುನಾವಣೆ: AINRC ಅಭ್ಯರ್ಥಿ ಅಶೋಕ್ ಆನಂದ್‌ಗೆ ಗೆಲುವು

ಪುದುಚೇರಿಯ ತಟ್ಟಂಚಾವಡಿ ವಿಧಾನಸಭೆ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಆಲ್ ಇಂಡಿಯಾ ಎನ್‌ಆರ್‌...

ಅಯೋಧ್ಯೆಯಿಂದ ಸ್ಪರ್ಧಿಸಿ ಗೆದ್ದು ತೋರಿಸಿ: ಸಿಎಂ ಯೋಗಿಗೆ ಅಖಿಲೇಶ್ ಯಾದವ್ ಬಹಿರಂಗ ಸವಾಲು

ಉತ್ತರ ಪ್ರದೇಶದ ಮುಂಬರುವ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯ ರಾಜಕೀಯದಲ್ಲಿ ಆರೋಪ-ಪ್ರತ್ಯಾರೋಪಗಳು...

ಉಪಚುನಾವಣೆ: ನಂದಿಗ್ರಾಮ, ನಗಾಂವ್‌ ಫಲಿತಾಂಶದತ್ತ ಎಲ್ಲರ ಚಿತ್ತ

ಅಸ್ಸಾಂನ ಒಂದು ಲೋಕಸಭಾ ಕ್ಷೇತ್ರ ಮತ್ತು ಪಶ್ಚಿಮ ಬಂಗಾಳ, ತಮಿಳುನಾಡು, ಕೇಂದ್ರಾಡಳಿತ...