ಕ್ಷೇತ್ರ ಮರುವಿಂಗಡಣೆಯ ಹಿಂದೆ ಬಿಜೆಪಿಯ ಲಾಭದ ಲೆಕ್ಕಾಚಾರಗಳು; ದಕ್ಷಿಣದ ಧ್ವನಿ ಅಡಗಿಸುವ ಯತ್ನ?

Date:

ಭಾರತದ ರಾಜಕೀಯ ಭೂಪಟದಲ್ಲಿ ಮುಂದಿನ ಕೆಲವು ವರ್ಷಗಳಲ್ಲಿ ಸಂಭವಿಸಲಿರುವ ಅತಿದೊಡ್ಡ ಬದಲಾವಣೆ ಎಂದರೆ ಅದು ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಮಾಡುವುದಕ್ಕೆ ಹೊರಟಿರುವ ಈ ಪ್ರಕ್ರಿಯೆ ಈಗ ಉತ್ತರ ಮತ್ತು ದಕ್ಷಿಣ ಭಾರತದ ನಡುವಿನ ರಾಜಕೀಯ ಸಂಘರ್ಷಕ್ಕೆ ನಾಂದಿ ಹಾಡಿದೆ.

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟ್ಯಾಲಿನ್ ಅವರು ಈ ಕುರಿತು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದು, “ಶಾಂತವಾಗಿರುವ ದಕ್ಷಿಣ ಭಾರತದಲ್ಲಿ ಪ್ರಧಾನಿಯವರು ಬಿರುಗಾಳಿ ಎಬ್ಬಿಸಬಾರದು” ಎಂದು ಕಿಡಿಕಾರಿದ್ದಾರೆ.

ರಾಜಕೀಯ ಅಸಮತೋಲನಕ್ಕೆ ನಾಂದಿ :

ಉತ್ತರ ಪ್ರದೇಶ, ಬಿಹಾರ್ ಅಂತಹ ರಾಜ್ಯಗಳಲ್ಲಿ ಜನಸಂಖ್ಯೆ ಏರಿಕೆಯಾಗಿರುವುದರಿಂದ, ಮರುವಿಂಗಡಣೆಯ ನಂತರ ಅಲ್ಲಿನ ಲೋಕಸಭಾ ಕ್ಷೇತ್ರಗಳ ಸಂಖ್ಯೆ ಗಣನೀಯವಾಗಿ ಹೆಚ್ಚಾಗಲಿದೆ. ದಕ್ಷಿಣ ಭಾರತದ ರಾಜ್ಯಗಳಾದ ಕರ್ನಾಟಕ, ತಮಿಳುನಾಡು, ಕೇರಳದಂತಹ ರಾಜ್ಯಗಳಲ್ಲಿ ಜನಸಂಖ್ಯೆ ನಿಯಂತ್ರಣದಲ್ಲಿದೆ. ಹಾಗಾಗಿ ದಕ್ಷಿಣ ಭಾರತದ ರಾಜ್ಯಗಳಲ್ಲಿ ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ ಮಾಡುವುದರಿಂದ ರಾಜಕೀಯ ಅಸಮತೋಲನ ಸೃಷ್ಟಿಯಾಗುವ ಸಾಧ್ಯತೆ ಇದೆ ಎನ್ನುವುದು ವಿವಾದಕ್ಕೆ ಮೂಲ ಕಾರಣ.

ಏಕಪಕ್ಷೀಯ ನಿರ್ಧಾರ ಸೂಕ್ತವೆ?

ಜನಸಂಖ್ಯೆ ನಿಯಂತ್ರಿಸಿದ ದಕ್ಷಿಣದ ರಾಜ್ಯಗಳು ತಮ್ಮ ಸಂಸದೀಯ ಸ್ಥಾನಗಳನ್ನು ಕಳೆದುಕೊಳ್ಳುವ ಭೀತಿಯಲ್ಲಿವೆ. ಇದು ಒಕ್ಕೂಟ ವ್ಯವಸ್ಥೆಯಲ್ಲಿ ದಕ್ಷಿಣ ಭಾರತದ ರಾಜಕೀಯ ಪ್ರಭಾವವನ್ನು ಕುಗ್ಗಿಸುತ್ತದೆ ಎನ್ನುವ ಆಕ್ಷೇಪ ಮುಂಪಂಕ್ತಿಗೆ ಬಂದಿದೆ. ಕ್ಷೇತ್ರ ಮರುವಿಂಗಡಣೆ ಮಾಡುವ ಮೊದಲು ಆಯಾ ರಾಜ್ಯಗಳ ಅಭಿಪ್ರಾಯ ಪಡೆಯುವುದು ಕಡ್ಡಾಯವಾಗಬೇಕು. ರಾಜ್ಯಗಳ ಸಹಮತಿಯಿಲ್ಲದೆ ಏಕಪಕ್ಷೀಯವಾಗಿ ಸಂಸದೀಯ ಕ್ಷೇತ್ರಗಳ ಮರುವಿಂಗಡಣೆ ಮಾಡುವುದು ಸೂಕ್ತವಲ್ಲ ಎನ್ನುವ ವಿರೋಧ ವ್ಯಕ್ತವಾಗುತ್ತಿದೆ. ಕೇಂದ್ರ ಸರ್ಕಾರ ರಾಜ್ಯಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿದ್ದರೆ, ಇದು ದೇಶದ ಏಕತೆ ಮತ್ತು ಶಾಂತಿಗೆ ಭಂಗ ತರಬಹುದು ಎನ್ನುವುದರಲ್ಲಿ ಅನುಮಾನವಿಲ್ಲ.

- Advertisement -

ಕ್ಷೇತ್ರ ಮರುವಿಂಗಡಣೆ ಕೇವಲ ಅಂಕಿ-ಅಂಶಗಳ ಲೆಕ್ಕಾಚಾರವಲ್ಲ. ಇದು ಭಾರತದ ಒಕ್ಕೂಟ ವ್ಯವಸ್ಥೆಯ ಮೇಲಿನ ಹೊಡೆತ. ಮುಖ್ಯಮಂತ್ರಿ ಸ್ಟ್ಯಾಲಿನ್ ಅವರ ಆಕ್ಷೇಪ ಕೇವಲ ತಮಿಳುನಾಡಿನ ಆಕ್ಷೇಪವಲ್ಲವದು, ಅದು ಇಡೀ ದಕ್ಷಿಣ ಭಾರತದ ರಾಜ್ಯಗಳ ಆತಂಕವಾಗಿದೆ ಎನ್ನುವುದು ಕೂಡ ಮುಖ್ಯ. ಕೇಂದ್ರ ಸರ್ಕಾರ ಅಭಿವೃದ್ಧಿ ಹೊಂದಿದ ರಾಜ್ಯಗಳಿಗೆ ಅನ್ಯಾಯವಾಗದಂತೆ “ವೈಜ್ಞಾನಿಕ ಮತ್ತು ನ್ಯಾಯಸಮ್ಮತ” ಸೂತ್ರವನ್ನು ಕಂಡುಕೊಳ್ಳಬೇಕಿರುವುದು ಅನಿವಾರ್ಯವಾಗಿದೆ.

ಕ್ಷೇತ್ರ ಮರುವಿಂಗಡಣೆ ಮತ್ತು ಬಿಜೆಪಿ: ಲಾಭದ ಲೆಕ್ಕಾಚಾರಗಳು

ಇದೊಂದು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗಿ ಉಳಿದಿಲ್ಲ, ಅದು ಬಿಜೆಪಿಯ ಭವಿಷ್ಯದ ರಾಜಕೀಯ ತಂತ್ರಗಾರಿಕೆಯ ಭಾಗವೇ ಎನ್ನುವ ಚರ್ಚೆಯನ್ನು ಮುನ್ನೆಲೆಗೆ ತಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಬಿಜೆಪಿಯ ಪ್ರಬಲ ಮತಬ್ಯಾಂಕ್ ಇರುವುದು ಹಿಂದಿ ಭಾಷಿಕ ರಾಜ್ಯಗಳಾದ ಉತ್ತರ ಪ್ರದೇಶ, ಬಿಹಾರ, ಮಧ್ಯಪ್ರದೇಶ ಮತ್ತು ರಾಜಸ್ಥಾನಗಳಲ್ಲಿ. ಮರುವಿಂಗಡಣೆಯಲ್ಲಿ ಜನಸಂಖ್ಯೆ ಹೆಚ್ಚಿರುವ ಈ ರಾಜ್ಯಗಳ ಲೋಕಸಭಾ ಕ್ಷೇತ್ರಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗಲಿದೆ. ಇದು ಉತ್ತರ ಭಾರತದಲ್ಲಿ ಬಿಜೆಪಿಗೆ ಹೆಚ್ಚುವರಿ ಬಲ ತಂದುಕೊಡಲಿದೆ ಎನ್ನುವುದು ಸತ್ಯಾಂಶ.

ಮರುವಿಂಗಡಣೆಯ ಬಳಿಕ ಉತ್ತರ ಪ್ರದೇಶದಲ್ಲಿ ಪ್ರಸ್ತುತ ಇರುವ ಕ್ಷೇತ್ರಗಳ ಸಂಖ್ಯೆಗಿಂತ 80ರಿಂದ 140 ಕ್ಷೇತ್ರಗಳ ಹೆಚ್ಚಾಗಬಹುದು ಎಂದು ಹೇಳಲಾಗುತ್ತಿದೆ. ಈ ಭಾಗದಲ್ಲಿ ಬಿಜೆಪಿಗಿರುವ ಹಿಡಿತವು ಕೇಂದ್ರದಲ್ಲಿ ಅಧಿಕಾರ ಉಳಿಸಿಕೊಳ್ಳಲು ದಾರಿಯನ್ನು ಸುಗಮಗೊಳಿಸಲಿದೆ ಎನ್ನುವುದು ಇಲ್ಲಿ ಮುಖ್ಯಾಂಶ.

ಇದನ್ನೂ ಓದಿ : ಕದನ ವಿರಾಮ ಘೋಷಿಸಿದ್ದರೂ, ಹಾರ್ಮುಜ್ ‘ಸುಂಕ’ ಮುಂದುವರಿಯಲಿವೆ!

ಪ್ರಸ್ತುತ ಲೋಕಸಭಾ ಕ್ಷೇತ್ರಗಳ ಸಂಖ್ಯೆ 543, ಮರುವಿಂಗಡಣೆಯ ನಂತರ 816ಕ್ಕೆ ಕ್ಷೇತ್ರಗಳಿಗೆ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಅಂದಾಜಿಸಲಾಗಿದೆ.

ದಕ್ಷಿಣ ಭಾರತದ ರಾಜ್ಯಗಳಲ್ಲಿ (ತಮಿಳುನಾಡು, ಕೇರಳ, ತೆಲಂಗಾಣ, ಆಂಧ್ರಪ್ರದೇಶ) ಬಿಜೆಪಿಯಂತಹ ರಾಷ್ಟ್ರೀಯ ಪಕ್ಷಗಳಿಗಿಂತ ಪ್ರಾದೇಶಿಕ ಪಕ್ಷಗಳೇ ಪ್ರಬಲವಾಗಿವೆ. ಮರುವಿಂಗಡಣೆಯ ನಂತರ ಒಟ್ಟು ಲೋಕಸಭೆಯ ಕ್ಷೇತ್ರಗಳಲ್ಲಿ ದಕ್ಷಿಣ ಭಾರತದ ಪಾಲಿನ ಶೇಕಡಾವಾರು ಪ್ರಮಾಣ ಕಡಿಮೆಯಾಗಲಿದೆ.

ಇದರಿಂದ ರಾಷ್ಟ್ರೀಯ ಮಟ್ಟದಲ್ಲಿ ಡಿಎಂಕೆ (DMK), ಬಿಆರ್‌ಎಸ್‌ (BRS), ಟಿಎಂಸಿ (TMC) ಅಂತಹ ಪಕ್ಷಗಳ ಅಥವಾ ಪ್ರಾದೇಶಿಕ ಪಕ್ಷಗಳ ಹಿಡಿತ ಕುಸಿಯಲಿದೆ. ಇದು ಬಿಜೆಪಿಯಂತಹ ರಾಷ್ಟ್ರೀಯ ಪಕ್ಷಕ್ಕೆ ಹೆಚ್ಚಿನ ಅನುಕೂಲ ತಂದುಕೊಡಲಿದೆ ಎನ್ನುವುದು ವಾದ. ಇನ್ನು, ತನ್ನ ಪಾಲಿಗೆ ಒಲಿಯುವ ಮತಗಳು ಹೆಚ್ಚಿರುವ ಕಡೆ ಹೊಸ ಕ್ಷೇತ್ರಗಳನ್ನು ಮಾಡುವುದು ಬಿಜೆಪಿ ನೇತೃತ್ವದ ಪಿತೂರಿ ರಾಜಕಾರಣದ ಭಾಗ ಎಂದೂ ಕೂಡ ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ.

ಬಿಜೆಪಿಯನ್ನು ಸಾಂಪ್ರದಾಯಿಕವಾಗಿ ‘ನಗರವಾಸಿಗಳ ಪರವಾದ ಪಕ್ಷ’ ಎಂದು ಗುರುತಿಸಲಾಗುತ್ತದೆ. ಕಳೆದ ಎರಡು ದಶಕಗಳಲ್ಲಿ ಭಾರತದಲ್ಲಿ ನಗರೀಕರಣ ವೇಗವಾಗಿ ನಡೆದಿದೆ. ಮರುವಿಂಗಡಣೆಯು ನಗರ ಪ್ರದೇಶಗಳಲ್ಲಿ ಹೆಚ್ಚಿನ ಕ್ಷೇತ್ರಗಳನ್ನು ಸೃಷ್ಟಿಸಲಿದೆ. ಇದು ಬಿಜೆಪಿಯ ಮತದಾನದ ಶೇಕಡಾವಾರು ಪ್ರಮಾಣವನ್ನು ಕ್ಷೇತ್ರಗಳಾಗಿ ಪರಿವರ್ತಿಸಲು ಸಹಕಾರಿಯಾಗಲಿದೆ.

ಜಮ್ಮು ಮತ್ತು ಕಾಶ್ಮೀರದ ಮಾದರಿ

ಜಮ್ಮು ಮತ್ತು ಕಾಶ್ಮೀರದಲ್ಲಿ ಇತ್ತೀಚೆಗೆ ನಡೆದ ಕ್ಷೇತ್ರ ಮರುವಿಂಗಡಣೆ ಇದಕ್ಕೆ ಉತ್ತಮ ಉದಾಹರಣೆ. ಅಲ್ಲಿ ಜಮ್ಮು ಭಾಗದ (ಬಿಜೆಪಿ ಪ್ರಬಲವಾಗಿರುವ ಪ್ರದೇಶ)ಕ್ಷೇತ್ರಗಳ ಸಂಖ್ಯೆಯನ್ನು ಹೆಚ್ಚಿಸಲಾಯಿತು. ಇದನ್ನು ವಿರೋಧ ಪಕ್ಷಗಳು “ಬಿಜೆಪಿಗೆ ಅನುಕೂಲ ಮಾಡಿಕೊಡುವ ತಂತ್ರ” ಎಂದು ಟೀಕಿಸಿದ್ದವು. ಇದೇ ಮಾದರಿಯನ್ನು ರಾಷ್ಟ್ರೀಯ ಮಟ್ಟದಲ್ಲೂ ಅಳವಡಿಸುವುದಕ್ಕೆ ಬಿಜೆಪಿ ಮುಂದಾಗಿದೆ. ಇದನ್ನು ಬಿಜೆಪಿಯ ರಾಜಕೀಯ ಕುತಂತ್ರ ಎಂದೇ ಹೇಳಲಾಗುತ್ತಿದೆ.

ರಾಜ್ಯವಾರು ಕ್ಷೇತ್ರಗಳ ಸಂಭಾವ್ಯ ಏರಿಕೆಯ ಪ್ರಮಾಣ :

ದಕ್ಷಿಣದ ರಾಜ್ಯಗಳಲ್ಲಿ ಜನಸಂಖ್ಯೆ ನಿಯಂತ್ರಣದಲ್ಲಿರುವುದರಿಂದ ಕ್ಷೇತ್ರಗಳ ಏರಿಕೆ ತುಲನಾತ್ಮಕವಾಗಿ ಕಡಿಮೆ ಇರಬಹುದು. ಆದರೂ, ಕರ್ನಾಟಕದಲ್ಲಿ ಪ್ರಸ್ತುತ 28 ಇರುವ ಕ್ಷೇತ್ರಗಳು ಸುಮಾರು 41 ರಿಂದ 43ಕ್ಕೆ ಏರಿಕೆಯಾಗಬಹುದು. ತಮಿಳುನಾಡಿನಲ್ಲಿ 39ರಿಂದ ಸುಮಾರು 49ಕ್ಕೆ ಏರಬಹುದು. ಆಂಧ್ರಪ್ರದೇಶ ಮತ್ತು ತೆಲಂಗಾಣಗಳಲ್ಲಿ ಒಟ್ಟಾಗಿ 42 ರಿಂದ ಸುಮಾರು 54ಕ್ಕೆ ಏರಬಹುದು. ಕೇರಳದಲ್ಲಿ ಜನಸಂಖ್ಯೆ ಪ್ರಮಾಣ ಸ್ಥಿರವಾಗಿರುವುದರಿಂದ ಹೆಚ್ಚಿನ ಬದಲಾವಣೆ ಸಾಧ್ಯವಿಲ್ಲ ಅಥವಾ ಅಲ್ಪ ಮಟ್ಟಿಗೆ ಏರಿಕೆ ಕಾಣಬಹುದು(20ರಿಂದ 22-23ಕ್ಕೆ ಏರಿಕೆ)ಎಂದು ಹೇಳಲಾಗಿದೆ.

ಇನ್ನು, ಹೆಚ್ಚಿನ ಜನಸಂಖ್ಯೆ ಹೊಂದಿರುವ ಉತ್ತರ ಭಾರತದ ರಾಜ್ಯಗಳಲ್ಲಿ ಕ್ಷೇತ್ರಗಳ ಸಂಖ್ಯೆಯಲ್ಲಿ ಭಾರಿ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಅಂದಾಜಿಸಲಾಗಿದೆ.  ಉತ್ತರ ಪ್ರದೇಶದಲ್ಲಿ ಪ್ರಸ್ತುತ ಇರುವ 80  ಕ್ಷೇತ್ರಗಳು 140ಕ್ಕಿಂತ ಹೆಚ್ಚಾಗುವ ಸಾಧ್ಯತೆಯಿದೆ. ಬಿಹಾರದಲ್ಲಿ 40 ರಿಂದ ಸುಮಾರು 79ಕ್ಕೆ ಏರಬಹುದು. ರಾಜಸ್ಥಾನದಲ್ಲಿ 25 ರಿಂದ ಸುಮಾರು 50ಕ್ಕೆ ಏರಬಹುದು. ಮಧ್ಯಪ್ರದೇಶದಲ್ಲಿ 29 ರಿಂದ ಸುಮಾರು 52ಕ್ಕೆ ಏರಬಹುದು. ಇನ್ನು, ಇತರೆ ಪ್ರಮುಖ ರಾಜ್ಯಗಳಾದ ಪಶ್ಚಿಮ ಬಂಗಾಳದಲ್ಲಿ 42 ರಿಂದ ಸುಮಾರು 60 ಕ್ಕೆ ಏರಬಹುದು. ಮಹಾರಾಷ್ಟ್ರದಲ್ಲಿ 48 ರಿಂದ ಸುಮಾರು 76ಕ್ಕೆ ಏರಬಹುದು, ಗುಜರಾತ್ ರಾಜ್ಯದಲ್ಲಿ 26 ರಿಂದ ಸುಮಾರು 43ಕ್ಕೆ ಕ್ಷೇತ್ರಗಳ ಏರಿಕೆಯಾಗಬಹುದು ಎಂದು ಅಂದಾಜಿಸಲಾಗಿದೆ.

ಒಟ್ಟಿನಲ್ಲಿ, ಬಿಜೆಪಿಗೆ ಆಗುವ ಲಾಭಗಳೇ ವಿರೋಧ ಪಕ್ಷಗಳಿಗೆ ದೊಡ್ಡ ಆತಂಕದ ವಿಷಯವಾಗಿವೆ. ಕೇವಲ ಜನಸಂಖ್ಯೆಯ ಆಧಾರದ ಮೇಲೆ ಕ್ಷೇತ್ರಗಳ ಮರುವಿಂಗಡನೆ ಮಾಡಿದರೆ, ಅಭಿವೃದ್ಧಿ ಹೊಂದಿದ ರಾಜ್ಯಗಳು ರಾಜಕೀಯವಾಗಿ ಅಪ್ರಸ್ತುತವಾಗುತ್ತವೆ ಎನ್ನುವ ವಾದವೂ ಇದೆ. ಇದು ಕ್ರಮೇಣ ದೇಶದ ಒಗ್ಗಟ್ಟಿಗೆ ಸಂಚಕಾರ ತರಬಹುದು ಎನ್ನುವ ವಾದವನ್ನು ತಳ್ಳಿಹಾಕುವಂತಿಲ್ಲ.

IMG 20260316 WA0002
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಜಿಪಂ, ತಾಪಂ ಚುನಾವಣೆ: ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿಗಳ ಪ್ರಚಾರ ಜೋರು!

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್‌...

ಸಿಜೆಪಿ ನಾಯಕರ ಬಂಧನಕ್ಕೆ ತೀವ್ರ ಖಂಡನೆ: ತಕ್ಷಣ ರಾಂಕಾ, ಸೌರವ್ ಬಿಡುಗಡೆಗೆ ವಿಪಕ್ಷಗಳ ಆಗ್ರಹ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

ಪತಿಯನ್ನು ಕೊಂದು ಕಾಂಕ್ರೀಟ್ ಡ್ರಮ್‌ನಲ್ಲಿ ಹೂತಿಟ್ಟ ಪ್ರಕರಣ: ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ

ಮರ್ಚೆಂಟ್ ನೇವಿ ಅಧಿಕಾರಿ ಸೌರಭ್ ರಜಪೂತ್ ಅವರನ್ನು ಬರ್ಬರವಾಗಿ ಹತ್ಯೆಗೈದು, ಮೃತದೇಹವನ್ನು...

ಜಂತರ್ ಮಂತರ್ ಧರಣಿ ಸ್ಥಳ ರದ್ದತಿ ಖಂಡಿಸಿ ಎಸ್‌ಎಫ್‌ಐ, ಡಿವೈಎಫ್‌ಐ ಪ್ರತಿಭಟನಾ ಮೆರವಣಿಗೆ: ಹಲವು ನಾಯಕರು ಪೊಲೀಸ್ ವಶಕ್ಕೆ

ದೇಶದ ರಾಜಧಾನಿ ದೆಹಲಿಯ ಐತಿಹಾಸಿಕ 'ಜಂತರ್ ಮಂತರ್' ಅನ್ನು ಪ್ರಜಾಸತ್ತಾತ್ಮಕ ಪ್ರತಿಭಟನಾ...