ವಯನಾಡು | ಪ್ರಿಯಾಂಕಾ ಗಾಂಧಿಗೆ ಕಪ್ಪು ಬಾವುಟ ಪ್ರದರ್ಶಿಸಿದ ಸಿಪಿಐಎಂ ಕಾರ್ಯಕರ್ತರು

Date:

ಮಂಗಳವಾರ ವಯನಾಡಿಗೆ ಭೇಟಿ ನೀಡಿದ್ದ ಕಾಂಗ್ರೆಸ್ ನಾಯಕಿ ಮತ್ತು ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಸಿಪಿಐಎಂ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿದರು. “ಸಂಸದರು ಕ್ಷೇತ್ರಕ್ಕೆ ಬರೀ ಸಾಂದರ್ಭಿಕವಾಗಿ ಭೇಟಿ ನೀಡುತ್ತಿದ್ದಾರೆ ಎಂದು ಸಿಪಿಐಎಂ ಕಾರ್ಯಕರ್ತರು ಆರೋಪಿಸಿದರು.

- Advertisement -

ಕಣ್ಣೂರು ವಿಮಾನ ನಿಲ್ದಾಣದಿಂದ ವಯನಾಡಿಗೆ ತೆರಳುತ್ತಿದ್ದಾಗ ಪ್ರಿಯಾಂಕಾ ಗಾಂಧಿ ಅವರಿಗೆ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿದರು. ಯಾವುದೇ ಸಮಸ್ಯೆಯಿದ್ದರೆ ಮಾತ್ರ ಸಂಸದೆ ಕ್ಷೇತ್ರಕ್ಕೆ ಭೇಟಿ ನೀಡುತ್ತಾರೆ ಎಂದು ಆರೋಪಿಸಿ ಸಿಪಿಐಎಂ ಕಾರ್ಯಕರ್ತರು ಘೋಷಣೆ ಕೂಗಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನು ಓದಿದ್ದೀರಾ? ದುಷ್ಟ ಸರ್ಕಾರದ ವಿರುದ್ಧ ನಮ್ಮ ಹೋರಾಟ, ಸಂವಿಧಾನ ಉಳಿವಿಗಾಗಿ ಜೀವ ಕೊಡಲು ಸಿದ್ಧ: ಪ್ರಿಯಾಂಕಾ ಗಾಂಧಿ

ಪ್ರಿಯಾಂಕಾ ಗಾಂಧಿ ಹುಲಿ ದಾಳಿಯಲ್ಲಿ ಮೃತಪಟ್ಟ ತೋಟಗಾರಿಕಾ ಕೆಲಸಗಾರ್ತಿ ರಾಧಾ ಮತ್ತು ತನ್ನ ಮಗನೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಎಂ.ಎನ್. ವಿಜಯನ್ ಅವರ ಮನೆಗಳಿಗೆ ಭೇಟಿ ನೀಡಿದರು.

ರಾಧಾ ಅವರ ಕುಟುಂಬಕ್ಕೆ ಸಾಧ್ಯವಿರುವ ಎಲ್ಲಾ ಸಹಾಯವನ್ನು ನೀಡುವ ಭರವಸೆಯನ್ನು ಪ್ರಿಯಾಂಕಾ ಗಾಂಧಿ ನೀಡಿದರು. ಜೊತೆಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಾನವ-ಪ್ರಾಣಿ ಸಂಘರ್ಷದ ವಿಷಯಗಳನ್ನು ಚರ್ಚಿಸುವುದಾಗಿಯೂ ಭರವಸೆ ನೀಡಿದರು.

ವಿಜಯನ್ ಅವರ ಮನೆಗೆ ಪ್ರಿಯಾಂಕಾ ಗಾಂಧಿ ಅವರ ಭೇಟಿಯು ರಾಜಕೀಯವಾಗಿ ಮಹತ್ವವನ್ನು ಪಡೆದುಕೊಂಡಿದೆ. ಕಾಂಗ್ರೆಸ್ ಶಾಸಕ ಐ ಸಿ ಬಾಲಕೃಷ್ಣನ್ ಮತ್ತು ಕಾಂಗ್ರೆಸ್ ಜಿಲ್ಲಾ ಸಮಿತಿ ಅಧ್ಯಕ್ಷ ಎನ್.ಡಿ. ಅಪ್ಪಚ್ಚನ್ ಅವರು ವಿಜಯನ್ ಮತ್ತು ಅವರ ಮಗನ ಆತ್ಮಹತ್ಯಾ ಪ್ರಚೋದನೆ ಪ್ರಕರಣದಲ್ಲಿ ಆರೋಪಿಗಳಾಗಿದ್ದು ಅವರನ್ನು ಬಂಧಿಸಿ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಹಾಗಾಗಿ ರಾಜಕೀಯವಾಗಿ ಈ ಭೇಟಿ ಚರ್ಚೆಗೆ ಗ್ರಾಸವಾಗಿದೆ.

ಇದನ್ನು ಓದಿದ್ದೀರಾ? ತನ್ನ ಕೆನ್ನೆಯ ಬಗ್ಗೆ ಮಾತನಾಡಿದ ಬಿಜೆಪಿ ನಾಯಕ ಬಿಧುರಿಗೆ ಪ್ರಿಯಾಂಕಾ ಗಾಂಧಿ ತಿರುಗೇಟು

ಕಾಂಗ್ರೆಸ್ ಶಾಸಕ ಬಾಲಕೃಷ್ಣನ್ ಮತ್ತು ಇತರರು ಪಕ್ಷದ ನಿಯಂತ್ರಣದಲ್ಲಿರುವ ಸಹಕಾರಿ ಬ್ಯಾಂಕ್‌ಗಳಿಗೆ ನೇಮಕಾತಿಗಳಲ್ಲಿ ಅಕ್ರಮ ಎಸಗಿದ್ದರಿಂದ ವಿಜಯನ್ ಆರ್ಥಿಕ ಬಿಕ್ಕಟ್ಟಿಗೆ ಒಳಗಾಗಿದ್ದರು ಎಂದು ಹೇಳಲಾಗಿದೆ. ಈ ಬಿಕ್ಕಟ್ಟಿನ ಬಗ್ಗೆ ಪ್ರಿಯಾಂಕಾ ಗಾಂಧಿ ವಿಚಾರಿಸಿದ್ದಾರೆ ಎಂದು ಹೇಳಲಾಗಿದೆ.

ತನ್ನ ಸಹೋದರ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ರಾಯ್‌ಬರೇಲಿಯನ್ನು ಆಯ್ಕೆ ಮಾಡಿಕೊಂಡ ಬಳಿಕ ವಯನಾಡಿನಲ್ಲಿ ಉಪಚುನಾವಣೆ ನಡೆದಿದೆ. ಈ ಚುನಾವಣೆಯಲ್ಲಿ ಸ್ಪರ್ಧಿಸಿದ ಪ್ರಿಯಾಂಕಾ ಗಾಂಧಿ ಗೆಲವುದು ಸಾಧಿಸಿದ್ದಾರೆ. ಅದಾದ ಬಳಿಕ ಕೊನೆಯದಾಗಿ ಡಿಸೆಂಬರ್ 1 ಮತ್ತು 2ರಂದು ವಯನಾಡಿಗೆ ಭೇಟಿ ನೀಡಿದ್ದರು. ಈಗ ಜನವರಿ ಅಂತ್ಯದಲ್ಲಿ ಪ್ರಿಯಾಂಕಾ ಗಾಂಧಿ ಭೇಟಿ ನೀಡಿದ್ದಾರೆ. ಈ ಕಾರಣದಿಂದಾಗಿ ಸಿಪಿಐಎಂ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...