ಜೈಲಿನಲ್ಲಿರುವ ಪುನೀತ್ ಕೆರೆಹಳ್ಳಿ ವಿರುದ್ಧ ‘ಬಾಡಿ ವಾರೆಂಟ್’ ಜಾರಿ: ಕೋರ್ಟ್ ಈ ಆದೇಶ ನೀಡಿದ್ದೇಕೆ?

Date:

ಹಿಂದುತ್ವ ಕೋಮುವಾದಿ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ವಿರುದ್ಧ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ‘ಬಾಡಿ ವಾರೆಂಟ್’ (Body Warrant) ಹೊರಡಿಸಿದೆ. ಸಾರ್ವಜನಿಕ ಶಾಂತಿ ಭಂಗ, ಸೌಹಾರ್ದತೆಗೆ ಧಕ್ಕೆ ಹಾಗೂ ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಲಯವು ಈ ಕ್ರಮ ಕೈಗೊಂಡಿದೆ.

- Advertisement -

ಪುನೀತ್ ಕೆರೆಹಳ್ಳಿ ಅವರನ್ನು ಚಾಮರಾಜಪೇಟೆಯಲ್ಲಿ ನಡೆದ ಈದ್ ಮಿಲಾದ್ ಮೆರವಣಿಗೆಯ ವೇಳೆ ಗಲಾಟೆ ಸೃಷ್ಟಿಸಿದ ಮತ್ತು ಶಾಂತಿ ಭಂಗ ತಂದ ಆರೋಪದಡಿ ಪೊಲೀಸರು ಇತ್ತೀಚೆಗೆ ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಿದ್ದಾರೆ. ಈಗಾಗಲೇ ಜೈಲಿನಲ್ಲಿದ್ದು, ಬೇರೊಂದು ಕರಣಗಳಿಗೆ ಸಂಬಂಧಿಸಿದಂತೆ ಈಗ ಬಾಡಿ ವಾರೆಂಟ್ ಜಾರಿಗೊಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯೋಗವು ತಾನೇ ಹಾಕಿಕೊಂಡ ಗಂಟುಗಳನ್ನು ಬಿಡಿಸಿಕೊಳ್ಳಬಲ್ಲದೇ? ಇದೇ...

SIR ನಡೆಸುವ ನಿರ್ಧಾರ ಸರ್ವಾನುಮತದಿಂದ ಕೂಡಿತ್ತು ಎಂದು ಜನ ನಂಬಬೇಕಾದರೆ, ಆಯೋಗವು ಸಂಬಂಧಿಸಿದ ಸಭೆಯ ಅಧಿಕೃತ ನಡಾವಳಿಗಳನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡಬೇಕು. ಆ ಮೂಲಕ ಚುನಾವಣಾ ಆಯೋಗವು ತಾನೇ ಸೃಷ್ಟಿಸಿಕೊಂಡಿರುವ ಗೋಜಲುಗಳಿಂದ ಬಿಡಿಸಿಕೊಳ್ಳಬೇಕು. ಭಾರತೀಯ...

ನೊಬೆಲ್‌ ಪ್ರಶಸ್ತಿ ಸರಣಿ | ಕಣ ಭೌತವಿಜ್ಞಾನ-ಖಗೋಳವಿಜ್ಞಾನಗಳೆರಡರ ಸಮ್ಮಿಳನದ...

ಫ್ರಾನ್ಸಿಸ್ ಹಾಲ್ಜೆನ್ ಅವರ ಮೂಲ ಆಲೋಚನೆ ಕೇವಲ ಹಿಮದೊಳಗೆ ಸಂವೇದಕಗಳನ್ನು ಇಡುವ ಯೋಜನೆಯಾಗಿರಲಿಲ್ಲ. ಅದು ವಿಶ್ವವನ್ನು ನೋಡುವ ಹೊಸ ವಿಧಾನಕ್ಕೆ ಬಾಗಿಲು ತೆರೆಯುವ ಆಲೋಚನೆಯಾಗಿತ್ತು. ಅಗೋಚರವಾಗಿರುವ ಕಣಗಳನ್ನು ಹಿಡಿಯುವ ಮೂಲಕ, ವಿಶ್ವದ ಅತ್ಯಂತ...

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪುನೀತ್ ಕೆರೆಹಳ್ಳಿ ಜೈಲಿನಲ್ಲಿ ಕಳೆದ 20 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡಲಾಗಿತ್ತು. ಆದರೆ ಜೈಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಅವರು ನಿಯಮಿತವಾಗಿ ಊಟ ಮಾಡುತ್ತಿರುವುದು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಸುಳ್ಳು ವದಂತಿ ಹರಡಿದ 23 ಸೋಷಿಯಲ್ ಮೀಡಿಯಾ ಖಾತೆಗಳ ವಿರುದ್ಧ ಬೆಂಗಳೂರಿನ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಇದನ್ನೂ ಓದಿ: ಕೋಮು ದ್ವೇಷ ಹರಡಲು ಯತ್ನ: ಪುನೀತ್ ಕೆರೆಹಳ್ಳಿ ವಿರುದ್ಧ ಪೊಲೀಸ್ ದೂರು

Advertisements

ಏನಿದು ‘ಬಾಡಿ ವಾರೆಂಟ್’?

ಕಾನೂನು ಭಾಷೆಯಲ್ಲಿ ‘ಬಾಡಿ ವಾರೆಂಟ್’ ಎಂದರೆ ಬಂಧನದಲ್ಲಿರುವ ವ್ಯಕ್ತಿಯನ್ನು ಇನ್ನೊಂದು ಪ್ರಕರಣದ ವಿಚಾರಣೆ ಅಥವಾ ತನಿಖೆಗಾಗಿ ನ್ಯಾಯಾಲಯ ಅಥವಾ ತನಿಖಾಧಿಕಾರಿಗಳ ಮುಂದೆ ಹಾಜರುಪಡಿಸಲು ಹೊರಡಿಸುವ ಆದೇಶ (Prisoner Production Warrant / Section 267 CrPC – ನೂತನ BNSS ನಿಯಮಾವಳಿಗಳು).

ಒಬ್ಬ ವ್ಯಕ್ತಿಯು ಈಗಾಗಲೇ ಯಾವುದೋ ಒಂದು ಪ್ರಕರಣದಲ್ಲಿ ಜೈಲಿನಲ್ಲಿದ್ದರೆ (ನ್ಯಾಯಾಂಗ ಬಂಧನ), ಆತನ ವಿರುದ್ಧ ದಾಖಲಾಗಿರುವ ಮತ್ತೊಂದು ಪ್ರಕರಣದ ತನಿಖೆ, ವಿಚಾರಣೆ ಅಥವಾ ಬಂಧನ ಪ್ರಕ್ರಿಯೆಗಾಗಿ ಪೊಲೀಸರು ನೇರವಾಗಿ ಆತನನ್ನು ಬಂಧಿಸಲು ಸಾಧ್ಯವಿಲ್ಲ. ಇಂತಹ ಸಂದರ್ಭದಲ್ಲಿ ಪೊಲೀಸರು ಸಂಬಂಧಪಟ್ಟ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿ, “ಆರೋಪಿಯನ್ನು ಜೈಲಿನಿಂದ ಕರೆಸಿ ವಿಚಾರಣೆ ನಡೆಸಲು ಅನುಮತಿ ನೀಡಬೇಕು” ಎಂದು ಕೋರುತ್ತಾರೆ. ಕೋರ್ಟ್ ನೀಡುವ ಈ ಆದೇಶವನ್ನೇ ‘ಬಾಡಿ ವಾರೆಂಟ್’ ಎನ್ನಲಾಗುತ್ತದೆ.

ಪುನೀತ್ ಕೆರೆಹಳ್ಳಿ ವಿರುದ್ಧ ಸಾರ್ವಜನಿಕ ಶಾಂತಿ ಮತ್ತು ಸೌಹಾರ್ದತೆಗೆ ಧಕ್ಕೆ ತರದಂತೆ ಮುಚ್ಚಳಿಕೆ ಅಥವಾ ಬಾಂಡ್ ಬರೆದುಕೊಡುವಂತೆ ಸೂಚಿಸಲಾಗಿತ್ತು. ಆದರೆ, ಅವರು ಮುಚ್ಚಳಿಕೆ ನೀಡಲು ನಿರಾಕರಿಸಿದ್ದು ಹಾಗೂ ಬಾಂಡ್ ನಿಯಮಗಳನ್ನು ಉಲ್ಲಂಘಿಸಿರುವುದು ನ್ಯಾಯಾಲಯದ ಗಮನಕ್ಕೆ ಬಂದಿದೆ ಎಂದು ಕೋರ್ಟ್ ಹೇಳಿದೆ.

ನ್ಯಾಯಾಂಗ ಬಂಧನದಲ್ಲಿರುವಾಗ ಅಥವಾ ಹೊರಗಿದ್ದಾಗ ದಾಖಲಾದ ಇತರ ಹಳೆಯ/ಹೊಸ ದೂರುಗಳಿಗೆ ಸಂಬಂಧಿಸಿದಂತೆ ಆರೋಪಿಯ ಸಮ್ಮುಖ ವಿಚಾರಣೆ ಮತ್ತು ವಿಚಾರಣಾ ಪ್ರಕ್ರಿಯೆಯನ್ನು ಮುಂದುವರಿಸಲು ಆರೋಪಿಯನ್ನು ಕೋರ್ಟ್‌ಗೆ ಹಾಜರುಪಡಿಸುವುದು ಕಾನೂನಾತ್ಮಕವಾಗಿ ಅಗತ್ಯವಾಗಿದೆ ಎಂದು ತಿಳಿಸಿದೆ.

ಹಾಗೆಯೇ ಪದೇ ಪದೇ ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ಪ್ರಚೋದನಾಕಾರಿ ಹೇಳಿಕೆಗಳು ಹಾಗೂ ಘಟನೆಗಳಲ್ಲಿ ಭಾಗಿಯಾಗುತ್ತಿರುವ ಆರೋಪವಿರುವುದರಿಂದ, ನ್ಯಾಯಾಂಗ ಪ್ರಕ್ರಿಯೆಗಳನ್ನು ಬಾಕಿ ಉಳಿಸದೆ ಶೀಘ್ರ ತನಿಖೆಗೊಳಪಡಿಸಲು ‘ಸಕಾರಣ’ಗಳಿವೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಪುನೀತ್ ಕೆರೆಹಳ್ಳಿ ವಿರುದ್ಧ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ಹತ್ತಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. 2023ರ ಏಪ್ರಿಲ್‌ನಲ್ಲಿ ರಾಮನಗರ ಜಿಲ್ಲೆಯ ಸಾತನೂರಿನಲ್ಲಿ ಗೋ ಸಾಗಾಟ ಮಾಡುತ್ತಿದ್ದ ಇದ್ರೀಸ್ ಪಾಷಾ ಎಂಬವರ ಅನುಮಾನಾಸ್ಪದ ಸಾವು ಪ್ರಕರಣದಲ್ಲಿ ಪುನೀತ್ ಕೆರೆಹಳ್ಳಿ ಮುಖ್ಯ ಆರೋಪಿ. ಈ ಪ್ರಕರಣದಲ್ಲಿ ಜಾಮೀನು ಸಿಕ್ಕಿತ್ತು.

ಮುಸ್ಲಿಂ ಧರ್ಮಗುರುಗಳ ವಿರುದ್ಧ ಪ್ರಚೋದನಾಕಾರಿ ಹಾಗೂ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಠಾಣೆ ಹಾಗೂ ಹಾಸನದಲ್ಲಿ ಪ್ರಕರಣಗಳು ದಾಖಲಾಗಿವೆ. ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಜಾತಿ ನಿಂದನೆ ಮತ್ತು ಬೆದರಿಕೆ ಹಾಕಿದ ಆರೋಪದಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಮೆಜೆಸ್ಟಿಕ್ ರೈಲ್ವೆ ಸ್ಟೇಷನ್ ಬಳಿ ಮಾಂಸದ ಪಾರ್ಸಲ್ ವಿಚಾರವಾಗಿ ಗಲಾಟೆ ನಡೆಸಿ ಸಾರ್ವಜನಿಕ ಶಾಂತಿ ಭಂಗ ತಂದ ಆರೋಪದ ಮೇಲೂ ದೂರು ದಾಖಲಾಗಿತ್ತು. ಈ ಹಿಂದೆ ಬೆಂಗಳೂರು ನಗರ ಪೊಲೀಸರು ಪುನೀತ್ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ಕ್ರಮ ಕೈಗೊಂಡಿದ್ದರು. ನಂತರ ಹೈಕೋರ್ಟ್ ಸಲಹಾ ಸಮಿತಿಯ ವರದಿ ಆಧರಿಸಿ ರದ್ದುಗೊಳಿಸಲಾಯಿತು. ಅಲ್ಲದೆ ಬಸವನಗುಡಿ ಹಾಗೂ ಇತರ ಠಾಣೆಗಳಲ್ಲಿ ರೌಡಿಶೀಟರ್ ಪಟ್ಟಿಯಲ್ಲಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋಶಾ ಆಡಳಿತ ಬಿತ್ತಿದ ಭಯ ತೊಲಗಿದ್ದು ಒಂದು ಅದ್ಭುತ: ನೇಹಾ ಬೋರಾ

ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ...

ಈಜಿಪ್ಟ್‌ನ ಪುರಾತನ ಸೇನಾ ಕೋಟೆಯಲ್ಲಿ 3 ಸಾವಿರ ವರ್ಷಗಳ ಹಳೆಯ ಕುದುರೆಯ ಅಸ್ಥಿಪಂಜರ ಪತ್ತೆ

ಈಜಿಪ್ಟ್‌ನ ಪಶ್ಚಿಮ ನೈಲ್ ಡೆಲ್ಟಾ ಭಾಗದಲ್ಲಿರುವ ಪುರಾತನ ಸೇನಾ ಕೋಟೆಯೊಂದರಲ್ಲಿ ಸುಮಾರು...

ಮತದಾನದ ಹಕ್ಕು ಕಳೆದುಕೊಂಡವರ ನೆರವಿಗೆ ಕಾಂಗ್ರೆಸ್ ಬೂತ್ ಮಟ್ಟದ ಅಭಿಯಾನ: ‘ಮತ ರಕ್ಷಕ’ರ ನೇಮಕಕ್ಕೆ ತೀರ್ಮಾನ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಮೂಲಕ ಮತದಾರರ...

SIR ನಲ್ಲಿ ಉತ್ತರ ಪ್ರದೇಶದ ಮತದಾರರ ಪಟ್ಟಿಗೆ 16.18 ಲಕ್ಷ ನಿಗೂಢ ಮತದಾರರ ಸೇರ್ಪಡೆ: ಏನಿದು ವರದಿ?

ಉತ್ತರ ಪ್ರದೇಶದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (SIR)ಯ ಆರಂಭಿಕ ಹಂತಗಳಲ್ಲಿ 16.18...