ಡಿಸಿಎಂ ಡಿ ಕೆ ಶಿವಕುಮಾರ್ ಕಚೇರಿ ಸ್ಫೋಟಿಸುವುದಾಗಿ ಬಾಂಬ್ ಬೆದರಿಕೆ

Date:

ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಕಚೇರಿಯನ್ನು ಸ್ಫೋಟಿಸುವುದಾಗಿ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ. ಇದರೊಂದಿಗೆ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನೂ ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ.

- Advertisement -

ಬಾಂಬ್ ಬೆದರಿಕೆ ಸಂದೇಶ ಬರುತ್ತಿದ್ದಂತೆಯೇ ತಕ್ಷಣ ಪೊಲೀಸರು, ಬಾಂಬ್ ಪತ್ತೆ ದಳ ಮತ್ತು ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ತೆರಳಿ ಶೋಧ ಕಾರ್ಯಾಚರಣೆ ನಡೆಸಿದೆ. ಡಿಸಿಎಂ ಮನೆ, ಕಚೇರಿ, ವಿಮಾನ ನಿಲ್ದಾನದಲ್ಲಿ ಬಾಂಬ್ ನಿಷ್ಕ್ರಿಯ ದಳ ತಪಾಸಣೆ ನಡೆಸಿದ್ದು, ಇದು ಹುಸಿ ಬಾಂಬ್ ಬೆದರಿಕೆ ಸಂದೇಶ ಎಂದು ತಿಳಿದುಬಂದಿದೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಎಐ ಕರಾಳ ಮುಖ: ಮುಂದಿನ ಹತ್ತು ವರ್ಷಗಳಲ್ಲಿ ನಾಗರಿಕತೆಗೆ...

ಎಐ ಸೇರಿದಂತೆ ತಂತ್ರಜ್ಞಾನದ ಅಭಿವೃದ್ಧಿ ಮಾನವನ ಕಲ್ಯಾಣಕ್ಕಾಗಿರಬೇಕೇ ಹೊರತು, ಮಾನವ ಜನಾಂಗದ ವಿನಾಶಕ್ಕಾಗಿಯಲ್ಲ. ಅಷ್ಟಕ್ಕೂ ಮುಂದಿನ ಒಂದು ದಶಕವು ಮಾನವ ನಾಗರಿಕತೆಯ ಭವಿಷ್ಯವನ್ನು ನಿರ್ಧರಿಸುವ ಅತ್ಯಂತ ನಿರ್ಣಾಯಕ ಅವಧಿಯಾಗಲಿದೆ ಎಂಬುದು ಖಚಿತ. ಸಾಕಷ್ಟು...

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮ್ಯಾಕಲ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಇದನ್ನು ಓದಿದ್ದೀರಾ? ವಾರಣಾಸಿ-ಬೆಂಗಳೂರು ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ; ಕೆನಡಾ ಪ್ರಜೆ ವಶಕ್ಕೆ

ಶನಿವಾರ ಬೆಳಿಗ್ಗೆ 9 ಗಂಟೆ ಸುಮಾರಿಗೆ ಇ-ಮೇಲ್‌ ಮೂಲಕ ಬೆದರಿಕೆ ಸಂದೇಶ ಬಂದಿತ್ತು. ವಿಮಾನ ನಿಲ್ದಾಣದ ಎರಡು ಟರ್ಮಿನಲ್‌ಗಳಲ್ಲಿ ನಾಲ್ಕು ಕಚ್ಚಾಬಾಂಬ್‌ಗಳನ್ನು(ಐಇಡಿ) ಇಡಲಾಗಿದೆ ಎಂದು ಇಮೇಲ್‌ನಲ್ಲಿ ಉಲ್ಲೇಖಿಸಲಾಗಿತ್ತು. ಡಿಕೆಶಿ ಕಚೇರಿಯಲ್ಲಿಯೂ ಬಾಂಬ್ ಇಟ್ಟಿರುವುದಾಗಿ ಇಮೇಲ್‌ನಲ್ಲಿ ತಿಳಿಸಲಾಗಿತ್ತು ವರದಿಯಾಗಿದೆ.

ಒಂದು ಇಮೇಲ್ [email protected] ಮೇಲ್‌ನಿಂದ ಬಂದಿದ್ದರೆ, ಮತ್ತೊಂದು ಇಮೇಲ್‌ ನಟಿಯೊಬ್ಬರ ಹೆಸರಿನ ಇಮೇಲ್‌ ಮೂಲಕ ಬಂದಿದೆ. ಎರಡೂ ನಕಲಿ ಇಮೇಲ್‌ಗಳು. ಕಿಡಿಗೇಡಿಗಳು ನಕಲಿ ಇಮೇಲ್‌ ಸೃಷ್ಟಿಸಿ ಹುಸಿ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹವಾಮಾನ | ಸೆ. 21, 22ರಂದು ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದೆ. ಭಾರತೀಯ ಹವಾಮಾನ ಇಲಾಖೆಯ (IMD) ಬೆಂಗಳೂರು...

ಬೆಂಗಳೂರಿನ 12 ಕ್ಷೇತ್ರಗಳಲ್ಲಿ ಆತಂಕ ಮೂಡಿಸಿದ ‘ಎಸ್‌ಐಆರ್’ ಪ್ರಕ್ರಿಯೆ

ರಾಜಧಾನಿ ಸೇರಿದಂತೆ ರಾಜ್ಯಾದ್ಯಂತ ಕರಡು ಮತದಾರರ ಪಟ್ಟಿಯಿಂದ ಲಕ್ಷಾಂತರ ಹೆಸರುಗಳನ್ನು ಸಗಟಾಗಿ...

ಇಂದಿನಿಂದ ವಿಶೇಷ ಅಧಿವೇಶನ: ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ನಿರ್ಣಯ ಸಾಧ್ಯತೆ

ಮಲೆನಾಡು ಹಾಗೂ ಕರಾವಳಿ ಭಾಗದ ಜನರ ಪಾಲಿಗೆ ನುಂಗಲಾರದ ತುತ್ತಾಗಿರುವ 'ಕಸ್ತೂರಿ...