ಕಾಂಗ್ರೆಸ್‌ಗೆ 135 ಸೀಟು ಬರುವುದರಲ್ಲಿ ಬೊಮ್ಮಾಯಿ ಕೊಡುಗೆಯೂ ಇದೆ: ಎಂ ಬಿ ಪಾಟೀಲ್‌

Date:

‌ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಬಿಜೆಪಿ ರಾಜ್ಯದಲ್ಲಿ ಹೀನಾಯವಾಗಿ ಸೋಲು ಕಂಡಿತು. ಹೀಗಿರುವಾಗ, ಲೋಕಸಭಾ ಚುನಾವಣೆ ಆದ ಮೇಲೆ ರಾಜ್ಯ ಸರ್ಕಾರ ಪತನವಾಗುತ್ತದೆ ಎಂದು ಹೇಳಲು ಅವರಿಗೆ ಯಾವ ನೈತಿಕತೆ ಇದೆ ಎಂದು ಭಾರಿ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಶುಕ್ರವಾರ ತಿರುಗೇಟು ನೀಡಿದರು.

- Advertisement -

ಬೆಂಗಳೂರಿನಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, “ಕಾಂಗ್ರೆಸ್ ಪಕ್ಷಕ್ಕೆ 135 ಸೀಟುಗಳು ಬಂದಿರುವುದರಲ್ಲಿ ಬೊಮ್ಮಾಯಿ ಅವರ ಕೊಡುಗೆಯೂ ಇದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಪ್ಲಾಟ್‌ಫಾರ್ಮ್‌ ಮೇಲೆ ಹರಿವ ಚರಂಡಿ ನೀರು;...

"ಚರಂಡಿ ನೀರಿನ್ಯಾಗ ದಿನ ಹೋಗಾಕ ಹತ್ತಿವಿ…" ಇದು ವಿಜಯಪುರ ಕೇಂದ್ರ ಬಸ್ ನಿಲ್ದಾಣಕ್ಕೆ ಪ್ರತಿನಿತ್ಯ ಆಗಮಿಸುವ ಸಾವಿರಾರು ಪ್ರಯಾಣಿಕರ ಅಳಲು. ಪ್ಲಾಟ್‌ಫಾರ್ಮ್‌-1ರಲ್ಲಿ ಕೊಳಚೆ ನೀರು ಹರಿಯುತ್ತಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಜವಾಬ್ದಾರಿಯಿಂದ...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವೈಯಕ್ತಿಕ...

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ ಬಾರಿ ನಿರೀಕ್ಷಿತ ಮಟ್ಟದಲ್ಲಿ ಮಿಂಚದೆ ಹಿನ್ನಡೆ ಅನುಭವಿಸಿವೆ. ಕಳೆದ ಹಾಂಗ್‌ಝೌ ಏಷ್ಯನ್ ಗೇಮ್ಸ್‌ನಲ್ಲಿ ಈ ಎರಡು ವಿಭಾಗಗಳಿಂದ ಬರೋಬ್ಬರಿ 51...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

“ಬೊಮ್ಮಾಯಿ ಅವರು ಮುಖ್ಯಮಂತ್ರಿಯಾದಾಗ ಬುದ್ಧಿವಂತರೊಬ್ಬರು ಆ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆಂದು ನಾವೂ ಖುಷಿಪಟ್ಟಿದ್ದೆವು. ಆದರೆ, ಅದನ್ನು ಉಳಿಸಿಕೊಳ್ಳಲು ಅವರಿಗೆ ಆಗಲಿಲ್ಲ” ಎಂದು ಟೀಕಾಸ್ತ್ರ ಪ್ರಯೋಗಿಸಿದರು.

ಈ ಸುದ್ದಿ ಓದಿದ್ದೀರಾ? ಜನರ ವಿಶ್ವಾಸ ಗಳಿಸದ ಬಿಜೆಪಿ ಆಪರೇಷನ್ ಕಮಲದಲ್ಲಿ ಶಾಸಕರನ್ನು ಲಪಟಾಯಿಸುತ್ತದೆ: ಸಿದ್ದರಾಮಯ್ಯ ವಾಗ್ದಾಳಿ

ಪ್ರತ್ಯೇಕ ರಾಷ್ಟ್ರ ದ ಬಗ್ಗೆ ಸಂಸದ ಡಿ.ಕೆ ಸುರೇಶ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ದಕ್ಷಿಣದ ರಾಜ್ಯಗಳಿಗೆ ಆದಾಯಕ್ಕೆ ತಕ್ಕ ಪ್ರತಿಫಲ ಸಿಗಲಿ ಎಂಬುದನ್ನು ಮನಸ್ಸಿನಲ್ಲಿ ಇಟ್ಟುಕೊಂಡು ಅವರು ಹಾಗೆ ಹೇಳಿದ್ದಾರೆ; ಅದಕ್ಕೆ ಹೆಚ್ಚಿನ ಅರ್ಥಗಳನ್ನು ಕಲ್ಪಿಸುವ ಅಗತ್ಯವಿಲ್ಲ” ಎಂದು ಸಮರ್ಥಿಸಿಕೊಂಡರು.

ನಿನ್ನೆ ಮುಖ್ಯಮಂತ್ರಿ ಅವರು ಡಿನ್ನರ್ ಪಾರ್ಟಿ ಕರೆದ ಸಂದರ್ಭದಲ್ಲಿ, ಜಿಲ್ಲೆಗಳ ಉಸ್ತುವಾರಿ ಸಚಿವರೊಂದಿಗೆ ಬರಲಿರುವ ಲೋಕಸಭಾ ಚುನಾವಣೆಗೆ ಸಜ್ಜಾಗುವುದು, ಪಕ್ಷ ಸಂಘಟನೆ ಮತ್ತಿತರ ವಿಷಯಗಳ ಕುರಿತು ಚರ್ಚೆಗಳು ನಡೆದಿವೆ ಎಂದು ಪಾಟೀಲ್ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರಾಖಂಡ | ₹135.95 ಕೋಟಿ ಸಂಸದರ ನಿಧಿಯಲ್ಲಿ ಬಳಕೆಯಾಗಿದ್ದು ಕೇವಲ ಶೇ.18 ಮಾತ್ರ

ಉತ್ತರಾಖಂಡದ ಲೋಕಸಭೆ ಮತ್ತು ರಾಜ್ಯಸಭೆಯ ಹಾಲಿ ಸಂಸದರು ತಮಗೆ ಅಭಿವೃದ್ಧಿ ಕಾಮಗಾರಿಗಳಿಗಾಗಿ...

SIR ವಿವಾದ | ಕೊಪ್ಪದಲ್ಲಿ 243 ಮತದಾರರ ಹೆಸರು ಡಿಲೀಟ್‌ಗೆ ನೀಡಿದ್ದ ಅರ್ಜಿ ಹಿಂಪಡೆದ ಬಿಜೆಪಿ ಮುಖಂಡ

ರಾಜ್ಯಾದ್ಯಂತ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಮತ್ತು...