- ಮುಸ್ಲಿಂ ಮೀಸಲಾತಿ ರದ್ದು ವಿಚಾರವಾಗಿ ಎಸ್‌ಡಿಪಿಐ ಹೇಳಿಕೆಗೆ ಸಿಎಂ ಪ್ರತಿಕ್ರಿಯೆ
- ʼಭಾರತದ ಅಲ್ಪಸಂಖ್ಯಾತರ ವಿರೋಧಿಗಳಿಂದ ನಾವು ಮೆಚ್ಚುಗೆ ಬಯಸುವುದಿಲ್ಲʼ
“ಎಸ್‌ಡಿಪಿಐ ದೇಶದ್ರೋಹಿ ಸಂಘಟನೆ. ದೇಶದ ವಿರುದ್ಧ ಕೆಲಸ ಮಾಡುವ ಅವರು, ಭಾರತದ ಅಲ್ಪಸಂಖ್ಯಾತರ ವಿರೋಧಿಗಳು. ಅವರಿಂದ ನಾವು ಮೆಚ್ಚುಗೆ ಬಯಸುವುದಿಲ್ಲ” ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
‘2ಬಿ’ ಅಡಿ ಮುಸ್ಲಿಂ ಸಮುದಾಯಕ್ಕಿದ್ದ ಮೀಸಲಾತಿ ರದ್ದುಪಡಿಸಿದ ವಿಚಾರವಾಗಿ ಎಸ್‌ಡಿಪಿಐನವರು ತಮ್ಮ ವಿರುದ್ಧ ನೀಡಿದ ಅವಹೇಳನಕಾರಿ ಹೇಳಿಕೆ ವಿಚಾರವಾಗಿ, ಬೆಳಗಾವಿಯಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಪ್ರತಿಕ್ರಿಯಿಸಿದರು.
“ಎಂದಿಗೂ ನಮ್ಮ ಚಿಂತನೆ ಮತ್ತು ವಿಚಾರಗಳಿಗೆ ವಿರುದ್ಧವಾಗಿರುವ ಎಸ್‌ಡಿಪಿಐನವರಿಗೆ ನಾವು ಸೊಪ್ಪು ಹಾಕುವುದಿಲ್ಲ. ಅವರು ನೀಡಿದ ಹೇಳಿಕೆ ಗಮನಿಸಿ, ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು” ಎಂದರು.
ಈ ಸುದ್ದಿ ಓದಿದ್ದೀರಾ? ಬಿಜೆಪಿ ಶಾಸಕ ನೆಹರೂ ಓಲೇಕಾರ್ ಅನರ್ಹತೆಗೆ ಸ್ವಪಕ್ಷದ ಕಾರ್ಯಕರ್ತನಿಂದಲೇ ದೂರು
ಏಪ್ರಿಲ್ ಮೊದಲ ವಾರದಲ್ಲಿ ಬಿಜೆಪಿ ಪಟ್ಟಿ
“ಬಿಜೆಪಿ ಪಟ್ಟಿ ಬಹುತೇಕವಾಗಿ ಸಿದ್ಧವಾಗಿದ್ದು, ಏಪ್ರಿಲ್ ಮೊದಲ ವಾರದಲ್ಲಿ ಬಿಡುಗಡೆಯಾಗಲಿದೆ. ಕಳೆದ 2-3 ದಿನಗಳಿಂದ ನಮ್ಮ ಶಾಸಕರಿಗೆ ಫೋನ್ ಮಾಡಿ ಟಿಕೆಟ್ ಕೊಡುವುದಾಗಿ ಕಾಂಗ್ರೆಸ್‌ನವರು ಹೇಳಿದ್ದಾರೆ. ಕಾಂಗ್ರೆಸ್ ಬಳಿ ಸರಿಯಾದ ಅಭ್ಯರ್ಥಿ ಇಲ್ಲದೆ ಹತಾಶರಾಗಿದ್ದಾರೆ. ಹಾಗಾಗಿ ನಮ್ಮ ಪಕ್ಷದವರಿಗೆ ಫೋನ್ ಮಾಡುತ್ತಿದ್ದಾರೆ. ಇದರಿಂದ ತಿಳಿಯುತ್ತೆ ಕಾಂಗ್ರೆಸ್ ದಿವಾಳಿಯಾಗಿದೆ” ಎಂದು ಕುಟುಕಿದರು.