ಕಾವೇರಿ ನೀರು ಹಂಚಿಕೆ | ರಾಜ್ಯದ ರೈತರ ಹಿತ ಕಾಯುವಂತೆ ಸಿದ್ದರಾಮಯ್ಯಗೆ ಬೊಮ್ಮಾಯಿ ಪತ್ರ

Date:

Advertisements
  • ‘ತಮಿಳುನಾಡು ಸುಪ್ರಿಂ ಕೋರ್ಟ್‌ಗೆ ಹೋಗಬಹುದು’
  • ‘ನಮಗೆ ನೀರು ಬಿಡಲು ಸಾಧ್ಯವಿಲ್ಲ ಎಂಬುದನ್ನು ಹೇಳಿ’

ತಮಿಳುನಾಡು ಸರ್ಕಾರ ಕಾವೇರಿ ನೀರಿನ ಹಂಚಿಕೆ ವಿಚಾರದಲ್ಲಿ ಮತ್ತೆ ಕ್ಯಾತೆ ತೆಗೆದಿದ್ದು, ಈ ಸಂದರ್ಭದಲ್ಲಿ ರಾಜ್ಯ ಸರ್ಕಾರ ರಾಜ್ಯದ ರೈತರ ಹಿತ ಕಾಯಬೇಕು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ.

“ತಮಿಳುನಾಡು ಸರ್ಕಾರ ಕಾವೇರಿ ನೀರಿನ ಹಂಚಿಕೆ ವಿಚಾರದಲ್ಲಿ ಮತ್ತೆ ಕ್ಯಾತೆ ತೆಗೆದಿದ್ದು ನಿಮ್ಮ ಗಮನಕ್ಕೆ ಬಂದಿದೆ ಎಂದು ಭಾವಿಸಿದ್ದೇನೆ ಹಾಗೂ ತಮಿಳುನಾಡು ಸುಪ್ರಿಂ ಕೋರ್ಟ್ ಗೆ ಹೋಗಬಹುದೆಂದು ಮಾಧ್ಯಮದಲ್ಲಿ ನಾವು ನೋಡಿದ್ದೇವೆ. ಈ ವಿಚಾರದಲ್ಲಿ ಕೆಳಕಂಡ ಮಹತ್ವದ ವಾಸ್ತವಿಕ ಅಂಶಗಳನ್ನು ಇಟ್ಟುಕೊಂಡು ಬರುವ ದಿನಗಳಲ್ಲಿ ಕಾನೂನಾತ್ಮಕ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

ಪತ್ರದಲ್ಲೇನಿದೆ?

Advertisements

ಜೂನ್ 1 ರಂದು ಕರ್ನಾಟಕದ ನಾಲ್ಕು ಜಲಾಶಯಗಳಲ್ಲಿ ಒಟ್ಟು 24.352 ಟಿಎಂಸಿ ನೀರಿತ್ತು. ಅದೇ ರೀತಿ ಮೆಟ್ಟೂರು ಜಲಾಶಯದಲ್ಲಿ 69.77 ಟಿಎಂಸಿ, ಭವಾನಿ ಸಾಗರ ಜಲಾಶಯದಲದಲಿ 16.653 ಟಿಎಂಸಿ ಇದ್ದು, ಬಿಳಿಗುಂಡ್ಲು ಮಾಪನ ಕೇಂದ್ರದಿಂದ 6-8-2023 ಕ್ಕೆ 14.054 ಟಿಎಂಸಿ ನೀರು ಹೋಗಿರುವುದು ಮಾಧ್ಯಮಗಳಿಂದ ಗೊತ್ತಾಗಿದೆ. ಒಟ್ಟು ತಮಿಳುನಾಡಿದ ಮೆಟ್ಟೂರು ಡ್ಯಾಮನಲ್ಲಿ ಈ ವರ್ಷ 83.831ಟಿಎಂಸಿ ನೀರು ಬಂದಿರುತ್ತದೆ.

ತಮಿಳುನಾಡು ಕುರುವೈ ಬೆಳೆಗೆ 1 ಲಕ್ಷ ಎಂಬತ್ತು ಸಾವಿರ ಎಕರೆ ಬೆಳೆ ಸಿಡಬ್ಲುಡಿಟಿ ಪ್ರಕಾರ ಬೆಳೆಯಬೇಕು ಹಾಗೂ 32 ಟಿಎಂಸಿ ನೀರು ಬಳಸಬೇಕು. ಆದರೆ, ತಮಿಳುನಾಡು 7-8-23 ಕ್ಕೆ 60.97 ಟಿಎಂಸಿ ನೀರು ಕುರುವೈ ಬೆಳೆಗೆ ಬಳಕೆ ಮಾಡಿದ್ದು ಸಿಡಬ್ಲುಡಿಟಿ ಆದೇಶದ ಎರಡು ಪಟ್ಡು ಹೆಚ್ಚಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಇದು ಹುಸಿ ದೇಶಭಕ್ತರ ಮೋದಿ ಕಾಲ; ಗಾಂಧಿ ಅವಮಾನಿಸುವ ಕಾಲ

ಕಾವೇರಿ ಜಲಾನಯನ ಪ್ರದೇಶದಲ್ಲಿ ನೀರಿನ ಕೊರತೆ ಇರುವುದನ್ನು ‌ಲೆಕ್ಕಿಸದೇ ಸಿಡಬ್ಲುಡಿಟಿ ಆದೇಶ ಉಲ್ಲಂಘನೆ ಮಾಡಿ ನಾಲ್ಕು ಪಟ್ಡು ಕುರುವೈ ಏರಿಯಾ ಬೆಳೆಗೆ ನೀರನ್ನು ಒದಗಿಸಿದೆ. ಇದನ್ನು ನಮ್ಮ ಅಧಿಕಾರಿಗಳು ಸಿಡಬ್ಲುಎಂಎದಲ್ಲಿ ಪ್ರತಿಭಟಿಸದೇ ಸುಮ್ಮನೆ ಇದ್ದದ್ದು ರಾಜ್ಯದ ಹಿತಾಸಕ್ತಿಗೆ ಧಕ್ಕೆಯಾಗಿದೆ.

ಈಗಿರುವ ನಮ್ಮ ನಾಲ್ಕು ಡ್ಯಾಮ್ ಗಳ ನಿರಿನ ಮಟ್ಟ ಬೆಂಗಳೂರು ನಗರ, ಕಾವೇರಿ ಜಲಾನಯನ ಪ್ರದೇಶದ ನಗರ ಮತ್ತು ಗ್ರಾಮಗಳ ಕುಡಿಯುವ ನೀರಿಗೆ ಕೊರತೆಯಾಗುತ್ಗದೆ. ಅದೇ ರೀತಿ ಕಾವೇರಿ ‌ಜಲಾನಯನ ಪ್ರದೇಶದ ಕರೀಫ್ ಬೆಳೆಗಳಿಗೆ ನೀರಿನ ಕೊರತೆಯಾಗುತ್ತದೆ. ಹೀಗಾಗಿ ನೀರು ಬಿಡುವುದು ಕರ್ನಾಟಕದ ಜನತೆ ಮತ್ತು ರೈತರನ್ನು ಸಂಕಷ್ಟಕ್ಕೆ ಈಡು ಮಾಡುತ್ತದೆ.

ತಮಿಳುನಾಡಿಗೆ ಸೌಥ್ ವೆಸ್ಟ್ ಮತ್ತು ನಾರ್ಥ್ ಈಸ್ಟ್ ಮಾನಸೂನ್ ಮಳೆ ಆಗುತ್ತಿರುವುದರಿಂದ ನಮಗೆ ನೀರು ಬಿಡಲು ಸಾಧ್ಯವಿಲ್ಲ ಎಂದು ಈ ವಾಸ್ತವಾಂಶದ ಮೇಲೆ ನಾವು ಗಟ್ಟಿ ನಿಲುವು ತೆಗೆದುಕೊಳ್ಳಬೇಕೆಂದು ನಾನು ತಮ್ಮಲ್ಲಿ ಆಗ್ರಹ ಮಾಡುತ್ತೇನೆ. ಹಾಗು ತಾವು ಕಾವೇರಿ ಜಲಾನಯನ ಪ್ರದೇಶದ ನೀರಿನ ಹಿತಾಸಕ್ತಿ ಕಾಪಾಡುತ್ತೀರೆಂದು ನಂಬಿರುವೆ ಎಂದು ಪತ್ರದ ಮೂಲಕ ಬೊಮ್ಮಾಯಿ ತಿಳಿಸಿದ್ದಾರೆ‌.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X