ಕಾಂಗ್ರೆಸ್ ಜೆಡಿಎಸ್ ಎರಡೂ ಕುಟುಂಬವಾದಿ ಪಕ್ಷಗಳು : ಪ್ರಧಾನಿ ನರೇಂದ್ರ ಮೋದಿ

Date:

  • ಕರ್ನಾಟಕದ ಅಭಿವೃದ್ದಿಗೆ ಬ್ಲೂ ಪ್ರಿಂಟ್ ರೆಡಿ ಮಾಡಿದ್ದೇವೆ ಎಂದ ಮೋದಿ
  • ರಾಜ್ಯದ ಅಭಿವೃದ್ಧಿ ಬಿಜೆಪಿ ಪಕ್ಷದಿಂದ ಮಾತ್ರ ಸಾಧ್ಯ ಎಂದ ಮೋದಿ

ಕರ್ನಾಟಕ ಮತದಾರರನ್ನು ಬಿಜೆಪಿಯತ್ತ ಸೆಳೆಯಲು ಪ್ರಧಾನಿ ನರೇಂದ್ರ ಮೋದಿ ಕುಟುಂಬ ರಾಜಕಾರಣದ ಬಾಣ ಪ್ರಯೋಗಿಸಿದ್ದಾರೆ.

ಚಿತ್ರದುರ್ಗದಲ್ಲಿನ ಪಕ್ಷದ ಪ್ರಚಾರ ಕಾರ್ಯದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಾಂಗ್ರೆಸ್, ಜೆಡಿಎಸ್ ನೋಡಲು ಬೇರೆ ಅಷ್ಟೆ. ಎರಡೂ ಪಕ್ಷಗಳು ಒಂದೇ. ಕಾಂಗ್ರೆಸ್ ಹಾಗೂ ಜೆಡಿಎಸ್ ಕುಟುಂಬವಾದಿ ಪಕ್ಷಗಳು ಎಂದು ಟೀಕಿಸಿದರು.

ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷ ಭ್ರಷ್ಟಾಚಾರಕ್ಕೆ ಒತ್ತು ನೀಡುತ್ತವೆ. ಅವುಗಳಿಂದ ಅಭಿವೃದ್ದಿಯಾಗಲ್ಲ, ದೇಶದ ಅಭಿವೃದ್ದಿ ಬಿಜೆಪಿಯಿಂದ ಮಾತ್ರ ಸಾಧ್ಯ ಎಂದು ಮೋದಿ ವಾಗ್ದಾಳಿ ನಡೆಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪಕ್ಷದ ಪ್ರಣಾಳಿಕೆ ವಿಚಾರವಾಗಿ ರಾಜ್ಯ ಘಟಕವನ್ನು ಅಭಿನಂದಿಸಿದ ಪ್ರಧಾನಿಗಳು ನಿನ್ನೆ ಪ್ರಣಾಳಿಕೆ ಬಿಡುಗಡೆ ಮಾಡಿದ ಪ್ರಣಾಳಿಕೆ ಮಾದರಿಯಾದದ್ದು, ಇದರಲ್ಲಿ ಮಹಿಳಾ ಸಬಲೀಕರಣ, ಯುವಕರಿಗೆ ಉದ್ಯೋಗ ಸೃಷ್ಟಿ ಮಾಡುವಂತಹ ಪ್ರಣಾಳಿಕೆಯಾಗಿದೆ. ಯುವ ಸಮುದಾಯ ಬಡವರ ಅಭಿವೃದ್ದಿಗೆ ಒತ್ತು ನೀಡಲಾಗಿದೆ ಎಂದರು.

ಮುಂದುವರೆದು ಮಾತನಾಡಿದ ಮೋದಿ, ಕರ್ನಾಟಕದ ಅಭಿವೃದ್ದಿಗೆ ಬ್ಲೂ ಪ್ರಿಂಟ್ ರೆಡಿ ಮಾಡಿದ್ದೇವೆ. ಸಮಗ್ರ ಕರ್ನಾಟಕ ಅಭಿವೃದ್ಧಿಗೆ ಯೋಜನೆ ಜಾರಿ ಮಾಡುತ್ತೇವೆ ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ?:ಚುನಾವಣೆ 2023 | ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ; ಭಜರಂಗದಳ…

ಇದೇ ವೇಳೆ ಜೆಡಿಎಸ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿಗಳು, ಎರಡೂ ಪಕ್ಷಗಳೂ ಬಾಹ್ಯದಿಂದ ಬೇರೆ ಬೇರೆಯಾಗಿ ಕಂಡರೂ, ಆಂತರಿಕವಾಗಿ ಒಂದೇ ಆಗಿವೆ. ಎರಡು ಪಕ್ಷಗಳಲ್ಲೂ ಕುಟುಂಬ ರಾಜಕಾರಣ, ಭ್ರಷ್ಟಾಚಾರ ನಡೆಯುತ್ತಿದೆ. ಇವರು ಸಮಾಜವನ್ನು ಒಡೆಯುತ್ತಿದ್ದಾರೆ. ಇವುಗಳಿಂದ ರಾಜ್ಯದ ಅಭಿವೃದ್ದಿಯಾಗುವುದಿಲ್ಲ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್​ ಅಧಿಕಾರಕ್ಕೆ ಬರುವುದಿಲ್ಲವೆಂದು ಸ್ವತಃ ಕಾಂಗ್ರೆಸ್​ ನಾಯಕರಿಗೆ ಗೊತ್ತಿದೆ. ಹೀಗಾಗಿ ಸುಳ್ಳಿನ ಗ್ಯಾರಂಟಿಗಳನ್ನು ನೀಡುತ್ತಿದೆ. ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಬಿಜೆಪಿಯ ಎಲ್ಲ ಯೋಜನೆಗಳನ್ನು ನಾಶ ಮಾಡುತ್ತವೆ.

ಕಾಂಗ್ರೆಸ್ ಜೆಡಿಎಸ್ ಅಧಿಕಾರದಲ್ಲಿದ್ದಾಗ ಚಿತ್ರದುರ್ಗದಲ್ಲಿ ಯಾವುದೇ ಕಾಮಗಾರಿ ಪೂರ್ಣಗೊಳಿಸಿರಲಿಲ್ಲ. ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಎಲ್ಲಾ ಯೋಜನೆಗಳು ಪೂರ್ಣಗೊಳ್ಳಲಿವೆ. ಕಾಂಗ್ರೆಸ್ ನವರು ಭದ್ರಾ ಮೇಲ್ದಂಡೆ ಯೋಜನೆ ಕಡೆಗಣನೆ ಮಾಡಿದರು. ನಾವು ಭದ್ರ ಮೇಲ್ದಂಡೆ ಯೋಜನೆ ಮಾಡುತ್ತೇವೆ ಎಂದು ಪ್ರಧಾನಿ ಮೋದಿ ಭರವಸೆ ನೀಡಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭಾ ಚುನಾವಣೆ | ಬಿಜೆಪಿ ಭದ್ರಕೋಟೆ ಬೆಂ. ದಕ್ಷಿಣದ ಮತದಾರರು ಹೇಳುತ್ತಿರೋದೇನು?

ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಏ.26 ರಂದು...

ಬಿಜೆಪಿಯಿಂದ ಪಿಕ್ ಪಾಕೆಟ್ ಕಾಂಗ್ರೆಸ್, ಕನ್ನಡಿಗರ ಕೈಗೆ ಚಿಪ್ಪು ಪೋಸ್ಟರ್ ಬಿಡುಗಡೆ

ಕೇಂದ್ರ ಸರ್ಕಾರ ಬರ ಪರಿಹಾರ ನೀಡಲು ಚುನಾವಣಾ ಆಯೋಗದ ಅನುಮತಿ ಕೇಳಿದ್ದು,...

ಮಹಾಪ್ರಭು ಬಟ್ಟೆಯೊಳಗಡೆಯೇ ಬೆವರುತ್ತಿದ್ದಾರೆ: ಪ್ರಕಾಶ್‌ ರಾಜ್

“ನಿಮ್ಮ ಪಕ್ಷದ ಮ್ಯಾನಿಫೆಸ್ಟೋ ಬಗ್ಗೆ ಮಾತನಾಡಪ್ಪ ಅಂದರೆ ಊಟದ ಮೆನು ತೋರಿಸುತ್ತಾರೆ....

ನೇಹಾ ಕೊಲೆ | ನಿರಂಜನ್ ಮನೆಗೆ ಸಚಿವ ಎಚ್‌ ಕೆ ಪಾಟೀಲ್ ಭೇಟಿ, ನಿರಂಜನ್‌ ಜೊತೆ ಸಿಎಂ ಮಾತು

ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ...