ಹಿಂದೂಯೇತರರ ಮನೆಗೆ ಹೋದರೆ ಹೆಣ್ಣು ಮಕ್ಕಳ ಕಾಲು ಮುರಿಯಿರಿ: ಪ್ರಜ್ಞಾ ಠಾಕೂರ್ ವಿವಾದಾತ್ಮಕ ಹೇಳಿಕೆ

Date:

ನಿಮ್ಮ ಮನೆಯ ಹೆಣ್ಣು ಮಕ್ಕಳು ಹಿಂದೂಯೇತರರ ಮನೆಗೆ ಹೋದರೆ, ನಿಮ್ಮ ಮಾತು ಕೇಳದಿದ್ದರೆ ಅವರ ಕಾಲು ಮುರಿಯಿರಿ ಎಂದು ಭೋಪಾಲ್‌ನ ಮಾಜಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ. ಈ ನಡುವೆ ಭಾರತೀಯ ಜನತಾ ಪಕ್ಷ(ಬಿಜೆಪಿ) ದ್ವೇಷ ಹರಡುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

- Advertisement -

ಈ ತಿಂಗಳ ಆರಂಭದಲ್ಲಿ ಭೋಪಾಲ್‌ನಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಠಾಕೂರ್, ಹೆಣ್ಣುಮಕ್ಕಳು ತಮ್ಮ (ಪೋಷಕರ) ಇಚ್ಛೆಗೆ ವಿರುದ್ಧವಾಗಿ ವರ್ತಿಸಿದರೆ ದೈಹಿಕವಾಗಿ ಶಿಕ್ಷಿಸುವಂತೆ ಪೋಷಕರಿಗೆ ಕರೆ ನೀಡಿದ್ದಾರೆ. ಇದರ ವಿಡಿಯೋ ಸದ್ಯ ಫೇಸ್‌ಬುಕ್‌ನಲ್ಲಿ ಅಪ್‌ಲೋಡ್ ಮಾಡಲಾಗಿದ್ದು, ಸದ್ಯ ವೈರಲ್ ಆಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಇದನ್ನು ಓದಿದ್ದೀರಾ? ಪಹಲ್ಗಾಮ್ ದಾಳಿಯನ್ನು ‘ಹಿಂದೂಗಳ ಮೇಲೆ ಮುಸ್ಲಿಮರ ದಾಳಿ’ ಎಂದು ಕರೆಯಬೇಕು: ಪ್ರಗ್ಯಾ ಠಾಕೂರ್

“ನಿಮ್ಮ ಮನಸ್ಸನ್ನು ಬಲಪಡಿಸಿಕೊಳ್ಳಿ. ನಮ್ಮ ಹೆಣ್ಣು ಮಕ್ಕಳು ನಮ್ಮ ಮಾತನ್ನು ಕೇಳದಿದ್ದರೆ, ಆಕೆ ಹಿಂದೂಯೇತರರ ಮನೆಗೆ ಹೋದರೆ, ಆಕೆಯ ಕಾಲುಗಳನ್ನು ಮುರಿಯಿರಿ. ಈ ಬಗ್ಗೆ ಯೋಚಿಸುವಾಗ ಹಿಂದೆ ಮುಂದೆ ನೋಡಬೇಡಿ” ಎಂದು ಹೇಳಿದ್ದಾರೆ.

“ಪೋಷಕರ ಮಾತು ಕೇಳದವರ, ವಿಧೇಯರಾಗಿರವರಿಗೆ ಶಿಕ್ಷೆ ನೀಡಬೇಕು. ಮಕ್ಕಳ ಒಳಿತಿಗಾಗಿ ಅವರಿಗೆ ಹೊಡೆಯುವುದರಲ್ಲಿ ತಪ್ಪೇನಿಲ್ಲ. ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ನಾವು ಕೆಲವೊಮ್ಮೆ ಅವರನ್ನು ಶಿಕ್ಷಿಸಬೇಕಾಗುತ್ತದೆ. ನಮ್ಮ ಹೆಣ್ಣು ಮಕ್ಕಳ ದೇಹ ತುಂಡು ತುಂಡಾಗಿ ಸಾಯುವಂತಾಗುವುದನ್ನು ತಡೆಯಲಾಗದು” ಎಂದಿದ್ದಾರೆ.

“ಮೌಲ್ಯಗಳನ್ನು ಅನುಸರಿಸದ, ಪೋಷಕರ ಮಾತನ್ನು ಕೇಳದ, ಹಿರಿಯರನ್ನು ಗೌರವಿಸದ ಮತ್ತು ಮನೆಯಿಂದ ಓಡಿಹೋಗಲು ಸಿದ್ಧರಾಗಿರುವ ಅಂತಹ ಹುಡುಗಿಯರ ಬಗ್ಗೆ ಹೆಚ್ಚು ಜಾಗರೂಕರಾಗಿರಿ. ಅವರನ್ನು ಮನೆಯಿಂದ ಹೊರಗೆ ಹೋಗಲು ಬಿಡಬೇಡಿ. ಅವರಿಗೆ ಹೊಡೆಯುವ ಮೂಲಕ, ಅವರಿಗೆ ಬುದ್ಧಿ ಹೇಳುವ ಮೂಲಕ, ಅವರನ್ನು ಪ್ರೀತಿಸುವ ಅಥವಾ ಬೈಯುವ ಮೂಲಕ ಅವರನ್ನು ತಡೆಯಿರಿ” ಎಂದು ಹೇಳಿದ್ದಾರೆ.

ಪ್ರಜ್ಞಾ ಠಾಕೂರ್ ಅವರ ಈ ಹೇಳಿಕೆಯು ತೀವ್ರ ವಿವಾದಕ್ಕೆ ಕಾರಣವಾಗಿದೆ. “ಮಧ್ಯಪ್ರದೇಶದಲ್ಲಿ ಏಳು ಧಾರ್ಮಿಕ ಮತಾಂತರ ಪ್ರಕರಣಗಳಲ್ಲಿ ಮಾತ್ರ ಶಿಕ್ಷೆಯಾಗಿದ್ದಾಗ ಇಷ್ಟೊಂದು ಸದ್ದು ಮತ್ತು ದ್ವೇಷ ಹರಡುತ್ತಿರುವುದು ಏಕೆ” ಎಂದು ಕಾಂಗ್ರೆಸ್ ವಕ್ತಾರ ಭೂಪೇಂದ್ರ ಗುಪ್ತಾ ಪ್ರಶ್ನಿಸಿದ್ದಾರೆ. ಈ ಹಿಂದೆಯೂ ಹಲವು ಬಾರಿ ಪ್ರಜ್ಞಾ ಅವರು ವಿವಾದಾತ್ಮಕ, ಧ್ವೇಷ ಭಾಷಣ ಮಾಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಖಿನ್ನತೆ, ಆತ್ಮಹತ್ಯೆಯ ಆಲೋಚನೆ: NTF ವರದಿ ಹೊರತಂದ ಆಘಾತಕಾರಿ ಸತ್ಯ!

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಕುರಿತು ಸುಪ್ರೀಂ ಕೋರ್ಟ್...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು...

ಪರ್ವತದಷ್ಟು ಹಗರಣ, ಸಾಸಿವೆಯಷ್ಟು ದಂಡ: ₹1.48 ಕೋಟಿಗೆ ಅದಾನಿ ಸಮೂಹದ ಅಕ್ರಮಗಳಿಗೆ ಸೆಬಿ ‘ಕ್ಲೀನ್ ಚಿಟ್’

ಅದಾನಿ ಸಮೂಹದ ಬೃಹತ್ ಆರ್ಥಿಕ ಅವ್ಯವಹಾರಗಳ ಆರೋಪಗಳೆದುರು ಭಾರತದ ಷೇರುಪೇಟೆ ನಿಯಂತ್ರಕ...

ಸಂಭಲ್ ಪ್ರಕರಣ: ಆರೋಪಿ ಮೇಲಿನ NSA ರದ್ದು, ಯೋಗಿ ಸರ್ಕಾರಕ್ಕೆ 10 ಲಕ್ಷ ರೂ. ದಂಡ ವಿಧಿಸಿದ ಸುಪ್ರೀಂ!

2024ರ ಸಂಭಲ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮುಲ್ಲಾ ಅಫ್ರೋಜ್ ವಿರುದ್ಧ...