ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಚಂದ್ರಬಾಬು ನಾಯ್ಡು ಅವರಿಗೆ ಆಂಧ್ರಪ್ರದೇಶ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ.
ನಾಯ್ಡು ಅವರ ಆರೋಗ್ಯದ ಆಧಾರದ ಮೇಲೆ ಜಾಮೀನು ಅರ್ಜಿಯನ್ನು ನ್ಯಾಯಾಲಯ ಅಂಗೀಕರಿಸಿದೆ. ನಾಲ್ಕು ವಾರಗಳ ಅವಧಿಗೆ ಅವರನ್ನು ಬಿಡುಗಡೆ ಮಾಡಲು ಅವಕಾಶ ನೀಡಿದೆ.
ಕೌಶಲ್ಯಾಭಿವೃದ್ಧಿ ಇಲಾಖೆಯಲ್ಲಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಚಂದ್ರಬಾಬು ನಾಯ್ಡು ಅವರನ್ನು ಬಂಧಿಸಲಾಗಿತ್ತು. ಕಳೆದ 52 ದಿನಗಳಿಂದ ಅವರು ಆಂಧ್ರಪ್ರದೇಶದ ರಾಜಮಂಡ್ರಿ ಜೈಲಿನಲ್ಲಿದ್ದರು.
ಈ ಹಿಂದೆ ಟಿಡಿಪಿ ಮುಖ್ಯಸ್ಥರು ಸಲ್ಲಿಸಿದ್ದ ಹಲವು ಜಾಮೀನು ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿತ್ತು. ಇದೀಗ, ಅವರ ಅನಾರೋಗ್ಯದ ಕಾರಣದಿಂದ ವೈದ್ಯಕೀಯ ಚಿಕಿತ್ಸೆ ಪಡೆಯುವ ಉದ್ದೇಶದಿಂದ ಮಧ್ಯಂತರ ಜಾಮೀನು ನೀಡಿದೆ.