ಮೋದಿ ಉಪನಾಮ ಪ್ರಕರಣ : ರಾಹುಲ್ ಗಾಂಧಿ ಜೈಲು ಶಿಕ್ಷೆಗೆ ತಡೆ ಅರ್ಜಿ ಮುಂದೂಡಿದ ಸುಪ್ರೀಂ

Date:

ಮೋದಿ ಉಪನಾಮ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್‌ ಗಾಂಧಿಯವರಿಗೆ ಗುಜರಾತ್​ ಹೈಕೋರ್ಟ್ ನೀಡಿದ್ದ ಜೈಲು ಶಿಕ್ಷೆಗೆ ಸಲ್ಲಿಸಲಾಗಿದ್ದ ತಡೆ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮುಂದೂಡಿದೆ.

- Advertisement -

ಆಗಸ್ಟ್ 4ಕ್ಕೆ ಅರ್ಜಿಯ ವಿಚಾರಣೆ ಮುಂದೂಡಿರುವ ಸುಪ್ರೀಂ ಕೋರ್ಟ್, ಇದೇ ವೇಳೆ ಅರ್ಜಿದಾರ ಪೂರ್ಣೇಶ್ ಮೋದಿ ಹಾಗೂ ಗುಜರಾತ್ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ. ಮುಂದಿನ 10 ದಿನಗಳಲ್ಲಿ ನೋಟಿಸ್‌ಗೆ ಉತ್ತರಿಸುವಂತೆಯೂ ಸೂಚಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ ಮತ್ತು ಪ್ರಶಾಂತ್ ಕುಮಾರ್ ಮಿಶ್ರಾ ಅವರಿದ್ದ ಪೀಠವು ವಿಚಾರಣೆ ನಡೆಸಿತು. ರಾಹುಲ್ ಗಾಂಧಿ ಪರವಾಗಿ ಹಿರಿಯ ವಕೀಲ ಡಾ.ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದರು.

ಏನಿದು ಪ್ರಕರಣ?

ಪ್ರಧಾನಿ ನರೇಂದ್ರ ಮೋದಿ ಉಪನಾಮಕ್ಕೆ ಸಂಬಂಧಿಸಿದಂತೆ, ತನ್ನ ಮೇಲೆ ಮಾನನಷ್ಟ ಮೊಕದ್ದಮೆಯಡಿಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆ ನೀಡಿದ ಸೂರತ್​ ನ್ಯಾಯಾಲಯದ ಆದೇಶವನ್ನು ತಡೆಹಿಡಿಯಲು ನಿರಾಕರಿಸಿದ್ದ ಗುಜರಾತ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಅದರಂತೆ ಸುಪ್ರೀಂಕೋರ್ಟ್ ಇಂದು ವಿಚಾರಣೆ ನಡೆಸಿತು.

ಮೋದಿ ಹೆಸರು ಇಟ್ಟುಕೊಂಡವರು ಕಳ್ಳರು ಎಂದಿದ್ದ ರಾಹುಲ್ ಗಾಂಧಿ ಅವರಿಗೆ ಸೂರತ್ ಕೋರ್ಟ್ 2 ವರ್ಷ ಜೈಲುಶಿಕ್ಷೆ ವಿಧಿಸಿತ್ತು. ಇದನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಅವರು ಗುಜರಾತ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಎರಡು ವರ್ಷಗಳ ಜೈಲು ಶಿಕ್ಷೆಯನ್ನು ತಡೆಹಿಡಿಯಲು ಸಾಧ್ಯವಿಲ್ಲ ಎಂದು ಕಳೆದ ಜುಲೈ 7 ರಂದು ಗುಜರಾತ್​ ಹೈಕೋರ್ಟ್ ತೀರ್ಪು ನೀಡಿತ್ತು. ಈ ನಡುವೆಯೇ ಲೋಕಸಭಾ ಸ್ಪೀಕರ್ ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದ ಸಂಸದರೂ ಆದ ರಾಹುಲ್ ಗಾಂಧಿಯ ಸಂಸದ ಸ್ಥಾನವನ್ನು ಅನರ್ಹಗೊಳಿಸಿತ್ತು.

ಈ ಹಿನ್ನೆಲೆಯಲ್ಲಿ ರಾಹುಲ್​ ಗಾಂಧಿ ಅವರು ಗುಜರಾತ್ ಹೈಕೋರ್ಟ್ ಆದೇಶ ಪ್ರಶ್ನಿಸಿ ಜು.15ರಂದು ಸುಪ್ರೀಂ ಕೋರ್ಟಿನಲ್ಲಿ ಮೇಲ್ಮನವಿ ಸಲ್ಲಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಪ್ರತಿಭಟನೆ ತಡೆಯಲು ಮೆಟ್ರೋ, ರೈಲು ಬಂದ್: ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಸಿಪಿಐಎಂ ನಾಯಕ ಎಂ ಎ ಬೇಬಿ

ಅಕ್ಟೋಬರ್ 10ರಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಮತ್ತು ವಿವಿಧ ಪ್ರತಿಪಕ್ಷಗಳು...

ಪಶ್ಚಿಮ ಬಂಗಾಳ ಉಪಚುನಾವಣೆ ವೇಳೆ ಅಕ್ರಮದ ಆರೋಪ; ಮರುಮತದಾನಕ್ಕೆ ವಿಪಕ್ಷಗಳ ಆಗ್ರಹ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ...

ದೆಹಲಿ ಮೆಟ್ರೋಗೆ ಪೊಲೀಸ್ ಇಲಾಖೆ ಪತ್ರ: 57 ಸ್ಟೇಷನ್‌ಗಳ ಪ್ರವೇಶ-ನಿರ್ಗಮನ ದ್ವಾರ ಮುಚ್ಚಲು ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅಕ್ಟೋಬರ್ 10ರಂದು ನಡೆಯಲಿರುವ ಬೃಹತ್ ಪ್ರತಿಭಟನೆಯಲ್ಲಿ ಹೆಚ್ಚಿನ...

ಪುದುಚೇರಿ | ತಟ್ಟಂಚಾವಡಿ ಉಪಚುನಾವಣೆ: AINRC ಅಭ್ಯರ್ಥಿ ಅಶೋಕ್ ಆನಂದ್‌ಗೆ ಗೆಲುವು

ಪುದುಚೇರಿಯ ತಟ್ಟಂಚಾವಡಿ ವಿಧಾನಸಭೆ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಆಲ್ ಇಂಡಿಯಾ ಎನ್‌ಆರ್‌...