ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

Date:

ಮಾಜಿ ಪ್ರಧಾನಿ, ಜೆಡಿಎಸ್​ ವರಿಷ್ಠ ಎಚ್ ​ಡಿ ದೇವೇಗೌಡ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಎಚ್‌ಡಿ ದೇವೇಗೌಡ ಅವರಿಗೆ ಈಗಾಗಲೇ 91 ವರ್ಷ ಪೂರ್ಣಗೊಂಡಿದ್ದು, ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸದ್ಯ ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ಬಂದಿರುವ ಮಾಹಿತಿಯ ಪ್ರಕಾರ ದೇವೇಗೌಡರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಕಳೆದ ಮೂರು ದಿನಗಳಿಂದ ಜ್ವರ ಸೇರಿದಂತೆ ಮೂತ್ರದ ಸಮಸ್ಯೆಯಿಂದ ಬಳಲುತ್ತಿದ್ದರು. ಸದ್ಯ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಗ್ಯ ಸ್ಥಿರವಾಗಿದೆ” ಎಂದು ದೇವೇಗೌಡರ ಅಳಿಯ ಹಾಗೂ ಜಯದೇವ ಆಸ್ಪತ್ರೆಯ ಮಾಜಿ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ತಿಳಿಸಿರುವುದಾಗಿ ‘ಡೆಕ್ಕನ್ ಹೆರಾಲ್ಡ್’ ವರದಿ ಮಾಡಿದೆ.

ಇದನ್ನು ಓದಿದ್ದೀರಾ? ಬಜೆಟ್‌ ಅಧಿವೇಶನ | ನಿಮ್ಮ ಗೂಂಡಾಗಿರಿಗೆಲ್ಲ ಹೆದರಲ್ಲ; ಬಿಜೆಪಿ ಸದಸ್ಯರಿಗೆ ಸಿದ್ದರಾಮಯ್ಯ ತಿರುಗೇಟು

ಎಚ್‌ ಡಿ ದೇವೇಗೌಡ ಅವರಿಗೆ 91 ವರ್ಷ ಪೂರ್ಣಗೊಂಡಿದ್ದರೂ, ಕೂಡ ಅವರು ಸಕ್ರಿಯ ರಾಜಕಾರಣದಲ್ಲಿ ಗುರುತಿಸಿಕೊಂಡಿದ್ದಾರೆ. ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಪ್ರಚಾರ, ಸಭೆಗಳನ್ನು ನಡೆಸುತ್ತಿದ್ದಾರೆ.

ಇತ್ತೀಚೆಗೆ ಮುಕ್ತಾಯ ಕಂಡ ರಾಜ್ಯಸಭಾ ಅಧಿವೇಶನದಲ್ಲಿ ಕೂಡ ಪಾಲ್ಗೊಂಡಿದ್ದರು. ಅಲ್ಲದೇ, ಜ.22ರಂದು ಅಯೋಧ್ಯೆಯ ರಾಮಮಂದಿರದ ಉದ್ಘಾಟನಾ ಸಮಾರಂಭದಲ್ಲೂ ಕುಟುಂಬ ಸಹಿತ ಭಾಗವಹಿಸಿದ್ದರು.

ವಾಡಿಕೆಯ ಆರೋಗ್ಯ ತಪಾಸಣೆಯಷ್ಟೇ: ದೇವೇಗೌಡ ಟ್ವೀಟ್

ತಮ್ಮ ಆರೋಗ್ಯದ ಬಗ್ಗೆ ಸುದ್ದಿಯಾಗುತ್ತಿದ್ದಂತೆಯೇ ಟ್ವೀಟ್ ಮಾಡಿರುವ ದೇವೇಗೌಡರು, “ಕೆಲವೊಂದು ಸುದ್ದಿವಾಹಿನಿಗಳಲ್ಲಿ ನನ್ನ ಆರೋಗ್ಯದ ಬಗ್ಗೆ ಉತ್ಪ್ರೇಕ್ಷಿತ ವರದಿಗಳು ಬಂದಿರುವುದನ್ನು ಗಮನಿಸಿದೆ. ಇದು ಸಾಮಾನ್ಯ ವಾಡಿಕೆಯ ಆರೋಗ್ಯ ತಪಾಸಣೆಯಷ್ಟೇ. ಶೀಘ್ರವೇ ಮನೆಗೆ ಹಿಂದಿರುಗಲಿದ್ದೇನೆ. ಆತಂಕಪಡುವ ಅಗತ್ಯವಿಲ್ಲ” ಎಂದು ತಿಳಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪೆನ್‌ಡ್ರೈವ್‌ ಪ್ರಕರಣ; ಅಪ್ಪ- ಮಗ ಇಬ್ಬರಿಂದಲೂ ಲೈಂಗಿಕ ಕಿರುಕುಳ- ಸಂತ್ರಸ್ತೆ ದೂರು

ಹಾಸನದ ಪ್ರಭಾವಿ ರಾಜಕೀಯ ಕುಟುಂಬಕ್ಕೆ ಸಂಬಂಧಿಸಿದ ಲೈಂಗಿಕ ಹಗರಣ ಹಲವು ತಿರುವುಗಳನ್ನು...

ಹಾಸನ ಪೆನ್‌ಡ್ರೈವ್ ಪ್ರಕರಣ | ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ನಿರ್ಧಾರ

ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ...

ಮೋದಿ ಸುಳ್ಳುಗಳು: ಭಾಗ-1 | ಕಳೆದ 10 ವರ್ಷಗಳಲ್ಲಿ ವಿಶ್ವಾದ್ಯಂತ ಭಾರತದ ವಿಶ್ವಾಸಾರ್ಹತೆ ಹೆಚ್ಚಾಗಿದೆಯೇ? ವಾಸ್ತವ ಏನು?

ಮುಸಲ್ಮಾನರಿಗೆ ಕಳೆದ 30 ವರ್ಷದಿಂದ ಮೀಸಲಾತಿ ಜಾರಿಯಲ್ಲಿದೆ. ನಂತರ ಬಸವರಾಜ ಬೊಮ್ಮಾಯಿ...