ಲಂಚ ಪ್ರಕರಣ | ಮಾಡಾಳ್‌ ವಿರೂಪಾಕ್ಷಪ್ಪಗೆ ಜಾಮೀನು ಮಂಜೂರು

Date:

ಲಂಚ ಪ್ರಕರಣದಲ್ಲಿ ಬಂಧಿತರಾಗಿರುವ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಏಪ್ರಿಲ್ 10ರಂದು ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಾಧೀಶರಾದ ಬಿ ಜಯಂತಕುಮಾರ್ ಅವರು ಜಾಮೀನು ಮಂಜೂರು ಮಾಡಿದ್ದಾರೆ.

ಐದು ಲಕ್ಷ ರೂಪಾಯಿ ವೈಯಕ್ತಿಕ ಬಾಂಡ್‌, ಇಬ್ಬರ ಭದ್ರತೆ, ಮೂರು ವಾರಕ್ಕೊಮ್ಮೆ ಲೋಕಾಯುಕ್ತ ಪೊಲೀಸರ ಮುಂದೆ ಹಾಜರಾಗಬೇಕು ಎಂಬ ಷರತ್ತಿನ ಮೇಲೆ ಜಾಮೀನು ನೀಡಿದೆ. ತನಿಖಾಧಿಕಾರಿ ವಶಕ್ಕೆ ಪಾಸ್‌ಪೋರ್ಟ್‌ ನೀಡುವಂತೆ ನ್ಯಾಯಾಲಯ ಆದೇಶದಲ್ಲಿ ಸೂಚಿಸಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮಾರ್ಚ್​ 2ರಂದು ಮಾಡಾಳ್​ ವಿರೂಪಾಕ್ಷಪ್ಪ ಕಚೇರಿ, ಮನೆ, ಮಗ ಪ್ರಶಾಂತ್​ ಕಚೇರಿ ಮೇಲೆ ಏಕಕಾಲಕ್ಕೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದರು. ಅವರ ಪುತ್ರ ಪ್ರಶಾಂತ್​ ಕಚೇರಿಯಲ್ಲಿ 2.02 ಕೋಟಿ ನಗದು, ಶಾಸಕರ ನಿವಾಸದಲ್ಲಿ 6 ಕೋಟಿಗೂ ಅಧಿಕ ನಗದು ಪತ್ತೆಯಾಗಿತ್ತು.

ನಿರೀಕ್ಷಣಾ ಜಾಮೀನು ವಜಾ ಆದ ಬಳಿಕ ನಾಪತ್ತೆಯಾಗಿದ್ದ ಮಾಡಾಳ್‌ ವಿರೂಪಾಕ್ಷಪ್ಪ ಅವರನ್ನು ತುಮಕೂರಿನ ಹೊರ ವಲಯದ ಕ್ಯಾತಸಂದ್ರ ಟೋಲ್‌ ಬಳಿ ಲೋಕಾಯಕ್ತ ಪೊಲೀಸರು ಪೊಲೀಸರು ಮಾರ್ಚ್ 27ರಂದು ಬಂಧಿಸಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿಯಿಂದ ಪಿಕ್ ಪಾಕೆಟ್ ಕಾಂಗ್ರೆಸ್, ಕನ್ನಡಿಗರ ಕೈಗೆ ಚಿಪ್ಪು ಪೋಸ್ಟರ್ ಬಿಡುಗಡೆ

ಕೇಂದ್ರ ಸರ್ಕಾರ ಬರ ಪರಿಹಾರ ನೀಡಲು ಚುನಾವಣಾ ಆಯೋಗದ ಅನುಮತಿ ಕೇಳಿದ್ದು,...

ಮಹಾಪ್ರಭು ಬಟ್ಟೆಯೊಳಗಡೆಯೇ ಬೆವರುತ್ತಿದ್ದಾರೆ: ಪ್ರಕಾಶ್‌ ರಾಜ್

“ನಿಮ್ಮ ಪಕ್ಷದ ಮ್ಯಾನಿಫೆಸ್ಟೋ ಬಗ್ಗೆ ಮಾತನಾಡಪ್ಪ ಅಂದರೆ ಊಟದ ಮೆನು ತೋರಿಸುತ್ತಾರೆ....

ನೇಹಾ ಕೊಲೆ | ನಿರಂಜನ್ ಮನೆಗೆ ಸಚಿವ ಎಚ್‌ ಕೆ ಪಾಟೀಲ್ ಭೇಟಿ, ನಿರಂಜನ್‌ ಜೊತೆ ಸಿಎಂ ಮಾತು

ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ...

ಚುನಾವಣಾ ಅಖಾಡದಲ್ಲಿ ಒಂದಿಷ್ಟು ಮಾತು – ದೇವನೂರ ಮಹಾದೇವ

ನಾನೀಗ ಹಿಂದಿನದು ಮಾತಾಡಲೋ ಅಥವಾ ಈಗಲದು ಮಾತಾಡಲೋ ಗೊಂದಲದಲ್ಲಿದ್ದೇನೆ. ಹಿಂದಿನದನ್ನು ಹೇಳದಿದ್ದರೆ...