‘ನನ್ನನ್ನು ಭೇಟಿ ಮಾಡಬೇಕೆಂದರೆ ಆಧಾರ್‌ ಕಾರ್ಡ್‌ ತನ್ನಿ’; ಆಕ್ರೋಶಕ್ಕೆ ಗುರಿಯಾದ ಬಿಜೆಪಿ ಸಂಸದೆ ಕಂಗನಾ ಹೇಳಿಕೆ

Date:

ಬಾಲಿವುಟ್ ನಟಿ, ಬಿಜೆಪಿ ಸಂಸದೆ ಕಂಗನಾ ರಣಾವತ್ ಅವರು, ‘ತಾವು ಪ್ರತಿನಿಧಿಸುವ ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದ ಜನರು ತಮ್ಮನ್ನು ಭೇಟಿ ಮಾಡಲು ಬಯಸಿದರೆ, ತಮ್ಮ ಆಧಾರ್ ಕಾರ್ಡ್‌ಗಳನ್ನು ತರಬೇಕು’ ಎಂದು ಹೇಳಿದ್ದಾರೆ. ಅವರ ಈ ಹೇಳಿಕೆ ವ್ಯಾಪಕ ಟೀಕೆಗೆ ಗುರಿಯಾಗಿದೆ. ಕಂಗನಾ ಮತ್ತು ಬಿಜೆಪಿಯನ್ನು ಕಾಂಗ್ರೆಸ್‌ ತರಾಟೆಗೆ ತೆಗೆದುಕೊಂಡಿದೆ.

- Advertisement -

ಸುದ್ದಿಗಾರರೊಂದಿಗೆ ಮಾತನಾಡಿದ ಕಂಗನಾ, “ಕ್ಷೇತ್ರದ ಜನರು ತಮ್ಮನ್ನು ಭೇಟಿ ಮಾಡಲು ಆಧಾರ್ ಕಾರ್ಡ್‌ಅನ್ನು ಜೊತೆಗೆ ತರಬೇಕು. ಮಾತ್ರವಲ್ಲದೆ, ತಮ್ಮ ಸಮಸ್ಯೆ ಆಥವಾ ಭೇಟಿಯ ಉದ್ದೇಶವನ್ನು ಪತ್ರದ ಮೂಲಕ ತಿಳಿಸಬೇಕು” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

“ಹಿಮಾಚಲ ಪ್ರದೇಶವು ಹೆಚ್ಚು ಪ್ರವಾಸಿಗರು ಬರುವ ಸ್ಥಳವಾಗಿದೆ. ಆದ್ದರಿಂದ, ಮಂಡಿ ಪ್ರದೇಶದಿಂದ ಆಧಾರ್ ಕಾರ್ಡ್ ಇಟ್ಟುಕೊಳ್ಳುವುದು ಅವಶ್ಯಕವಾಗಿದೆ. ಕ್ಷೇತ್ರಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆ, ಕಲಸಗಳ ಬಗ್ಗೆ ಪತ್ರದಲ್ಲಿ ಬರೆದು ಕೊಡಬೇಕು” ಎಂದು ಹೇಳಿದ್ದಾರೆ.

“ಹಿಮಾಚಲದ ಉತ್ತರ ಭಾಗದ ಜನರು ತನ್ನನ್ನು ಭೇಟಿಯಾಗಲು ಬಯಸಿದರೆ, ಅವರು ಮನಾಲಿಯಲ್ಲಿರುವ ತಮ್ಮ ಮನೆಗೆ ಭೇಟಿ ನೀಡಬಹುದು. ಮಂಡಿಯಲ್ಲಿರುವ ಜನರು ನಗರದ ತಮ್ಮ ಕಚೇರಿಗೆ ಬರಬಹುದು” ಎಂದು ಅವರು ಹೇಳಿದ್ದಾರೆ.

ಕಂಗನಾ ವಿರುದ್ಧ ಕಾಂಗ್ರೆಸ್ ವಾಗ್ದಾಳಿ
ಮಂಡಿ ಲೋಕಸಭಾ ಕ್ಷೇತ್ರದಲ್ಲಿ ಕಂಗನಾ ರಣಾವತ್ ವಿರುದ್ಧ ಸ್ಪರ್ಧಿಸಿ, ಸೋತಿದ್ದ ಕಾಂಗ್ರೆಸ್ ನಾಯಕ, ಹಿಮಾಚಲದ ಹಾಲಿ ಲೋಕೋಪಯೋಗಿ ಸಚಿವ ವಿಕ್ರಮಾದಿತ್ಯ ಸಿಂಗ್ ಅವರು, ಕಂಗನಾ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ‘ಕ್ಷೇತ್ರದ ಜನರು ಅವರನ್ನು ಭೇಟಿ ಮಾಡಲು ಬಯಸಿದರೆ, ಆಧಾರ್ ಕಾರ್ಡ್ ತರುವ ಅಗತ್ಯವಿಲ್ಲ’ ಎಂದು ಹೇಳಿದ್ದಾರೆ.

“ನಾವು ಜನಪ್ರತಿನಿಧಿಗಳು. ಹಾಗಾಗಿ ರಾಜ್ಯದ ಪ್ರತಿಯೊಂದು ವರ್ಗದ ಜನರನ್ನು ಭೇಟಿ ಮಾಡುವುದು ನಮ್ಮ ಜವಾಬ್ದಾರಿಯಾಗಿದೆ. ಅದು ಸಣ್ಣ ಕೆಲಸವಾಗಲಿ, ದೊಡ್ಡ ಕೆಲಸವಾಗಲಿ, ನೀತಿ ವಿಷಯವಾಗಲಿ ಅಥವಾ ವೈಯಕ್ತಿಕ ಕೆಲಸವಾಗಲಿ – ಭೇಟಿಗೆ ಯಾವುದೇ ಗುರುತಿನ ಚೀಟಿಯ ಅಗತ್ಯವಿಲ್ಲ. ಒಬ್ಬ ವ್ಯಕ್ತಿ ಸಾರ್ವಜನಿಕ ಪ್ರತಿನಿಧಿಯ ಬಳಿಗೆ ಬರುತ್ತಿದ್ದಾರೆ ಎಂದರೆ, ಅವರು ಯಾವುದೋ ಕೆಲಸಕ್ಕಾಗಿ ಬರುತ್ತಿದ್ದಾರೆ ಎಂದೇ ಅರ್ಥ. ಭೇಟಿಗೆ ಬರುವವರು ಪತ್ರ ಬರೆದುಕೊಂಡು ಬರಬೇಕೆಂದು ಕೇಳುವುದು ಸರಿಯಲ್ಲ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...