ನಿಮಗೆ ತಾಕತ್ತಿದ್ದರೆ ಮತ್ತೆ ಹಿಜಾಬ್ ತನ್ನಿ: ಸಿಎಂಗೆ ಸವಾಲೆಸೆದ ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್

Date:

“ಹಿಜಾಬ್ ನಿಷೇಧ ವಾಪಸ್ ಪಡೆಯುತ್ತೇವೆ” ಎಂಬ ಸಿಎಂ ಸಿದ್ದರಾಮಯ್ಯನವರ ಹೇಳಿಕೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್, “ನಿಮಗೆ ತಾಕತ್ತಿದ್ದರೆ ಮತ್ತೆ ಹಿಜಾಬ್ ತನ್ನಿ ನೋಡುವ” ಎಂದು ಸವಾಲೆಸೆದಿದ್ದಾರೆ.

ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಇಂದು ಆಯೋಜಿಸಲಾಗಿದ್ದ ಸಂಕೀರ್ತನೆ ಯಾತ್ರೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಹಿಜಾಬ್ ಮತ್ತೆ ವಾಪಸ್ ತರುತ್ತೇವೆ ಅಂತಿದ್ದಾರೆ. ಶಾಲಾ ಮಕ್ಕಳಲ್ಲಿ ಮತ್ತೆ ಪ್ರತ್ಯೇಕತೆತ ವಿಷಬೀಜ ಬಿತ್ತುತ್ತಿದ್ದಾರೆ. ನೀವೇ ಸಮವಸ್ತ್ರ ಮಾಡಿದ್ದೀರಾ. ಮತ್ತೆ ನೀವೇ ಪ್ರತ್ಯೇಕ ಮಾಡುತ್ತಿದ್ದೀರಾ. ನಿಮಗೆ ತಾಕತ್ತಿದ್ದರೆ ಮತ್ತೆ ಹಿಜಾಬ್ ತನ್ನಿ ನೋಡುವ” ಎಂದು ಹೇಳಿದ್ದಾರೆ.

ಸಿಎಂ ಹಿಜಾಬ್ ಹೇಳಿಕೆಯ ಬಳಿಕ, ‘ಮತ್ತೆ ಕಾಲೇಜಿಗೆ ಹೋಗುತ್ತೇನೆ’ ಎಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದ್ದ ಮಂಡ್ಯದ ವಿದ್ಯಾರ್ಥಿನಿ ಮುಸ್ಕಾನ್ ವಿರುದ್ಧ ಆರೋಪ ಮಾಡಿರುವ ಕಲ್ಲಡ್ಕ ಪ್ರಭಾಕರ ಭಟ್, ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಮುಸ್ಕಾನ್, ನೀನು ಮನೆಯಲ್ಲಿ ಅಥವಾ ಮಸೀದಿಯಲ್ಲಿ ಅಲ್ಲಾಹು ಅಕ್ಬರ್ ಎಂದು ಹೇಳಬೇಕು.ಈ ದೇಶದಲ್ಲಿ ಹೇಳಬೇಕಿರೋದು ರಾಮ ನಾಮ. ಅಲ್ಲಾಹು ಅಕ್ಬರ್ ಎನ್ನಬೇಕಾದರೆ ನೀವು ಮುಸಲ್ಮಾನ ದೇಶಕ್ಕೆ ಹೋಗಿ. ಮುಸ್ಕಾನ್‌ಗೆ ಶಹಭಾಷ್‌ಗಿರಿ ಕೊಟ್ಟಿದ್ದು ಅಲ್ ಖೈದಾ ಭಯೋತ್ಪಾದಕ ಸಂಘಟನೆಯ ಸದಸ್ಯ. ಮುಸ್ಕಾನ್‌ಗೂ ಕೂಡ ಅಲ್ ಖೈದಾ ಜೊತೆ ಸಂಪರ್ಕ ಇದೆ. ತಾಕತ್ತಿದ್ದರೆ ಮುಸ್ಕಾನ್ ಮತ್ತೆ ಶಾಲೆಗೆ ಹೋಗುವ ಕೆಲಸ ಮಾಡಲಿ. ಇದನ್ನು ನೀವು ಹಿಂದೂಗಳ ದೌರ್ಬಲ್ಯ ಅಂದುಕೊಳ್ಳಬೇಡಿ. ನಾವು ಒಟ್ಟಾಗಿರಲು ಬಯಸುತ್ತೇವೆ” ಎನ್ನುವ ಮೂಲಕ ಮಂಡ್ಯದ ಮುಸ್ಕಾನ್​ಗೆ ಅಲ್​ಖೈದಾ ಭಯೋತ್ಪಾದನಾ ಸಂಘಟನೆಯ ಸಂಪರ್ಕವಿದೆ ಎಂದು ಆರೋಪ ಮಾಡಿದ್ದಾರೆ.

“ನೂರಾರು ಜನ ನಮ್ಮ ದೇಶದ ಮೇಲೆ ಆಕ್ರಮಣ ಮಾಡಿದ್ದರು. ಸಾವಿರಾರು ವರ್ಷಗಳ ಹಿಂದೆ ನಮ್ಮ ನಮ್ಮಲ್ಲೇ ಗೊಂದಲ ಮೂಡಿಸಿದ್ದರಿಂದ ಹಿಂದೂಗಳಲ್ಲಿ ಒಡಕುಂಟಾಯಿತು. ಮೊಘಲರು ಒಳ ನುಸುಳಿದ್ದರು. ಈ ದೇಶಕ್ಕಾಗಿ ಕಿತ್ತೂರು ಚೆನ್ನಮ್ಮ, ಒನಕೆ ಓಬವ್ವನವರಂತಹ ಮಾತೆಯರು ಹೋರಾಡಿದ್ದಾರೆ. ಬ್ರಿಟೀಷರ ವಿರುದ್ಧ ನಾವು ಮಾನಸಿಕವಾಗಿ ಸೋತೆವು. ಈ ದೇಶವನ್ನು ಮುಸ್ಲಿಂ ದೇಶ ಮಾಡಬೇಕು ಎಂದು ಮುಸ್ಲಿಮರು ಬಂದಿದ್ದರು. ಘಜನಿ ಮಹಮ್ಮದ್ ಕಾಲದಿಂದಲೂ ಈ ದೇಶವನ್ನ ಮುಸ್ಲಿಂ ದೇಶ ಮಾಡಬೇಕು ಎಂದು ಕೊಲೆ ಅತ್ಯಾಚಾರ, ದರೋಡೆ ಮಾಡಲಾಯಿತು. ಕಾಶ್ಮೀರವನ್ನು ಪಾಕಿಸ್ತಾನ ವಶಪಡಿಸಿಕೊಂಡಾಗ ನೆಹರೂ ಮತ್ತು ಕಾಂಗ್ರೆಸ್‌ನಿಂದ ನಮ್ಮ ದೇಶದ ಜನರಿಗೆ ಮೋಸ ಮಾಡಲಾಯಿತು. ಈ ದೇಶದ ಮೊದಲ ಒಂದು ಭಾಗದ ಲಾಭ ಮುಸ್ಲಿಮರಿಗೆ ಎಂದು ಮನಮೋಹನ್ ಸಿಂಗ್ ಘೋಷಣೆ ಮಾಡಿದ್ದರು. ಈ ದೇಶ ಯಾರಪ್ಪನ ಮನೆ ಆಸ್ತಿ” ಎಂದು ಕಲ್ಲಡ್ಕ ಪ್ರಭಾಕರ ಭಟ್ ಪ್ರಶ್ನಿಸುವ ಮೂಲಕ, ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಬಿಎಂಪಿ | ನೀರಿನ ಟ್ಯಾಂಕರ್ ಸ್ವಯಂ ನೋಂದಣಿಗೆ ಮಾರ್ಚ್‌ 7 ಕೊನೆ ದಿನ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ನೀರು ಪೂರೈಕೆ ಮಾಡುವ...

ರಾಮೇಶ್ವರಂ ಕೆಫೆ | ಎನ್‌ಐಎ, ಐಬಿಗೆ ಸ್ಪೋಟದ ಬಗ್ಗೆ ಮಾಹಿತಿ: ಅಲೋಕ್​ ಮೋಹನ್

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಪೋಟದಲ್ಲಿ ಒಟ್ಟು 9 ಮಂದಿ ಗಂಭೀರವಾಗಿ...

ಬೆಂಗಳೂರು | ರಾಮೇಶ್ವರಂ ಕೆಫೆ ಸ್ಪೋಟ; ಎಲ್ಲ ಆಯಾಮಗಳಲ್ಲಿ ತನಿಖೆಗೆ ಮುಂದಾದ ಪೊಲೀಸರು

ಶುಕ್ರವಾರ ನಡೆದ ಘಟನೆ ರಾಜ್ಯ ರಾಜಧಾನಿ ಬೆಂಗಳೂರು ಜನತೆಯನ್ನು ಬೆಚ್ಚಿ ಬೀಳಿಸಿದೆ. ವೈಟ್...

ದಿ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ | ಆರೋಪಿಗಳನ್ನು ಪತ್ತೆ ಹಚ್ಚಿ ಕಠಿಣ ಶಿಕ್ಷೆಗೆ ಒಳಪಡಿಸುತ್ತೇವೆ: ಸಿದ್ದರಾಮಯ್ಯ

ಬೆಂಗಳೂರಿನ ದಿ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿರುವ ಸ್ಫೋಟದ ಬಗ್ಗೆ ತನಿಖೆ ನಡೆಯುತ್ತಿದೆ....