ಬಿಆರ್‌ಎಸ್ ‘ಫೋನ್ ಟ್ಯಾಪಿಂಗ್’ ಮೂಲಕ ಕೋಟಿಗಟ್ಟಲೆ ಸುಲಿಗೆ ಮಾಡಿದೆ: ತೆಲಂಗಾಣ ಸಿಎಂ ಆರೋಪ

Date:

ಈ ಹಿಂದಿನ ಬಿಆರ್‌ಎಸ್ ಆಡಳಿತವು ಉದ್ಯಮಿಗಳನ್ನು ಬ್ಲ್ಯಾಕ್‌ಮೇಲ್ ಮಾಡಿದೆ. ‘ಫೋನ್ ಟ್ಯಾಪಿಂಗ್’ ಮೂಲಕ ನೂರಾರು ಕೋಟಿ ರೂಪಾಯಿಗಳನ್ನು ಸುಲಿಗೆ ಮಾಡಿದೆ ಎಂದು ತೆಲಂಗಾಣ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಭಾನುವಾರ ಆರೋಪಿಸಿದ್ದಾರೆ.

- Advertisement -

ಫೆಬ್ರವರಿ 11ರ ಪುರಸಭೆ ಚುನಾವಣೆಗೆ ಮುನ್ನ ಜಯಶಂಕರ್ ಭೂಪಾಲಪಲ್ಲಿ ಜಿಲ್ಲೆಯ ಚೆಲ್ಪುರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಸಿಎಂ, ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಅನ್ನು ‘ಬ್ಲ್ಯಾಕ್‌ಮೇಲ್ ರಾಜಕೀಯ ಸಮಿತಿ’ ಎಂದು ಕರೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಡತನದ ಮಾಪನ ಮತ್ತು ವಾಸ್ತವ ಚಿತ್ರಣ: ಆಳ ಅಗಲ

ವಿಶ್ವಬ್ಯಾಂಕ್‌ನ ಬಡತನ ಮತ್ತು ಸಮಾನತೆಯ ಇತ್ತೀಚಿನ ವರದಿಯ ಪ್ರಕಾರ 2011ರಿಂದ 2023ರ ಅವಧಿಯಲ್ಲಿ ಭಾರತದಲ್ಲಿ ಅಂದಾಜು 49.6 ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ. ಈ ವರದಿಯನ್ನು ಆಧರಿಸಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ...

ಗಾಂಧೀಯ ‘ರಾಮ’-ಮನುವಾದಿಗಳ ‘ಶ್ರೀರಾಮ’ನಲ್ಲ

ಸಮಾನತೆಯ ರಾಮರಾಜ್ಯಕ್ಕೂ, ವರ್ಣಾಶ್ರಮದ ರಾಜಕಾರಣಕ್ಕೂ ಇರುವ ವ್ಯತ್ಯಾಸವೇನು? ಗಾಂಧೀಜಿಯವರ ಪಾಲಿಗೆ ರಾಮ ಎಂದರೆ ಸತ್ಯ, ಅಹಿಂಸೆ, ಪ್ರೀತಿ ಮತ್ತು ಸರ್ವಧರ್ಮ ಸಮಭಾವದ ಸಂಕೇತ; ಅಂಬೇಡ್ಕರ್ ಅವರ ವಿಮರ್ಶೆಯಲ್ಲಿ ಪುರಾಣದ ರಾಮನ ಆಡಳಿತದಲ್ಲಿ ಜಾತಿ...

ಮಂಡೇಲ ನೇತೃತ್ವದಲ್ಲಿ ಗುಲಾಮಗಿರಿ – ವರ್ಣಭೇದ ನೀತಿ ವಿರುದ್ಧ...

ನೆಲ್ಸನ್ ಮಂಡೇಲಾ ಅವರಂತಹ ಮಹಾನ್ ನಾಯಕರು ಕಟ್ಟಿದ್ದ ಈ ಪಕ್ಷ ದಾರಿ ತಪ್ಪಿದ್ದಾದರೂ ಹೇಗೆ ಎಂಬ ಪ್ರಶ್ನೆಗೆ ರಾಜಕೀಯ ತಜ್ಞರು ಸ್ಪಷ್ಟ ಕಾರಣಗಳನ್ನು ನೀಡಿದ್ದಾರೆ. ಆಡಳಿತಶಾಹಿಯ ಭ್ರಷ್ಟಾಚಾರ, ಮಿತಿಮೀರಿದ ಬಡತನ, ನಿರುದ್ಯೋಗ, ಮತ್ತು...

ಇದನ್ನು ಓದಿದ್ದೀರಾ? ‘ನಮ್ಮ ಸರ್ಕಾರ ಯಾರ ಫೋನ್ ಟ್ಯಾಪ್ ಮಾಡುವುದಿಲ್ಲ’: ಸಿಎಂ ಸಿದ್ದರಾಮಯ್ಯ

“ಬಿಆರ್‌ಎಸ್‌ ‘ಫೋನ್ ಟ್ಯಾಪಿಂಗ್’ ಮಾಡುತ್ತಿತ್ತು. ವಿರೋಧ ಪಕ್ಷದ ನಾಯಕರು, ಹೈಕೋರ್ಟ್ ನ್ಯಾಯಾಧೀಶರು ಅಥವಾ ಪತ್ರಕರ್ತರನ್ನು ಸಹ ಬಿಟ್ಟಿಲ್ಲ. ಅವರು ಗಂಡ ಮತ್ತು ಹೆಂಡತಿಯರ ನಡುವಿನ ಖಾಸಗಿ ಸಂಭಾಷಣೆಗಳನ್ನು ಕದ್ದಾಲಿಸಿದ್ದರು. ಚಲನಚಿತ್ರ ತಾರೆಯರ ಮಾತುಗಳನ್ನು ಕದ್ದು ಕೇಳಿಸಿಕೊಂಡಿದ್ದರು. ಉದ್ಯಮಿಗಳನ್ನು ಸಹ ಬ್ಲ್ಯಾಕ್‌ಮೇಲ್ ಮಾಡಿದ್ದರು. ಭೂಮಿಯಲ್ಲಿ ಇದಕ್ಕಿಂತ ದೊಡ್ಡ ಪಾಪಿಗಳು ಯಾರಾದರೂ ಇದ್ದಾರೆಯೇ” ಎಂದು ಪ್ರಶ್ನಿಸಿದ್ದಾರೆ.

ಇನ್ನು ತೆಲಂಗಾಣ ಬಿಜೆಪಿ ಸಂಸದ ಕೊಂಡ ವಿಶ್ವೇಶ್ವರ ರೆಡ್ಡಿ ತಮ್ಮ ಫೋನ್ ಅನ್ನು ಟ್ಯಾಪ್ ಮಾಡಲಾಗಿದೆ ಎಂದು ಆರೋಪಿಸಿದ್ದನ್ನೂ ರೇವಂತ್ ರೆಡ್ಡಿ ಉಲ್ಲೇಖಿಸಿದ್ದಾರೆ. ಫೋನ್‌ಗಳನ್ನು ಕದ್ದಾಲಿಸಿ, ಭೂ ಖರೀದಿದಾರರನ್ನು ಬ್ಲ್ಯಾಕ್‌ಮೇಲ್ ಮಾಡಲಾಗಿತ್ತು. ಚುನಾವಣಾ ಬಾಂಡ್‌ಗಳ ಮೂಲಕ ಕೋಟ್ಯಂತರ ರೂಪಾಯಿಗಳನ್ನು ಸಂಗ್ರಹಿಸಲಾಗಿತ್ತು ಎಂದು ವಿಶ್ವೇಶ್ವರ ರೆಡ್ಡಿ ಹೇಳಿದ್ದನ್ನು ಸಿಎಂ ಉಲ್ಲೇಖಿಸಿದ್ದಾರೆ.

“ಬಿಆರ್‌ಎಸ್ 1,500 ಕೋಟಿ ರೂಪಾಯಿಗಳನ್ನು ಚುನಾವಣಾ ಬಾಂಡ್‌ಗಳಲ್ಲಿ ಸಂಗ್ರಹಿಸಲು ಫೋನ್ ಟ್ಯಾಪಿಂಗ್ ಬಳಸಿದೆ” ಎಂದೂ ತೆಲಂಗಾಣ ಸಿಎಂ ಹೇಳಿಕೊಂಡಿದ್ದಾರೆ. “ಇದು ಯಾರ ಹಣ? ​​ಸಾವಿರಾರು ಕೋಟಿ ಆಸ್ತಿಗಳು ಮತ್ತು ನೂರಾರು ಎಕರೆ ಭೂಮಿಯನ್ನು ಅಗ್ಗವಾಗಿ ಖರೀದಿಸಿ ಉದ್ಯಮಿಗಳನ್ನು ಬೆದರಿಸುವ ಮೂಲಕ ತೆಗೆದುಕೊಳ್ಳಲಾಗಿದೆ ಎಂಬುದು ನಿಜವಲ್ಲವೇ” ಎಂದು ಪ್ರಶ್ನಿಸಿದ್ದಾರೆ.

“ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವ ಜಿ ಕಿಶನ್ ರೆಡ್ಡಿ ಈ ಆರೋಪಿಗನ್ನು ಯಾಕೆ ಜೈಲಿಗಟ್ಟಿಲ್ಲ? ಅವರು ಮಾಡಿದ ಮಾಡಿದ ಪಾಪಗಳಿಗೆ ಶಿಕ್ಷೆಯಾಗುವುದಿಲ್ಲವೇ? ಬಿಆರ್‌ಎಸ್ ಈ ಪಾಪಗಳ ಭಾರದಲ್ಲಿ ಹೂತುಹೋಗುತ್ತದೆ. ಈ ಪ್ರಕರಣಗಳಿಂದ ತಪ್ಪಿಸಿಕೊಳ್ಳಲು ಬಿಆರ್‌ಎಸ್ 2024ರಲ್ಲಿ ಎಂಟು ಲೋಕಸಭಾ ಸ್ಥಾನಗಳಲ್ಲಿ ಬಿಜೆಪಿ ಗೆಲ್ಲಲು ಸಹಾಯ ಮಾಡಿತ್ತು. ಈಗ ಪುರಸಭೆ ಚುನಾವಣೆಯಲ್ಲಿಯೂ ಬಿಜೆಪಿ ಗೆಲ್ಲುವಂತೆ ಬಿಆರ್‌ಎಸ್‌ ನೋಡಿಕೊಳ್ಳುತ್ತಿದೆ. ಬಿಆರ್‌ಎಸ್, ಬಿಜೆಪಿ ಒಂದೇ ನಾಣ್ಯದ ಎರಡು ಮುಖಗಳು” ಎಂದು ದೂರಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆಲಸವಿಲ್ಲ, ಪರಿಹಾರವೂ ಅಷ್ಟಕ್ಕಷ್ಟೇ: ದೆಹಲಿಯ ವಿಷಪೂರಿತ ಗಾಳಿಗೆ ಬೆಲೆ ತೆರುತ್ತಿರುವ ಕಟ್ಟಡ ಕಾರ್ಮಿಕರು!

ಪ್ರತಿ ಚಳಿಗಾಲದಲ್ಲೂ ದೆಹಲಿಯ ವಾಯುಮಾಲಿನ್ಯವು ಅಪಾಯಕಾರಿ ಮಟ್ಟಕ್ಕೆ ತಲುಪುತ್ತದೆ. ಇದನ್ನು ನಿಯಂತ್ರಿಸಲು...

ಕೇಜ್ರೀವಾಲ್, ಪುತ್ರಿಗೆ ಜೀವಬೆದರಿಕೆ: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ 7 ಕೋಟಿ ರೂ.ಗೆ ಬೇಡಿಕೆ

ದೆಹಲಿಯ ಮಾಜಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ...

ಮುಂಬೈ | ಕಿರುಕುಳ ಪ್ರಶ್ನಿಸಿದ್ದಕ್ಕೆ ರೈಲಿನಿಂದ ತಳ್ಳಿದ ಕಿಡಿಗೇಡಿ; ಯುವತಿಯ ಎಡಗೈ ತುಂಡು

ಮುಂಬೈ ಜೀವನಾಡಿಯಾಗಿರುವ ಲೋಕಲ್ ರೈಲುಗಳಲ್ಲಿ ಮಹಿಳೆಯರ ಸುರಕ್ಷತೆಯ ಕುರಿತು ಮತ್ತೊಮ್ಮೆ ಗಂಭೀರ...