ಸೋದರಳಿಯ ಆಕಾಶ್‌ರನ್ನು ಉತ್ತರಾಧಿಕಾರಿ ಸ್ಥಾನದಿಂದ ಕೆಳಗಿಳಿಸಿದ ಮಾಯಾವತಿ, ಕಾರಣವೇನು?

Date:

ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ವರಿಷ್ಠೆ ಮಾಯಾವತಿ ಅವರು ಮಂಗಳವಾರ ಸೋದರಳಿಯ ಆಕಾಶ್ ಆನಂದ್ ಅವರನ್ನು ತಮ್ಮ ರಾಜಕೀಯ ಉತ್ತರಾಧಿಕಾರಿ ಮತ್ತು ಪಕ್ಷದ ರಾಷ್ಟ್ರೀಯ ಸಂಯೋಜಕ ಹುದ್ದೆಯಿಂದ ಕೆಳಗಿಳಿಸಿದ್ದಾರೆ.

- Advertisement -

ಈ ಬಗ್ಗೆ ತನ್ನ ಎಕ್ಸ್‌ ಪೋಸ್ಟ್‌ನಲ್ಲಿ ಮಾಯಾವತಿ ಮಾಹಿತಿ ನೀಡಿದ್ದಾರೆ. ಆಕಾಶ್ ಈ ಪಾತ್ರವನ್ನು ನಿರ್ವಹಣೆ ಮಾಡುವಷ್ಟು ‘ಪ್ರಬುದ್ಧತೆ’ಗೆ ತಲುಪಬೇಕು ಎಂದು ಮಾಯಾವತಿ ಹೇಳಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

“ಬಿಎಸ್‌ಪಿ, ಒಂದು ಪಕ್ಷ ಮಾತ್ರವಲ್ಲದೆ, ಬಾಬಾ ಸಾಹೇಬ್ ಡಾ. ಭೀಮರಾವ್ ಅಂಬೇಡ್ಕರ್ ಅವರ ಸ್ವಾಭಿಮಾನ ಮತ್ತು ಕಾನ್ಶಿ ರಾಮ್ ಜಿ ಅವರ ಸಾಮಾಜಿಕ ಬದಲಾವಣೆಗಾಗಿ ಇರುವ ಆಂದೋಲನವಾಗಿದೆ ಎಂಬುದು ತಿಳಿದಿದೆ. ಇದಕ್ಕಾಗಿ ನಾನು ನನ್ನ ಸಂಪೂರ್ಣ ಜೀವನವನ್ನು ಮುಡಿಪಾಗಿಟ್ಟಿದ್ದೇನೆ. ಅದಕ್ಕೆ ವೇಗ ನೀಡಲು ಹೊಸ ಪೀಳಿಗೆಯನ್ನು ಸಹ ಸಿದ್ಧಪಡಿಸಲಾಗುತ್ತಿದೆ” ಎಂದಿದ್ದಾರೆ.

ಇದನ್ನು ಓದಿದ್ದೀರಾ?  ಉತ್ತರಪ್ರದೇಶ | ಈ ಸಲ ಮೈತ್ರಿ ಕೂಟಗಳಿಂದ ಯಾಕೆ ದೂರ ಉಳಿದರು ಮಾಯಾವತಿ?

“ಈ ನಿಟ್ಟಿನಲ್ಲಿ ಪಕ್ಷದಲ್ಲಿ ಇತರ ಜನರನ್ನು ಉತ್ತೇಜಿಸುವ ಜೊತೆಗೆ, ನಾನು ಆಕಾಶ್ ಆನಂದ್ ಅವರನ್ನು ರಾಷ್ಟ್ರೀಯ ಸಂಯೋಜಕ ಮತ್ತು ಅವರ ಉತ್ತರಾಧಿಕಾರಿ ಎಂದು ಘೋಷಿಸಿದ್ದೆ. ಆದರೆ ಈಗ ಆಕಾಶ್ ಪೂರ್ಣ ಪ್ರಬುದ್ಧತೆಯನ್ನು ಪಡೆಯುವವರೆಗೆ ಪಕ್ಷ ಮತ್ತು ಚಳುವಳಿಯ ಹಿತಾಸಕ್ತಿಯಿಂದ ಅವರನ್ನು ಈ ಎರಡೂ ಪ್ರಮುಖ ಜವಾಬ್ದಾರಿಗಳಿಂದ ದೂರ ಮಾಡಲಾಗುತ್ತಿದೆ” ಎಂದು ತಿಳಿಸಿದರು.

ಆಕಾಶ್ ಅವರ ತಂದೆ ಆನಂದ್ ಕುಮಾರ್ ಅವರು ಪಕ್ಷದಲ್ಲಿ ತಮ್ಮ ಪಾತ್ರದಲ್ಲಿ ಮುಂದುವರಿಯಲಿದ್ದಾರೆ ಎಂದೂ ಮಾಯಾವತಿ ಮಾಹಿತಿ ನೀಡಿದ್ದಾರೆ.

ಇದನ್ನು ಓದಿದ್ದೀರಾ? ಲೋಕಸಭೆ ಚುನಾವಣೆಯಲ್ಲಿ ಬಿಎಸ್‌ಪಿ ಏಕಾಂಗಿ ಸ್ಪರ್ಧೆ: ಮಾಯಾವತಿ

ಕಳೆದ ವರ್ಷ ಡಿಸೆಂಬರ್ 10ರಂದು ಮಾಯಾವತಿ ಅವರು 28 ವರ್ಷದ ಆಕಾಶ್ ಆನಂದ್ ಅವರನ್ನು ತಮ್ಮ ಉತ್ತರಾಧಿಕಾರಿ ಎಂದು ಘೋಷಿಸಿದರು. ಲಂಡನ್‌ನಲ್ಲಿ ಎಂಬಿಎ ಮಾಡಿರುವ ಆನಂದ್‌ಗೆ ಪಕ್ಷದ ರಾಷ್ಟ್ರೀಯ ಸಂಯೋಜಕ ಹುದ್ದೆ ನೀಡಲಾಗಿತ್ತು.

ಇನ್ನು ಇತ್ತೀಚೆಗೆ ಆಕಾಶ್ ಆನಂದ್ ವಿರುದ್ಧ ಉತ್ತರ ಪ್ರದೇಶದ ಸೀತಾಪುರದಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ದೂರು ದಾಖಲಾಗಿದೆ. ಚುನಾವಣಾ ರ್‍ಯಾಲಿಯಲ್ಲಿ ಭಾಷಣ ಮಾಡುತ್ತಾ ಆಕಾಶ್ ಆನಂದ್, ಬಿಜೆಪಿ ಸರ್ಕಾರವನ್ನು ತಾಲಿಬಾನ್‌ಗೆ ಹೋಲಿಕೆ ಮಾಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಹಾರಾಷ್ಟ್ರ ಟಿಇಟಿ ಪ್ರಶ್ನೆಪತ್ರಿಕೆ ಸೋರಿಕೆ: ಕೇವಲ 8,000 ರೂ. ಆಸೆಗೆ ಬಿದ್ದು ಶೂಗಳಲ್ಲಿ ಅಡಗಿಸಿ ಪಶ್ನೆಪತ್ರಿಕೆ ಕಳವು!

ಮಹಾರಾಷ್ಟ್ರ ಶಿಕ್ಷಕರ ಅರ್ಹತಾ ಪರೀಕ್ಷೆಯ (ಟಿಇಟಿ) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ...

ಲಡಾಖ್‌ ಹೋರಾಟಕ್ಕೆ ವರ್ಷ: ಸೆ. 23ರಂದು ಸೋನಮ್ ವಾಂಗ್‌ಚುಕ್ ನೇತೃತ್ವದಲ್ಲಿ 20 ಕಿ.ಮೀ ಪಾದಯಾತ್ರೆ

ಲಡಾಖ್‌ಗೆ ಸಂವಿಧಾನದ 6ನೇ ಪರಿಚ್ಛೇದದ ಅಡಿಯಲ್ಲಿ ವಿಶೇಷ ರಕ್ಷಣೆ ಹಾಗೂ ಪೂರ್ಣ...

85ರ ಗ್ರಾನೈಟ್ ಉದ್ಯಮಿಯ ಕಾಮಕೃತ್ಯ; 20 ವರ್ಷಗಳಿಂದ ಅಪ್ರಾಪ್ತೆಯರ ಮೇಲೆ ಅತ್ಯಾಚಾರ

ತಮಿಳುನಾಡಿನ ಪ್ರಭಾವಿ, ಗ್ರಾನೈಟ್ ಉದ್ಯಮಿ 85 ವರ್ಷದ ಆರ್‌. ವೀರಮಣಿ ವಿರುದ್ಧದ...