ತಮಿಳುನಾಡು ಬಿಎಸ್‌ಪಿ ರಾಜ್ಯಾಧ್ಯಕ್ಷರ ಹತ್ಯೆ; ಸಿಬಿಐ ತನಿಖೆಗೆ ಮಾಯಾವತಿ ಆಗ್ರಹ

Date:

ತಮಿಳುನಾಡಿನ ಬಿಎಸ್‌ಪಿ ರಾಜ್ಯಾಧ್ಯಕ್ಷ ಕೆ ಆರ್ಮ್‌ಸ್ಟ್ರಾಂಗ್ ಹತ್ಯೆಯ ಕುರಿತು ಸಿಬಿಐ ತನಿಖೆ ನಡೆಸಬೇಕು ಎಂದು ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ ಭಾನುವಾರ ಆಗ್ರಹಿಸಿದ್ದಾರೆ.

- Advertisement -

ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ ಅವರು ಚೆನ್ನೈನಲ್ಲಿ ಆರ್ಮ್‌ಸ್ಟ್ರಾಂಗ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಪೆರಂಬೂರ್‌ನಲ್ಲಿರುವ ಖಾಸಗಿ ಶಾಲೆಯೊಂದರಲ್ಲಿ ಇರಿಸಲಾಗಿದ್ದ ಆರ್ಮ್‌ಸ್ಟ್ರಾಂಗ್ ಪಾರ್ಥಿವ ಶರೀರದ ಮುಂದೆ ಪುಷ್ಪಾರ್ಚನೆ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಅದಾದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಮಾಯಾವತಿ ಅವರು, ಈವರೆಗೆ ಬಂಧಿಸಲ್ಪಟ್ಟವರು ನಿಜವಾದ ಅಪರಾಧಿಗಳಲ್ಲ ಎಂದು ಪ್ರತಿಪಾದಿಸಿದರು. ಹಾಗೆಯೇ ತನಿಖೆಯನ್ನು ಕೇಂದ್ರ ಏಜೆನ್ಸಿ ಸಿಬಿಐಗೆ ವರ್ಗಾಯಿಸಲು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರಿಗೆ ಒತ್ತಾಯಿಸಿದರು.

ಇದನ್ನು ಓದಿದ್ದೀರಾ?  ತಮಿಳುನಾಡು ಬಿಎಸ್‌ಪಿ ಮುಖ್ಯಸ್ಥನ ಬರ್ಬರ ಹತ್ಯೆ: 8 ಜನರ ಬಂಧನ

“ಆರ್ಮ್‌ಸ್ಟ್ರಾಂಗ್‌ ಹತ್ಯೆಯ ರೀತಿಯನ್ನು ನೋಡಿದರೆ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಇಲ್ಲ ಎಂಬುವುದನ್ನು ತೋರಿಸುತ್ತದೆ. ಆರ್ಮ್‌ಸ್ಟ್ರಾಂಗ್‌ಗೆ ನ್ಯಾಯ ದೊರೆಯುವಂತೆ ಸ್ಟಾಲಿನ್ ನೋಡಿಕೊಳ್ಳಬೇಕು. ಈ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಬೇಕು” ಎಂದು ಮನವಿ ಮಾಡಿದರು.

“ನಿಜವಾದ ಆರೋಪಿಗಳನ್ನು ಬಂಧಿಸಲಾಗಿಲ್ಲ. ರಾಜ್ಯ ಸರ್ಕಾರವು ನ್ಯಾಯವನ್ನು ಖಾತರಿಪಡಿಸುತ್ತದೆ ಎಂಬ ಭರವಸೆ ನಮಗಿಲ್ಲ. ತನಿಖೆಯನ್ನು ಸಿಬಿಐಗೆ ವರ್ಗಾಯಿಸಬೇಕು” ಎಂದು ಆಗ್ರಹಿಸಿದರು.

“ಆರ್ಮ್‌ಸ್ಟ್ರಾಂಗ್ ಹತ್ಯೆಯ ನಂತರ ರಾಜ್ಯದಾದ್ಯಂತ ದಲಿತರು ಆತಂಕಕ್ಕೊಳಗಾಗಿದ್ದಾರೆ” ಎಂದು ಹೇಳಿದ ಮಾಯಾವತಿ, ರಾಜ್ಯದಲ್ಲಿ ದಲಿತರ ಸುರಕ್ಷತೆ ಕಡೆ ಗಮನಹರಿಸುವಂತೆ ಮುಖ್ಯಮಂತ್ರಿಗೆ ಮನವಿ ಮಾಡಿದರು.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...