ಸಂವಿಧಾನವನ್ನು ತಿರುಚಿದರೆ ಬಿಎಸ್‌ಪಿ ಸುಮ್ಮನಿರಲ್ಲ: ಮಾಯಾವತಿ

Date:

ಆಡಳಿತಾರೂಢ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಮತ್ತು ಹಿಂದಿನ ಕಾಂಗ್ರೆಸ್ ಸರ್ಕಾರ ಸಂವಿಧಾನದಲ್ಲಿ ಅನಗತ್ಯ ಬದಲಾವಣೆಗಳನ್ನು ಮಾಡುತ್ತಿದೆ. ಸಂವಿಧಾನವನ್ನು ತಿರುಚಿದರೆ ಬಿಎಸ್‌ಪಿ ಸುಮ್ಮನಿರಲ್ಲ ಎಂದು ಬಹುಜನ ಸಮಾಜ ಪಕ್ಷದ(ಬಿಎಸ್‌ಪಿ) ಮುಖ್ಯಸ್ಥೆ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ ಶನಿವಾರ ಹೇಳಿದ್ದಾರೆ.

- Advertisement -

‘ಸಮಾಜವಾದಿ’ ಮತ್ತು ‘ಜಾತ್ಯತೀತ’ ಪದಗಳನ್ನು ಪೀಠಿಕೆಯಿಂದ ತೆಗೆದುಹಾಕಬೇಕೆಂಬ ಬಿಜೆಪಿ, ಆರ್‌ಎಸ್‌ಎಸ್‌ ಬೇಡಿಕೆಗಳ ಕುರಿತ ಮಾಧ್ಯಮಗಳ ಪ್ರಶ್ನೆಗೆ ಲಕ್ನೋದಲ್ಲಿ ಪ್ರತಿಕ್ರಿಯಿಸಿದ ಮಾಯಾವತಿ, “ಈಗ ಆರ್‌ಎಸ್‌ಎಸ್‌ನವರು, ಬಿಜೆಪಿಯವರು, ಕಾಂಗ್ರೆಸ್‌ನವರು ಏನು ಹೇಳುತ್ತಾರೆ ಎಂಬ ಬಗ್ಗೆ ಏನೂ ಹೇಳಲು ಬಯಸಲ್ಲ. ಆದರೆ ಸಂವಿಧಾನವನ್ನು ತಿರುಚಿದರೆ ನಮ್ಮ ಬಿಎಸ್‌ಪಿ ಪಕ್ಷ ಸುಮ್ಮನಿರಲ್ಲ. ಅದರ ವಿರುದ್ಧ ಪ್ರತಿಭಟಿಸಲು ಬೀದಿಗಿಳಿಯುತ್ತೇವೆ. ಎಲ್ಲವನ್ನೂ ನಾವು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದನ್ನು ಓದಿದ್ದೀರಾ? ನಾಳಿನ ವಿಪಕ್ಷಗಳ ಒಗ್ಗಟ್ಟಿನ ಸಭೆಯಲ್ಲಿ ಭಾಗವಹಿಸದಿರಲು ಮಾಯಾವತಿ ನಿರ್ಧಾರ

“ಡಾ. ಭೀಮರಾವ್ ಅಂಬೇಡ್ಕರ್ ಅವರು ತಮ್ಮ ಜೀವಮಾನದ ಅವಿಶ್ರಾಂತ ಹೋರಾಟಗಳ ಅನುಭವಗಳ ಆಧಾರದ ಮೇಲೆ, ದೇಶಕ್ಕೆ ಅತ್ಯಂತ ಮಾನವೀಯ ಸಂವಿಧಾನವನ್ನು ನೀಡಿದರು. ಆದರೆ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ ಕಾಂಗ್ರೆಸ್, ಈಗ ಕೆಲವು ವರ್ಷಗಳಿಂದ ಅಧಿಕಾರದಲ್ಲಿರುವ ಬಿಜೆಪಿ ನೇತೃತ್ವದ ಎನ್‌ಡಿಎ ಸಂವಿಧಾನವನ್ನು ಪೂರ್ಣ ಪ್ರಮಾಣದಲ್ಲಿ ಎಂದಿಗೂ ಜಾರಿಗೆ ತಂದಿಲ್ಲ” ಎಂದು ದೂರಿದ್ದಾರೆ.

“ಈ ಎರಡೂ ಪಕ್ಷಗಳು ಮತ್ತು ಅವರ ಬೆಂಬಲಿಗರು ತಮ್ಮ ಪಕ್ಷದ ಸಿದ್ಧಾಂತ ಮತ್ತು ರಾಜಕೀಯ ಹಿತಾಸಕ್ತಿಗಳಿಗೆ ಅನುಗುಣವಾಗಿ ಕಾಲಕಾಲಕ್ಕೆ ಸಂವಿಧಾನದಲ್ಲಿ ಅನೇಕ ಅನಗತ್ಯ ಬದಲಾವಣೆಗಳನ್ನು ಮಾಡಿದ್ದಾರೆ” ಎಂದು ಮಾಯಾವತಿ ಆರೋಪಿಸಿದ್ದಾರೆ.

“ಈ ಪಕ್ಷಗಳು ಶೀಘ್ರದಲ್ಲೇ ತಮ್ಮ ಸಂವಿಧಾನ ವಿರೋಧಿ ನಿಲುವನ್ನು ಬದಲಾಯಿಸದಿದ್ದರೆ, ದೇಶಾದ್ಯಂತ ಈ ಪಕ್ಷಗಳ ವಿರುದ್ಧ ನಾವು ಧ್ವನಿ ಎತ್ತಬೇಕಾಗುತ್ತದೆ” ಎಂದು ಎಚ್ಚರಿಕೆಯನ್ನೂ ನೀಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...