ಬಿಎಸ್‌ವೈ ಪೋಕ್ಸೋ ಪ್ರಕರಣ | ಜ.10ಕ್ಕೆ ವಿಚಾರಣೆ ಮುಂದೂಡಿದ ಧಾರವಾಡ ಹೈಕೋರ್ಟ್‌

Date:

Advertisements

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧದ ಪೋಕ್ಸೋ ಪ್ರಕರಣದ ವಿಚಾರಣೆಯನ್ನು ಧಾರವಾಡ ಹೈಕೋರ್ಟ್ ಜ.10ಕ್ಕೆ ಮುಂದೂಡಿದೆ.

ನ್ಯಾ.‌ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಮಂಗಳವಾರತ ಪ್ರಕರಣದ ವಿಚಾರಣೆ ನಡೆಸಿತು. ಹಿರಿಯ ವಕೀಲ ಸಿ.ವಿ.ನಾಗೇಶ ಅವರು ಬಿ.ಎಸ್.ಯಡಿಯೂರಪ್ಪ ಅವರ ಪರವಾಗಿ ವಾದ ಮಂಡಿಸಿದರು. ಆದರೆ ಪ್ರಕರಣದ ವಿಚಾರಣೆಯನ್ನು ಬೆಂಗಳೂರಿನಲ್ಲಿಯೇ ನಡೆಸುವಂತೆ ಸೂಚಿಸಿದ ನ್ಯಾಯಮೂರ್ತಿಗಳು ಮುಂದಿನ ವಿಚಾರಣೆ ಜ.10ಕ್ಕೂ ಮುಂದೂಡಿದರು.

ರಾಜ್ಯ ರಾಜಕೀಯದಲ್ಲಿ ಈ ಪ್ರಕರಣ ತೀವ್ರ ಸಂಚಲನ ಸೃಷ್ಟಿಸಿದೆ. ಬಿ.ಎಸ್.ವೈ ಅವರು ತಮ್ಮ ಮೇಲಿನ ಪೋಕ್ಸೋ ಪ್ರಕರಣವನ್ನು ರದ್ದು ಮಾಡುವಂತೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈವರೆಗೂ ಬೆಂಗಳೂರಿನಲ್ಲಿಯೇ ನಡೆದಿದ್ದ ಈ ಪ್ರಕರಣ ವಿಚಾರಣೆ ಮಂಗಳವಾರ ಮಾತ್ರ ಧಾರವಾಡ ಹೈಕೋರ್ಟ್‌ನಲ್ಲಿ ನಡೆಯಿತು.

Advertisements

ಸಂತ್ರಸ್ತೆಯ ಸಹೋದರನಿಂದ ಆರೋಪಗಳ ಸುರಿಮಳೆ

ಸಂತ್ರಸ್ತೆಯ ಸಹೋದರ ವಿಡಿಯೋ ಮಾಡಿ ಬಿಎಸ್‌ವೈ ವಿರುದ್ಧ ಆರೋಪಗಳ ಸುರಿಮಳೆಯನ್ನೇ ಸುರಿಸಿದ್ದಾರೆ. ಅಪ್ರಾಪ್ತ ಹೆಣ್ಣಮಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಬಿಎಸ್ ಯಡಿಯೂರಪ್ಪ ವಿರುದ್ಧ ಪ್ರಕರಣದ ತನಿಖೆ ನ್ಯಾಯಾಲಯದಲ್ಲಿರುವಂತೆಯೇ ಇತ್ತ ಸಂತ್ರಸ್ಥೆಯ ಸಹೋದರ ಎಂದು ಹೇಳಿಕೊಂಡ ವ್ಯಕ್ತಿ, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕ್ರಿಕೆಟ್ ಕೇಸರಿಕರಣ, ಪರಿಶುದ್ಧ ಆಟ ಅಂತರ್ಧಾನ

“ತನ್ನ ಸಹೋದರಿ ತನಗಾದ ಚಿತ್ರಹಿಂಸೆಯಿಂದಾಗಿ ನಿತ್ಯ ನರಕ ನೋಡುತ್ತಿದ್ದಾಳೆ. ಅತೀವ ದುಃಖದಿಂದ ನಾನು ಇಂದು ಈ ವಿಡಿಯೋ ಮಾಡುತ್ತಿದ್ದೇನೆ. ನನ್ನ ಪುಟ್ಟ ತಂಗಿ ಮೇಲಾದ ದೌರ್ಜನ್ಯದಿಂದಾಗಿ ನನ್ನ ಕುಟುಂಬ ಚೇತರಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇದಕ್ಕೆಲ್ಲಾ ಕಾರಣ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ. ನಿಜಕ್ಕೂ ಯಡಿಯೂರಪ್ಪ ರಂತಹವರು ಇಂತಹ ಕೃತ್ಯವೆಸಗುತ್ತಾರೆಂದು ಊಹಿಸಲೂ ಅಸಾಧ್ಯ. ಅದೂ ಕೂಡ ಅವರ ಮೊಮ್ಮಕ್ಕಳಿಗಿಂತಲೂ ಚಿಕ್ಕವಳಾದ ನನ್ನ ಪುಟ್ಟ ತಂಗಿ ಮೇಲೆ ಇಂತಹ ಕೃತ್ಯ ನಡೆಸಿದ್ಜಾರೆ. ನನಗೆ ಮತ್ತು ನನ್ನ ಪುಟ್ಟ ತಂಗಿಗೆ ಇದು ನಿಜಕ್ಕೂ ಆಘಾತವಾಗಿದೆ” ಎಂದು ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ.

“ಅಂದು ನಡೆದ ಕೆಟ್ಟ ಘಟನೆಗಳು ಆಕೆಯನ್ನು ಇನ್ನಿಲ್ಲದಂತೆ ಕಾಡುತ್ತಿವೆ. ಇದೇ ಕೆಟ್ಟ ಘಟನೆಗಳ ವಿರುದ್ಧ ಹೋರಾಡುತ್ತಿದ್ದ ನನ್ನ ತಾಯಿ ಕೂಡ ನಮ್ಮನ್ನೆಲ್ಲ ಅಗಲಿದ್ದಾರೆ. ಅವರ ಸಾವು ನಮಗೆ ಇನ್ನೂ ಆಘಾತ ತಂದಿದೆ. ನಮ್ಮ ಭಾವನೆಗಳು, ಆಕ್ರೋಶ ಎಲ್ಲವನ್ನೂ ನಮ್ಮೊಳಗೇ ಇಟ್ಟುಕೊಂಡು ಒದ್ದಾಡುವಂತೆ ಮಾಡಿದೆ. ನಮ್ಮ ತಾಯಿಯೇ ನಮ್ಮ ಧೈರ್ಯವಾಗಿದ್ದರು. ಆದರೆ ಅವರ ಸಾವು ನ್ಯಾಯಕ್ಕಾಗಿ ಹೋರಾಡುವ ನಮ್ಮ ಹಾದಿಯಲ್ಲಿ ನಮಗೆ ಭರಿಸಲಾರದ ನಷ್ಟ ತಂದಿದೆ. ಸುಮಾರು ಒಂದು ದಶಕದಿಂದ ಅಂದರೆ 2016ರಲ್ಲಿ ಮೊದಲ ಪೋಕ್ಸೋ ಪ್ರಕರಣ ದಾಖಲಾದ ದಿನದಿಂದಲೂ ಆಕೆ ಈ ಹೋರಾಟ ನಡೆಸಿದ್ದರು” ಎಂದು ಹೇಳಿದ್ದಾರೆ.

“ನ್ಯಾಯಕ್ಕಾಗಿ ನಮ್ಮ ತಾಯಿ ವಿವಿಧ ನಾಯಕರನ್ನು, ಅಧಿಕಾರಿಗಳನ್ನು ಭೇಟಿಯಾದರು. ಆದರೆ ಆಕೆಗೆ ನ್ಯಾಯ ಕೊಡಿಸುವ ಬದಲು ಆಕೆಯ ವಿರುದ್ಧವೇ ಸುಳ್ಳು ಪ್ರಕರಣಗಳು ದಾಖಲಾದವು. ನಮ್ಮ ತಾಯಿ ವಿರುದ್ಧ ದಾಖಲಾದ ಯಾವುದೇ ಪ್ರಕರಣವೂ ಸತ್ಯವಲ್ಲ. ಅದೆಲ್ಲ ಸುಳ್ಳು ಪ್ರಕರಣಗಳು. ಯಡಿಯೂರಪ್ಪರನ್ನು ರಕ್ಷಿಸಲು ನಮ್ಮ ತಾಯಿ ವಿರುದ್ಧ ಹಾಕಲಾದ ಸುಳ್ಳು ಪ್ರಕರಣಗಳು” ಎಂದು ಆರೋಪಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

Download Eedina App Android / iOS

X