ಕೇಂದ್ರ ಬಜೆಟ್ | ಗುಂಡೇಟಿನ ಗಾಯಕ್ಕೆ ‘ಸಣ್ಣ ಬ್ಯಾಂಡೇಜ್’ ಹಾಕಿದಂತಿದೆ: ರಾಹುಲ್ ಗಾಂಧಿ ವ್ಯಂಗ್ಯ

Date:

ಕೇಂದ್ರ ಬಜೆಟ್ 2025 ಗುಂಡೇಟಿನ ಗಾಯಕ್ಕೆ ಸಣ್ಣ ಬ್ಯಾಂಡೇಜ್ ಹಾಕಿದ್ದಂತಿದೆ ಎಂದು ಲೋಕಸಭೆ ವಿಪಕ್ಷ ನಾಯಕ, ಸಂಸದ ರಾಹುಲ್ ಗಾಂಧಿ ವ್ಯಂಗ್ಯವಾಡಿದ್ದಾರೆ.

- Advertisement -

ಈ ಬಗ್ಗೆ ರಾಹುಲ್ ಗಾಂಧಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. “ಜಾಗತಿಕವಾಗಿ ಅನಿಶ್ಚಿತತೆ ಇರುವಾಗ ದೇಶದಲ್ಲಿರುವ ಆರ್ಥಿಕ ಬಿಕ್ಕಟ್ಟನ್ನು ಪರಿಹರಿಸಲು ನಾವು ಒಂದು ಮಾದರಿಯಾದ ಬದಲಾವಣೆ ತರಬೇಕಾದ ಅವಶ್ಯಕತೆಯಿದೆ. ಆದರೆ ಬಿಜೆಪಿ ಸರ್ಕಾರದ ಪರಿಕಲ್ಪನೆಗಳು ದಿವಾಳಿಯಾಗಿದೆ” ಎಂದು ಟೀಕಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

ಇದನ್ನು ಓದಿದ್ದೀರಾ? ನೇತಾಜಿ ಸಾವಿನ ಬಗ್ಗೆ ಪೋಸ್ಟ್; ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲು

ಹಲವು ವಿಪಕ್ಷ ನಾಯಕರುಗಳು ಕೇಂದ್ರ ಬಜೆಟ್ ಅನ್ನು ಟೀಕಿಸಿದ್ದಾರೆ. “ಖಾಸಗಿ ಹೂಡಿಕೆ ಮಂದಗತಿ, ಜಿಎಸ್‌ಟಿ ಅವ್ಯವಸ್ಥೆ ಮೊದಲಾದವುಗಳು ಅನಾರೋಗ್ಯ ಪೀಡಿತ ಆರ್ಥಿಕತೆಗೆ ಪರಿಹಾರವಲ್ಲ” ಎಂದು ಹೇಳಿತ್ತು.

ಹಾಗೆಯೇ, “ನರೇಂದ್ರ ಮೋದಿ ಸರ್ಕಾರವು ಎನ್‌ಡಿಎ ಮಿತ್ರ ನಿತೀಶ್ ಕುಮಾರ್ ಆಡಳಿತದಲ್ಲಿರುವ ಬಿಹಾರಕ್ಕೆ ಹೆಚ್ಚು ಆದ್ಯತೆ ನೀಡುತ್ತಿರುವಂತೆ ಕಾಣುತ್ತಿದೆ. ಅದೇ ಮೈತ್ರಿಕೂಟದ ಮತ್ತೊಂದು ಆಧಾರಸ್ತಂಭವಾದ ಆಂಧ್ರಪ್ರದೇಶವನ್ನು ಕ್ರೂರವಾಗಿ ನಿರ್ಲಕ್ಷಿಸುತ್ತಿದೆ” ಎಂದು ಆರೋಪಿಸಿತ್ತು.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಈ ಬಗ್ಗೆ ಟ್ವೀಟ್ ಮಾಡಿದ್ದು, “ಆರ್ಥಿಕತೆಯು ನಾಲ್ಕು ಸಂಬಂಧಿತ ಬಿಕ್ಕಟ್ಟುಗಳಿಂದ ಬಳಲುತ್ತಿದೆ. ನಿಂತ ನೈಜ ವೇತನ, ಸಾಮೂಹಿಕ ಬಳಕೆಯಲ್ಲಿ ಕೊರತೆ, ಖಾಸಗಿ ಹೂಡಿಕೆಯ ದರದಲ್ಲಿ ಮಂದಗತಿ, ಸಂಕೀರ್ಣ ಜಿಎಸ್‌ಟಿ ವ್ಯವಸ್ಥೆ” ಎಂದು ಹೇಳಿದ್ದರು.

ಇದನ್ನು ಓದಿದ್ದೀರಾ? ಮಾನನಷ್ಟ ಮೊಕದ್ದಮೆ: ರಾಹುಲ್ ಗಾಂಧಿ ವಿರುದ್ಧದ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ

“ಈ ಕಾಯಿಲೆಗಳನ್ನು ಪರಿಹರಿಸಲು ಬಜೆಟ್ ಏನನ್ನೂ ಮಾಡಿಲ್ಲ. ಆದಾಯ ತೆರಿಗೆ ಪಾವತಿದಾರರಿಗೆ ಮಾತ್ರ ಪರಿಹಾರವಿದೆ. ಇದು ಆರ್ಥಿಕತೆಯ ಮೇಲೆ ನಿಜವಾದ ಪರಿಣಾಮ ಬೀರುತ್ತದೆಯೇ ಎಂಬುದನ್ನು ಕಾದು ನೋಡಬೇಕಾಗಿದೆ” ಎಂದು ಅಭಿಪ್ರಾಯಿಸಿದ್ದಾರೆ.

2025-26ರ ಹಣಕಾಸು ವರ್ಷದ ಕೇಂದ್ರ ಬಜೆಟ್‌ ಮಂಡಿಸಿದಾಗ ಬಿಹಾರವೇ ಹೆಚ್ಚು ಬಾರಿ ಪ್ರಸ್ತಾಪವಾಗಿದೆ. ಕೇಂದ್ರ ಸಚಿವೆ ಬಿಹಾರಕ್ಕೆ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಮಖಾನಾ ಮಂಡಳಿ ಸ್ಥಾಪನೆ, ಪಶ್ಚಿಮ ಕೋಸಿ ಕಾಲುವೆಗೆ ಆರ್ಥಿಕ ನೆರವು ಮತ್ತು ಐಐಟಿ ಪಾಟ್ನಾದ ಸಾಮರ್ಥ್ಯವನ್ನು ಹೆಚ್ಚಿಸಲು ಬೆಂಬಲ ಸೇರಿದಂತೆ ಹಲವು ಘೋಷಣೆಗಳನ್ನು ಮಾಡಲಾಗಿದೆ. ಇತರೆ ರಾಜ್ಯಗಳನ್ನು ಕಡೆಗಣಿಸಿರುವುದು ವಿಪಕ್ಷಗಳ ಆಕ್ರೋಶಕ್ಕೆ ಕಾರಣವಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅವಧಿ ಮೀರಿದ ಆಹಾರ ಮರುಮಾರಾಟ ಆರೋಪ: ರಿಲಯನ್ಸ್‌, ಬ್ಲಿಂಕಿಟ್‌ ಘಟಕಗಳ ವಿರುದ್ಧ ತನಿಖೆ

ಅವಧಿ ಮೀರಿದ, ಹಾಳಾದ ಹಾಗೂ ಗ್ರಾಹಕರು ತಿರಸ್ಕರಿಸಿದ ಆಹಾರ ಪದಾರ್ಥಗಳನ್ನು ನಾಶಪಡಿಸುವ...

CJPಯ ತಿರಂಗಾ ಯಾತ್ರೆಗೆ ಮುನ್ನ ಬಂಧನ; ಅಭಿಜೀತ್ ದೀಪ್ಕೆಗೆ ಷರತ್ತುಬದ್ಧ ಜಾಮೀನು

ಕನ್ನಾಟ್ ಪ್ಲೇಸ್‌ನಲ್ಲಿ ಆಯೋಜಿಸಲಾಗಿದ್ದ ‘ಲೇಹ್ರಾ ದೋ ತಿರಂಗಾ’ ಪ್ರತಿಭಟನೆಯಲ್ಲಿ ಭಾಗವಹಿಸಲು ತೆರಳುತ್ತಿದ್ದ...

ಲೈಂಗಿಕ ದೌರ್ಜನ್ಯ ಖಂಡಿಸಿ ದೆಹಲಿ ಪೊಲೀಸ್ ಕೇಂದ್ರ ಕಚೇರಿಗೆ ಮಹಿಳಾ ಸಂಘಟನೆಗಳ ಮುತ್ತಿಗೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಮತ್ತು ಮುಖ್ಯ ಚುನಾವಣಾ...

ಪ್ರಜಾಪ್ರಭುತ್ವದ ಗಟ್ಟಿತನವಿರುವುದು ಪ್ರಜೆಗಳಿಗೆ ಸರ್ಕಾರವನ್ನು ಪ್ರಶ್ನಿಸುವ ಸ್ವಾತಂತ್ರ್ಯ ಇರುವಲ್ಲಿ: ಸಿಎಂ ಡಿ.ಕೆ ಶಿವಕುಮಾರ್

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರದ ಹೊಣೆಗಾರಿಕೆಯೇ ಬುನಾದಿಯಾಗಿದೆ. ಎಲ್ಲರೂ ಸರ್ಕಾರಕ್ಕೆ ಕುರುಡಾಗಿ ತಲೆಬಾಗುವುದೇ...