ಬಜೆಟ್‌ 23-24 | 100 ಕೋಟಿ ರೂ. ವೆಚ್ಚದಲ್ಲಿ ಕೃಷಿ ಭಾಗ್ಯ ಯೋಜನೆ ಮರುಜಾರಿ

Date:

Advertisements

ನಮ್ಮ ಸರ್ಕಾರ ಹಿಂದೆ ಜಾರಿಗೊಳಿಸಿದ್ದ ಕೃಷಿ ಭಾಗ್ಯ ಯೋಜನೆಯು ಅತ್ಯಂತ ಜನಪ್ರಿಯ ಹಾಗೂ ಉಪಯುಕ್ತವಾಗಿದ್ದು, ಈ ಯೋಜನೆಯನ್ನು ಮಹಾತ್ಮಾ ಗಾಂಧಿ ಉದ್ಯೋಗ ಖಾತರಿ ಯೋಜನೆಯೊಂದಿಗೆ ಸಂಯೋಜಿಸಿ 100 ಕೋಟಿ ರೂ. ವೆಚ್ಚದಲ್ಲಿ ಮರು ಜಾರಿಗೊಳಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಬಜೆಟ್‌ ಭಾಷಣದಲ್ಲಿ ವಿಷಯ ಪ್ರಸ್ತಾಪಿಸಿ, “ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಮತ್ತು ಕೃಷಿ ಮಾರುಕಟ್ಟೆಗೆ ಸಂಬಂಧಿಸಿದ ವಲಯಗಳಲ್ಲಿ ನಾವೀನ್ಯತೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕೃಷಿ ಉದ್ಯಮಗಳಿಗೆ ಉತ್ತೇಜನ ನೀಡಲು ʻನವೋದ್ಯಮʼ ಎಂಬ ಹೊಸ ಯೋಜನೆಯಡಿ 10 ಕೋಟಿ ರೂ. ಒದಗಿಸಲಾಗುವುದು” ಎಂದರು.

“ರೈತರು ಬೆಳೆದ ಉತ್ಪನ್ನಗಳನ್ನು ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಅನುಕೂಲವಾಗುವಂತೆ ʻನಂದಿನಿʼ ಮಾದರಿಯಲ್ಲಿ ರೈತ ಉತ್ಪನ್ನಗಳಿಗೆ ಏಕೀಕೃತ ಬ್ರ್ಯಾಂಡಿಂಗ್‌ ವ್ಯವಸ್ಥೆ ರೂಪಿಸಲು 10 ಕೋಟಿ ರೂ. ಒದಗಿಸಲಾಗುವುದು. ರೈತ ಉತ್ಪಾದಕ ಸಂಸ್ಥೆಗಳನ್ನು ಬಲಪಡಿಸಲು ಹಿಂದುಳಿದ ತಾಲ್ಲೂಕುಗಳ 100 ರೈತ ಉತ್ಪಾದಕ ಸಂಸ್ಥೆಗಳಿಗೆ ಸಹಕಾರಿ ಮತ್ತು ವಾಣಿಜ್ಯ ಬ್ಯಾಂಕುಗಳು ನೀಡುವ ತಲಾ 20 ಲಕ್ಷ ರೂ. ವರೆಗಿನ ಸಾಲಕ್ಕೆ ಶೇ.4 ರ ಬಡ್ಡಿ ಸಹಾಯಧನ ನೀಡಲಾಗುವುದು” ಎಂದು ತಿಳಿಸಿದರು.

Advertisements

“ರೈತ ಉತ್ಪಾದಕ ಸಂಸ್ಥೆಗಳ ಉತ್ಪನ್ನಗಳನ್ನು ರಫ್ತು ಮಾಡಲು ಅನುಕೂಲವಾಗುವಂತೆ ಗೋದಾಮು, ಶೀತಲಗೃಹ ನಿರ್ಮಾಣ ಮತ್ತು ಇತರ ಮೂಲಸೌಕರ್ಯ ಸೃಜನೆಗೆ ಯೋಜನಾ ವೆಚ್ಚದ ಗರಿಷ್ಠ ಶೇ.20ರಷ್ಟು, ಒಂದು ಕೋಟಿ ರೂ. ಮೀರದಂತೆ Seed Capital ಒದಗಿಸಲಾಗುವುದು. ರಾಜ್ಯದಲ್ಲಿ ಬೆಳೆದ ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ರಫ್ತನ್ನು ಉತ್ತೇಜಿಸಲು ಕೆಪೆಕ್‌ ಸಂಸ್ಥೆಯ ಮೂಲಕ ರೈತ ಉತ್ಪಾದಕ ಸಂಸ್ಥೆಗಳು, ನವೋದ್ಯಮಿಗಳು (Startups) ಮತ್ತು ಕಿರು ಆಹಾರ ಸಂಸ್ಕರಣಾ ಉದ್ದಿಮೆದಾರರಿಗೆ ಬೆಂಬಲ ನೀಡಲು ಐದು ಕೋಟಿ ರೂ. ನೀಡಲಾಗುವುದು” ಎಂದರು.

“ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಕೃಷಿ ಯಂತ್ರೋಪಕರಣಗಳನ್ನು ಬಾಡಿಗೆ ಆಧಾರದಲ್ಲಿ ಒದಗಿಸುವ ಕೃಷಿ ಯಂತ್ರಧಾರೆ ಕೇಂದ್ರಗಳನ್ನು ಸ್ಥಾಪಿಸಲಾಗಿತ್ತು. ಈ ಕೇಂದ್ರಗಳನ್ನು ಇನ್ನಷ್ಟು ಬಲಪಡಿಸಿ, ಇವುಗಳಲ್ಲಿ 300 ಹೈಟೆಕ್‌ ಹಾರ್ವೆಸ್ಟರ್‌ ಹಬ್‌ಗಳನ್ನು ಹಂತಹಂತವಾಗಿ ಸ್ಥಾಪಿಸಲು ಉದ್ದೇಶಿಸಲಾಗಿದ್ದು, 2023-24ನೇ ಸಾಲಿನಲ್ಲಿ 100 ಹಬ್‌ಗಳನ್ನು ಸ್ಥಾಪಿಸಲು 50 ಕೋಟಿ ರೂ. ಒದಗಿಸಲಾಗುವುದು” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X