ಬಜೆಟ್ 23-24 | ಅಲ್ಪಸಂಖ್ಯಾತರಿಗೆ ಘೋಷಿಸಿದ ಯೋಜನೆಗಳೆಷ್ಟು? ಇಲ್ಲಿದೆ ವಿವರ

Date:

Advertisements

ಇಂದು 14ನೇ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ರಾಜ್ಯದ ಅಲ್ಪಸಂಖ್ಯಾತ ಸಮುದಾಯಗಳ ಏಳಿಗೆಗಾಗಿ ಶ್ರಮಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಇದಕ್ಕಾಗಿ ಈ ಸಮುದಾಯದವರಿಗೆ ಶಿಕ್ಷಣ ಹಾಗೂ ಉದ್ಯೋಗದ ಅವಕಾಶಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಕಲ್ಪಿಸುವುದು ಸರ್ಕಾರದ ಆದ್ಯತೆಯಾಗಿದೆ ಎಂದು ತಿಳಿಸಿದ್ದಾರೆ.

ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ ಸಿಎಂ ಘೋಷಿಸಿದ ಯೋಜನೆಗಳೆಷ್ಟು?

  • ಕೇಂದ್ರ ಸರ್ಕಾರ ನಿಲ್ಲಿಸಿದ್ದ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ ಮೆಟ್ರಿಕ್ ಪೂರ್ವ(1ರಿಂದ 8ನೇ ತರಗತಿ) ವಿದ್ಯಾರ್ಥಿ ವೇತನ ಮತ್ತೆ ಆರಂಭ. ಯೋಜನೆಯನ್ನು ಮುಂದುವರೆಸಲು 60 ಕೋಟಿ ರೂ. ಅನುದಾನ
  • ರಾಜ್ಯದ 62 ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು 6ನೇ ತರಗತಿಯಿಂದ 12ನೇ ತರಗತಿಯವರೆಗೆ Integrated ಶಾಲೆಗಳನ್ನಾಗಿ ಉನ್ನತೀಕರಣ. 13,000 ವಿದ್ಯಾರ್ಥಿಗಳಿಗೆ ಅನುಕೂಲ. ಈ ಯೋಜನೆಗೆ 30 ಕೋಟಿ ರೂ. ಅನುದಾನ
  • 50 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ವಿದ್ಯಾರ್ಥಿಗಳ ದಾಖಲಾತಿಯನ್ನು ದ್ವಿಗುಣಗೊಳಿಸುವ ಮೂಲಕ ಹೆಚ್ಚುವರಿಯಾಗಿ 12,500 ವಿದ್ಯಾರ್ಥಿಗಳಿಗೆ ಅವಕಾಶ. ಇದಕ್ಕೆ 23 ಕೋಟಿ ರೂ. ಅನುದಾನ
  • ಹೊಸದಾಗಿ 10 ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಪ್ರಾರಂಭ
  • ಮೌಲಾನಾ ಆಝಾದ್ ಶಾಲೆಗಳ ಶಿಕ್ಷಣದ ಗುಣಮಟ್ಟವನ್ನು ಇನ್ನಷ್ಟು ಹೆಚ್ಚಿಸಲು ಹಾಗೂ ಸ್ವಂತ ಕಟ್ಟಡ ಇಲ್ಲದೇ ಇರುವ ಶಾಲೆಗಳಿಗೆ ಅಗತ್ಯ ಮೂಲ ಸೌಕರ್ಯ
  • ಅಲ್ಪಸಂಖ್ಯಾತ ವಿದ್ಯಾರ್ಥಿಗಳ ವ್ಯಾಸಂಗಕ್ಕಾಗಿ ಅರಿವು ಶೈಕ್ಷಣಿಕ ಸಾಲ ಯೋಜನೆ ಅಡಿಯಲ್ಲಿ ಸಿ.ಇ.ಟಿ ಮೂಲಕ ಪ್ರವೇಶ ಪಡೆದ ಇಂಜಿನಿಯರಿಂಗ್, ವೈದ್ಯಕೀಯ ಮುಂತಾದ 28 ವೃತ್ತಿಪರ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡಲು ಶೇ.2 ರ ಬಡ್ಡಿ ದರದಲ್ಲಿ ವಾರ್ಷಿಕ ಒಂದು ಲಕ್ಷ ರೂ.ಗಳವರೆಗೆ ಸಾಲ. ಪ್ರಸಕ್ತ ಸಾಲಿನಲ್ಲಿ 75 ಕೋಟಿ ರೂ.ಮೀಸಲು.
  • ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳ ಕನ್ನಡ ಮತ್ತು ಆಂಗ್ಲ ಭಾಷಾ ಜ್ಞಾನವನ್ನು ಉತ್ತಮಪಡಿಸುವ ಉದ್ದೇಶದಿಂದ ರಾಜ್ಯದ ಎಲ್ಲಾ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಭಾಷಾ ಪ್ರಯೋಗಾಲಯ. ಐದು ಕೋಟಿ ರೂ.ಗಳ ವೆಚ್ಚದಲ್ಲಿ ಸ್ಥಾಪನೆ.
  • ರಾಮನಗರ, ಬೆಳಗಾವಿ, ದಾವಣಗೆರೆ, ಕಲಬುರಗಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅಲ್ಪಸಂಖ್ಯಾತ ಯುವಜನರಿಗೆ ಕೌಶಲ್ಯ ತರಬೇತಿ. ನಾಲ್ಕು ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭ.
  • ಅಲ್ಪಸಂಖ್ಯಾತರ ಪದವಿ ಪೂರ್ವ ವಸತಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರಥಮ ವರ್ಷದಿಂದಲೇ NEET, JEE, CET ಹಾಗೂ ಇತರೆ ಪ್ರವೇಶ ಪರೀಕ್ಷೆಗಳ ತಯಾರಿಗಾಗಿ ಪ್ರತಿಷ್ಠಿತ ಸಂಸ್ಥೆಗಳಿಂದ ಎರಡು ವರ್ಷಗಳ ತರಬೇತಿ. ಎಂಟು ಕೋಟಿ ರೂ.ಗಳ ಅನುದಾನ
  • ಬೆಂಗಳೂರು ನಗರದಲ್ಲಿ ನಿರ್ಮಿಸಿರುವ ಹಜ಼್ ಭವನದಲ್ಲಿ ಅಲ್ಪಸಂಖ್ಯಾತರ ಯುವ ಜನರಿಗೆ 10 ತಿಂಗಳ ವಸತಿಸಹಿತ IAS/KAS ಮತ್ತು ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ. ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಪ್ರಾರಂಭ
  • ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿದೇಶಿ ವಿವಿಗಳಲ್ಲಿ ಪದವಿ ಮತ್ತು ಸ್ನಾತಕೋತ್ತರ ವ್ಯಾಸಂಗ ಮಾಡಲು ಅನುಕೂಲವಾಗುವಂತೆ ಶೂನ್ಯ ಬಡ್ಡಿ ದರದಲ್ಲಿ ಪ್ರತಿ ವಿದ್ಯಾರ್ಥಿಗೆ 20 ಲಕ್ಷ ರೂ. ಸಾಲ ಸೌಲಭ್ಯ
  • ಅಲ್ಪಸಂಖ್ಯಾತ ಸಮುದಾಯಗಳಿಗೆ ಸೇರಿದ 10,000 ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗ ಅವಕಾಶವನ್ನು ಕಲ್ಪಿಸುವ ಸಲುವಾಗಿ ಇವರುಗಳಿಗೆ ಬ್ಯಾಂಕ್‌ಗಳಿಂದ ಪಡೆಯುವ ಸಾಲ ಮೊತ್ತದ ಶೇ. 20ರಷ್ಟು ಅಥವಾ ಗರಿಷ್ಠ ಒಂದು ಲಕ್ಷ ರೂ.ವರೆಗೆ ಸಹಾಯಧನ
  • ʻಸ್ವಾವಲಂಬಿ ಸಾರಥಿʼ ಯೋಜನೆಯಡಿ, ಅಲ್ಪಸಂಖ್ಯಾತ ನಿರುದ್ಯೋಗಿ ಯುವಜನರು ನಾಲ್ಕು ಚಕ್ರಗಳ ವಾಹನ ಖರೀದಿಗೆ ಪಡೆಯುವ ಸಾಲಕ್ಕೆ ಶೇ.50ರಷ್ಟು, ಗರಿಷ್ಠ 3 ಲಕ್ಷ ರೂ.ಗಳ ಸಹಾಯಧನದ ಮೂಲಕ ಪ್ರೋತ್ಸಾಹ.
  • ಅಪೂರ್ಣಗೊಂಡಿರುವ 126 ಶಾದಿ ಮಹಲ್ ಮತ್ತು ಸಮುದಾಯ ಭವನಗಳ ನಿರ್ಮಾಣ ಕಾರ್ಯ. 54 ಕೋಟಿ ರೂ. ವೆಚ್ಚದಲ್ಲಿ ಪೂರ್ಣ
  • ಹಿಂದೂಯೇತರ ಧಾರ್ಮಿಕ ಸಂಸ್ಥೆಗಳಿಗೆ ಕರ್ನಾಟಕ ಇನಾಮ್ ರದ್ದಿಯಾತಿ ಅಧಿನಿಯಮದನ್ವಯ ನೀಡಲಾಗುತ್ತಿರುವ ತಸ್ತಿಕ್ ಮೊತ್ತ 48,000 ರೂ.ಗಳಿಂದ 60,000 ರೂ.ಗಳಿಗೆ ಹೆಚ್ಚಳ. ತಸ್ತಿಕ್ ಪಡೆಯುತ್ತಿರುವ 868 ಸಂಸ್ಥೆಗಳಿಗೆ ಅನುಕೂಲ.
  • ಮುಖ್ಯಮಂತ್ರಿಗಳ ವಿಶೇಷ ಅಭಿವೃದ್ಧಿ ಯೋಜನೆ ಮತ್ತು ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿ ಯೋಜನೆಗಳಡಿ ವಿವಿಧ ಕಾರ್ಯಕ್ರಮಗಳಿಗೆ ಪ್ರಸಕ್ತ ಸಾಲಿನಲ್ಲಿ 36೦ ಕೋಟಿ ರೂ.ಗಳನ್ನು ಮೀಸಲು.
  • ಜೈನರ ಪ್ರಮುಖ ಪುಣ್ಯಕ್ಷೇತ್ರಗಳ ಅಭಿವೃದ್ಧಿಗಾಗಿ 25 ಕೋಟಿ ರೂ. ಅನುದಾನ
  • ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗಾಗಿ ಕರ್ನಾಟಕ ಕ್ರಿಶ್ಚಿಯನ್ ಅಭಿವೃದ್ಧಿ ನಿಗಮ ಸ್ಥಾಪನೆ. ಪ್ರಸಕ್ತ ಸಾಲಿನಲ್ಲಿ 100 ಕೋಟಿ ರೂ. ಅನುದಾನ
  • ರಾಜ್ಯದಲ್ಲಿರುವ ವಕ್ಛ್ ಆಸ್ತಿಗಳ ಸಂರಕ್ಷಣೆ ಮತ್ತು ಅಭಿವೃದ್ದಿಗಾಗಿ 2023-24ನೇ ಸಾಲಿನಲ್ಲಿ 50 ಕೋಟಿ ರೂ.
  • ಹಲಸೂರಿನಲ್ಲಿರುವ ಗುರುದ್ವಾರದ ಅಭಿವೃದ್ಧಿಗೆ 25 ಕೋಟಿ ರೂ. ಅನುದಾನ. ಅದೇ ಮಾದರಿಯಲ್ಲಿ ಮೈಸೂರು, ಕಲಬುರಗಿ ಮತ್ತು ಹುಬ್ಬಳ್ಳಿಯಲ್ಲಿರುವ ಗುರುದ್ವಾರಗಳ ಅಭಿವೃದ್ಧಿಗೆ ಐದು ಕೋಟಿ ರೂ.
  • ಗುರುದ್ವಾರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಗ್ರಂಥಿಗಳಿಗೆ ಅವರ ದೈನಂದಿನ ಜೀವನ ನಿರ್ವಹಣೆಗೆ ಅನುಕೂಲವಾಗುವಂತೆ ಮಾಸಿಕ ಗೌರವ ಧನ
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

Download Eedina App Android / iOS

X